ಎಲ್ಲರೂ ಒಗ್ಗಟ್ಟಿನಿಂದ ಇದ್ದರೆ ಸಮಾಜ ಅಭಿವೃದ್ಧಿ

KannadaprabhaNewsNetwork |  
Published : Mar 29, 2025, 12:36 AM IST
ಗುಬ್ಬಿಪಟ್ಟಣದ ಎ ವಿ ಕೆ ಸಮುದಾಯ ಭವನದಲ್ಲಿ ಅಗ್ನಿವಂಶ ಕ್ಷತ್ರಿಯ ತಿಗಳ ಸಮಾಜದ ಅಗ್ನಿ ಬನ್ನಿರಾಯ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಎಸ್ ಆರ್ ಶ್ರೀನಿವಾಸ್. | Kannada Prabha

ಸಾರಾಂಶ

ತಿಗಳ ಸಮಾಜ ಶೈಕ್ಷಣಿಕವಾಗಿ, ರಾಜಕೀಯವಾಗಿ ಅಭಿವೃದ್ಧಿ ಹೊಂದುವ ಮೂಲಕ ರಾಜಕೀಯವಾಗಿ ಪ್ರಗತಿ ಹೊಂದಬೇಕು ಎಂದು ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಗುಬ್ಬಿ

ತಿಗಳ ಸಮಾಜ ಶೈಕ್ಷಣಿಕವಾಗಿ, ರಾಜಕೀಯವಾಗಿ ಅಭಿವೃದ್ಧಿ ಹೊಂದುವ ಮೂಲಕ ರಾಜಕೀಯವಾಗಿ ಪ್ರಗತಿ ಹೊಂದಬೇಕು ಎಂದು ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದರು.

ಪಟ್ಟಣದ ಎ ವಿ ಕೆ ಸಮುದಾಯ ಭವನದಲ್ಲಿ ಅಗ್ನಿವಂಶ ಕ್ಷತ್ರಿಯ ತಿಗಳ ಸಮಾಜದ ಅಗ್ನಿ ಬನ್ನಿರಾಯ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಯಾದವ ಹಾಗೂ ತಿಗಳ ಸಮುದಾಯಕ್ಕೆ ರಾಜಕೀಯದಲ್ಲಿ ಪ್ರಾಧಾನ್ಯತೆ ನೀಡಬೇಕೆಂದು ಹಲವು ಬಾರಿ ಒತ್ತಾಯ ಮಾಡಿದ್ದೇನೆ. ಇನ್ನೂ ಅತ್ಯಂತ ಕಷ್ಟಪಟ್ಟು ದುಡಿಯುವಂತಹ ಸಮುದಾಯವೆಂದರೆ ಅದು ತಿಗಳ ಸಮುದಾಯವಾಗಿದ್ದು ತಾವೆಲ್ಲರೂ ಒಗ್ಗಟ್ಟಿನಿಂದ ಇದ್ದಾಗ ಖಂಡಿತವಾಗಿ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ. ಈಗಾಗಲೇ ನಿಮ್ಮ ಸಮುದಾಯಕ್ಕೆ ಅವಶ್ಯಕತೆ ಇರುವ ಎಲ್ಲಾ ರೀತಿಯ ಸಹಕಾರವನ್ನು ನಾನು ನೀಡಿದ್ದು ಮುಂದಿನ ದಿನದಲ್ಲಿಯೂ ನೀಡುತ್ತೇನೆ ನಿಮ್ಮ ಮಕ್ಕಳಿಗೆ ಹೆಚ್ಚಿನ ರೀತಿ ಶಿಕ್ಷಣವನ್ನು ನೀಡಿದಾಗ ಮನೆ ಹಾಗೂ ತಿಗಳ ಸಮಾಜ ತಮ್ಮನ್ನು ಹೆಚ್ಚಾಗಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು ಶ್ರಮಿಕ ವರ್ಗವಾಗಿದೆ. ಸಂಕಲ್ಪ ಮಾಡಿದ ಕೆಲಸವನ್ನು ಪಟ್ಟುಬಿಡದೆ ಶ್ರದ್ಧೆಯಿಂದ ಮಾಡುತ್ತಾರೆ. ತಿಗಳ ಸಮಾಜ ಸಮುದಾಯವನ್ನು ಸಂಘಟಿಸುವುದರ ಜೊತೆಗೆ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಶೈಕ್ಷಣಿಕ ಪ್ರಗತಿಗೆ ಕಾರಣರಾಗಬೇಕು. ಇನ್ನೂ ತಿಗಳ ಸಮಾಜದ ಸಾಂಸ್ಕೃತಿಕ ಭವನ‌ ನಿರ್ಮಾಣಕ್ಕೆ 25 ಲಕ್ಷ ರೂಪಾಯಿಗಳ ಅನುದಾನವನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಸಂಘದ ಅಧ್ಯಕ್ಷ ಹುಂಡೆ ರಾಮಣ್ಣ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿಯೇ ಬಹಳ ವಿಶೇಷವಾಗಿ ಐದು ವರ್ಷಗಳಿಂದ ಅಗ್ನಿ ಬನ್ನಿರಾಯ ಜಯಂತಿ ಕಾರ್ಯಕ್ರಮವನ್ನು ಮಾಡುತ್ತಿದ್ದು ನಮ್ಮೆಲ್ಲ ಸಮುದಾಯ ಎಲ್ಲೆಲ್ಲಿ ಇದೆಯೋ ಆ ಎಲ್ಲಾ ಕಡೆ ನಾವೇ ಮಾರ್ಗದರ್ಶಕರಾಗಿದ್ದೇವೆ ಎಂಬ ಹೆಮ್ಮೆ ನಮಗಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಚನ್ನಬಸವೇಶ್ವರ ಸ್ವಾಮಿ ದೇವಾಲಯದ ಆವರಣದಿಂದ ಬನ್ನಿರಾಯಸ್ವಾಮಿಯವರನ್ನು ಬೆಳ್ಳಿ ರಥದಲ್ಲಿ 108 ಕುಂಭ ಗಳೊಂದಿಗೆ ಮೆರವಣಿಗೆ ಮೂಲಕ ಕರೆ ತರಲಾಯಿತು.

ಉಂಡೆ ರಾಮಣ್ಣ, ನಂಜೇಗೌಡ, ಜಿ ಎನ್ ಬೆಟ್ಟಸ್ವಾಮಿ, ಬಿ ಎಸ್ ನಾಗರಾಜು, ಕಳ್ಳಿಪಾಳ್ಯ ಲೋಕೇಶ್ ಹೊನ್ನಗಿರಿಗೌಡ, ಸದಸ್ಯರಾದ ಕೃಷ್ಣಮೂರ್ತಿ, ಜಯ ಲಕ್ಷ್ಮಿ, ಲೋಕೇಶ್ ಬಾಬು, ಬಂಡಿ ಮಲ್ಲಪ್ಪ ಬಲರಾಮಣ್ಣ, ನಂಜೇಗೌಡ ಕೋಳಿ ಶಿವಣ್ಣ, ಸೇರಿದಂತೆಗಳ ಸಮುದಾಯದ ಹಲವು ಮುಖಂಡರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''