
ಕನ್ನಡಪ್ರಭ ವಾರ್ತೆ ಸವಣೂರು
ಪಟ್ಟಣದ ಚನ್ನಬಸವೇಶ್ವರ ಮಂಗಲ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ಬೇಡ ಜಂಗಮ ಸಮಾಜದ ದಶಮಾನೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಇತಿಹಾಸ ಓದಿದರೇ ಸಾಲದು, ದುಶ್ಚಟಗಳ ದಾರಿ ಹಿಡಿದರೇ ನಮ್ಮ ವ್ಯಕ್ತಿತ್ವಕ್ಕೆ ಅಲ್ಲದೆ ನಮಗೆ ಸಂಸ್ಕಾರ ನೀಡಿದ ವ್ಯಕ್ತಿಗಳ ಹೆಸರಿಗೆ ಧಕ್ಕೆ ಬರುತ್ತದೆ. ಅದನ್ನು ಗಮನದಲ್ಲಿಟ್ಟುಕೊಂಡು ಉತ್ತಮ ವ್ಯಕ್ತಿಗಳಾಗಿ ಸಮಾಜವನ್ನು ಆದರ್ಶವನ್ನಾಗಿ ಮಾಡಬೇಕು. ದುಶ್ಚಟಗಳಿಂದ ದುರುಳಿದುಕೊಂಡಾಗ ಉತ್ತಮ ವ್ಯಕ್ತಿಯಾಗಿ ಹೊರಹೊಮ್ಮಲು ಸಾಧ್ಯ. ಸಾಧನೆ ಮಾಡಿದ ವ್ಯಕ್ತಿಯನ್ನು ಸಮಾಜ ಗುರುತಿಸುತ್ತದೆ. ಸಮಾಜ ಗುರುತಿಸುವಂತ ಕೆಲಸವನ್ನು ಪರಿಶ್ರಮಪಟ್ಟಾಗ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದರು.ಶಾಸಕ ಯಾಸೀರಅಹ್ಮದಖಾನ್ ಪಠಾಣ ಮಾತನಾಡಿ, ಜಂಗಮ ಸಮಾಜದ ಸಭಾಭವನ ನಿರ್ಮಾಣಕ್ಕೆ ₹೧ ಕೋಟಿ ಅನುದಾನ ನೀಡುತ್ತೇನೆ ಎಂದು ಭರವಸೆ ನೀಡಿದರು.ಜಂಗಮ ಸಮಾಜ ಬಾಂಧವರು ಹೆಚ್ಚಿನ ಮತಗಳನ್ನು ನೀಡುವ ಮೂಲಕ ಶಾಸಕನನ್ನಾಗಿ ಆಯ್ಕೆ ಮಾಡಿದ ಸಮಾಜದ ಋಣ ನನ್ನ ಮೇಲಿದೆ. ಅದನ್ನು ತೀರಿಸಲು ಕ್ಷೇತ್ರದ ಎಲ್ಲ ಮಠ-ಮಾನ್ಯಗಳ ಅಭಿವೃದ್ಧಿಗೆ ಅನುದಾನ ಹೆಚ್ಚಿನ ಪ್ರಮಾಣದಲ್ಲಿ ನೀಡುವ ಮೂಲಕ ಋಣ ತೀರಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಎಂ.ಎಂ.ಹಿರೇಮಠ ಮಾತನಾಡಿ, ೨೦೧೭ರಲ್ಲಿ ಎಚ್.ಆಂಜನೇಯವರು ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಸಂದರ್ಭದಲ್ಲಿ ಬೇಡ ಜಂಗಮ ಪ್ರಮಾಣ ಪತ್ರ ಪಡೆದಿದ್ದ ವಿದ್ಯಾರ್ಥಿ ಚೇತನ ಹಿರೇಮಠಗೆ ವಿದೇಶದಲ್ಲಿ ಶಿಕ್ಷಣ ಪಡೆಯುವುದಕ್ಕಾಗಿ ಸರ್ಕಾರದಿಂದ ₹೪೮ ಲಕ್ಷ ಶಿಷ್ಯ ವೇತನ ನೀಡಿದ್ದರು. ಯಾವ ಆಧಾರದ ಮೇಲೆ ಹಣ ನೀಡಿದ್ದೀರಿ?. ನಾವು ಬೇಡ ಜಂಗಮರು ಅಲ್ಲ ಎನ್ನುವಂತದ್ದನ್ನು ಯಾವ ರೀತಿಯಲ್ಲಿ ಸಾಬೀತು ಮಾಡುತ್ತೀರಿ?. ನಾವೂ ನೋಡುತ್ತೇವೆ ಎಂದು ಮಾಜಿ ಸಚಿವರಿಗೆ ಬಹಿರಂಗ ಸವಾಲು ಹಾಕಿದರು.
ಕಾರ್ಯಕ್ರಮದಲ್ಲಿ ಜಂಗಮ ಸಮಾಜದ ಸಾಧಕರಿಗೆ ಬೇಡ ಜಂಗಮ ಸೇವಾ ಸಂಸ್ಥೆಯಿಂದ ಸನ್ಮಾನಿಸಿ, ಗೌರವಿಸಲಾಯಿತು.
-ಎಸ್.ಬಿ.ವಸ್ತ್ರಮಠ,
ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ಜೀವಮಾನ ಸಾಧನೆಯ ಸುವರ್ಣ ಕನ್ನಡಿಗ-2025ರ ಪ್ರಶಸ್ತಿ ಪುರಸ್ಕೃತರು.