ಸಮಾಜಕ್ಕೆ ಸೃಜನಶೀಲ ಕ್ರಿಯಾಶೀಲ ಶಿಕ್ಷಕ ಅವಶ್ಯಕ

KannadaprabhaNewsNetwork |  
Published : Jun 09, 2024, 01:33 AM IST
ಗದಗ ಅರಟಾಳ ರುದ್ರಗೌಡ ಡಿ.ಇಡಿ ಕಾಲೇಜಿನಲ್ಲಿ 2023-24ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಸರಸ್ವತಿ ಪೂಜಾ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ಶಾಲಾ ಶಿಕ್ಷಕರಾಗುವ ಡಿಇಡಿ ಪ್ರಶಿಕ್ಷಣಾರ್ಥಿಗಳು ಮಕ್ಕಳ ಮನಸ್ಸನ್ನು ಅರಿತುಕೊಂಡು ಅವರೊಡನೆ ಮಕ್ಕಳಾಗಿ ಬೆರೆತಾಗ ಮಾತ್ರ ಒಳ್ಳೆಯ ಶಿಕ್ಷಕರಾಗಲು ಸಾಧ್ಯ.

ಗದಗ: ಶಿಕ್ಷಕ ವೃತ್ತಿ ಎಲ್ಲ ವೃತ್ತಿಗಳ ತಾಯಿ ಬೇರಾಗಿದ್ದು, ಭಾವಿ ಶಿಕ್ಷಕರಾಗುವ ಪ್ರಶಿಕ್ಷಣಾರ್ಥಿಗಳು ಶಿಕ್ಷಕ ವೃತ್ತಿಯ ಪಾವಿತ್ರ್ಯತೆ ಅರಿಯಬೇಕು. ಸಮಾಜಕ್ಕೆ ಸೃಜನಶೀಲ-ಕ್ರಿಯಾಶೀಲ ಶಿಕ್ಷಕರ ಅವಶ್ಯಕತೆ ಇದೆ ಎಂದು ಪ್ರಾ. ಎಸ್.ಎಚ್. ರಾಮದುರ್ಗ ಹೇಳಿದರು.

ಅವರು ನಗರದ ಅರಟಾಳ ರುದ್ರಗೌಡ ಡಿ.ಇಡಿ ಕಾಲೇಜಿನಲ್ಲಿ 2023-24ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಸರಸ್ವತಿ ಪೂಜಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿಶೇಷವಾಗಿ ಪ್ರಾಥಮಿಕ ಶಾಲಾ ಶಿಕ್ಷಕರಾಗುವ ಡಿಇಡಿ ಪ್ರಶಿಕ್ಷಣಾರ್ಥಿಗಳು ಮಕ್ಕಳ ಮನಸ್ಸನ್ನು ಅರಿತುಕೊಂಡು ಅವರೊಡನೆ ಮಕ್ಕಳಾಗಿ ಬೆರೆತಾಗ ಮಾತ್ರ ಒಳ್ಳೆಯ ಶಿಕ್ಷಕರಾಗಲು ಸಾಧ್ಯ. ವಿದ್ಯಾರ್ಥಿಗಳ ಸರ್ವಾಂಗೀಣ ವ್ಯಕ್ತಿತ್ವ ನಿರ್ಮಾಣವಾಗುವಂತೆ ಶಿಕ್ಷಕ ಅವರನ್ನು ರೂಪುಗೊಳಿಸಬೇಕಿದ್ದು, ಬೋಧನೆಯು ಕೇವಲ ಪಠ್ಯಕ್ರಮಕ್ಕೆ ಸೀಮಿತವಾಗದೇ ವ್ಯಕ್ತಿತ್ವದ ಮೇಲೆ ಪರಿಣಾಮ ಬೀರಬೇಕು ಎಂದರು.

ಬಸವೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಎಂ.ಕೆ. ಬಂಡಿಹಾಳ ಮಾತನಾಡಿ, ಶಿಕ್ಷಕ ವೃತ್ತಿಯು ಕೇವಲ ವೇತನ ಪಡೆಯುವ ಕೆಲಸವಾಗದೇ ಮಹತ್ವದ ಹೊಣೆಗಾರಿಕೆ ಇರುವ ಹುದ್ದೆಯಾಗಿದ್ದು, ಪ್ರಶಿಕ್ಷಣಾರ್ಥಿಗಳು ತಾವು ಮೊದಲು ಉತ್ತಮ ಚಾರಿತ್ರ್ಯ ಬೆಳೆಸಿಕೊಳ್ಳುವುದರ ಜತೆಗೆ ವಿದ್ಯಾರ್ಥಿಗಳ ಭವಿಷ್ಯ ಬೆಳಗಬೇಕು ಎಂದರು.

ಬಸವೇಶ್ವರ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಶಿವಾನಂದ ಗಿಡ್ಡಕೆಂಚಣ್ಣವರ ಮಾತನಾಡಿ, ಬಿಇಡಿ-ಡಿಇಡಿ ಶಿಕ್ಷಣ ಹುದ್ದೆ ಪಡೆದು ಸರ್ಕಾರಿ ಅಥವಾ ನಿರ್ದಿಷ್ಠ ಕೆಲಸಕ್ಕಾಗಿ ಕಾಯುತ್ತಾ ಕೂರುವ ಬದಲು ನಿರಂತರವಾಗಿ ಬೋಧನೆಯಲ್ಲಿ ತೊಡಗುವ ಮೂಲಕ ಶಿಕ್ಷಕರು ತಮ್ಮ ವೃತ್ತಿಗೆ ಸಮರ್ಥವಾಗಬೇಕು. ಕಲಿಯುವಿಕೆ ನಿರಂತರ ಪ್ರಕ್ರಿಯೆಯಾಗಿದ್ದು, ಶಿಕ್ಷಕರು ತಮ್ಮ ವೃತ್ತಿಯಲ್ಲಿ ಸತತವಾಗಿ ಹೊಸದನ್ನು ಕಲಿಯಬೇಕು ಎಂದರು.

ಈ ಸಂದರ್ಭದಲ್ಲಿ ಕಾಲೇಜಿನ ಸಿಬ್ಬಂದಿಗಳಾದ ಅಶೋಕ ಇರಕಲ್, ಎಸ್.ಎಚ್. ಬಚನಳ್ಳಿ ಹಾಗೂ ಪ್ರಥಮ ಹಾಗೂ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಇದ್ದರು.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಕಡಿಮೆ ಗುಣದ ಔಷಧಿ ಎರಡೇ ದಿನಕ್ಕೇ ಮಾರುಕಟ್ಟೆಯಿಂದ ವಾಪಸ್‌: ಸಚಿವ