ಸಮಾಜಕ್ಕೆ ಹಿರಿಯರ ಮಾರ್ಗದರ್ಶನ ಅಗತ್ಯ: ವಿ.ಗಣೇಶ್‌

KannadaprabhaNewsNetwork |  
Published : Sep 22, 2026, 01:30 AM IST
ವಿ.ಗಣೇಶ್ ಉದ್ಘಾಟಿಸಿದರು | Kannada Prabha

ಸಾರಾಂಶ

ಹಿರಿಯರ ಮಾರ್ಗದರ್ಶನವಿದ್ದರೆ ಸುಸ್ಥಿರ ಸಮಾಜ ನಿರ್ಮಾಣವಾಗುತ್ತದೆ ಎಂದು ಸಾಹಿತಿ ವಿ.ಗಣೇಶ್ ಅಭಿಪ್ರಾಯಪಟ್ಟರು. ವಿಶ್ವಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಸೋಮವಾರ ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಸಾಗರ ಶಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹಿರಿಯ ನಾಗರಿಕರ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಸಾಗರ

ಹಿರಿಯರ ಮಾರ್ಗದರ್ಶನವಿದ್ದರೆ ಸುಸ್ಥಿರ ಸಮಾಜ ನಿರ್ಮಾಣವಾಗುತ್ತದೆ ಎಂದು ಸಾಹಿತಿ ವಿ.ಗಣೇಶ್ ಅಭಿಪ್ರಾಯಪಟ್ಟರು. ವಿಶ್ವಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಸೋಮವಾರ ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಸಾಗರ ಶಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹಿರಿಯ ನಾಗರಿಕರ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಅವರು, 60ರ ನಂತರ ತಾವು ವೃದ್ದರು ಎಂದು ಮನೆಯಲ್ಲಿ ಕುಳಿತುಕೊಳ್ಳದೆ ಸಿಗುವ ಅವಕಾಶಗಳನ್ನು ಬಳಸಿಕೊಂಡು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಕಲೆ, ಸಾಹಿತ್ಯ, ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮನಸ್ಸು ಉಲ್ಲಾಸಭರಿತವಾಗಿರುತ್ತದೆ ಎಂದರು. ಅರುವತ್ತರ ನಂತರ ಅರಳು ಮರುಳು ಎಂಬುದು ಸುಳ್ಳು. ಅರವತ್ತರ ನಂತರ ಮರಳಿ ಅರಳುವುದೇ ಸತ್ಯ. ಹಿರಿಯರನ್ನು ಕಡೆಗಣ್ಣಿನಿಂದ ನೋಡುವ ಸಂಸ್ಕೃತಿ ಸಮಾಜಕ್ಕೆ ಮಾರಕ. ನಿವೃತ್ತ ನೌಕರರ ಸಂಘವು ಅನೇಕ ವರ್ಷಗಳಿಂದ ಮಾದರಿಯಾಗಿ ಇಂತಹ ಕ್ರೀಡಾ ಚಟುವಟಿಕೆ ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದರು.ಸಂಘದ ಅಧ್ಯಕ್ಷ ಉಮೇಶ್ ಹಿರೇನೆಲ್ಲೂರು ಅಧ್ಯಕ್ಷತೆ ವಹಿಸಿ ಮಾತನಾಡಿ, ನಿವೃತ್ತ ನೌಕರ ಸಂಘದ ಸಾಗರ ಶಾಖೆಯು ರಾಜ್ಯದಲ್ಲಿಯೆ ಮಾದರಿಯಾಗುವ ರೀತಿಯಲ್ಲಿ ಕ್ರೀಡಾ ಸಾಂಸ್ಕೃತಿಕ ಚಟುವಟಿಕೆಯನ್ನು ಪ್ರತಿವರ್ಷ ಆಯೋಜಿಸುತ್ತಿದೆ. ವಿಶ್ವಹಿರಿಯ ನಾಗರಿಕರ ದಿನಾಚರಣೆಗೆ ಸರ್ಕಾರ ಪ್ರತಿ ಜಿಲ್ಲೆಗೆ 1 ಲಕ್ಷ ರು. ಅನುದಾನ ನೀಡುತ್ತದೆ. ಅದರೆ ತಾಲೂಕು ಕೇಂದ್ರಗಳಲ್ಲಿ ಆಯೋಜಿಸುವ ಕಾರ್ಯಕ್ರಮಗಳಿಗೆ ಅನುದಾನ ನೀಡದೆ ಮಲತಾಯಿ ಧೋರಣೆ ನಡೆಸುತ್ತಿದೆ. ಮುಂದಿನ ದಿನಗಳಲ್ಲಿ ಸರ್ಕಾರ ತಾಲೂಕು ಕೇಂದ್ರಗಳಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಆರ್ಥಿಕ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.ಸಂಘದ ಗೌರವಾಧ್ಯಕ್ಷ ಎಸ್.ಬಸವರಾಜ್, ರಾಜ್ಯ ಸಂಘಟನಾ ಕಾರ್ಯದರ್ಶಿ ಮ.ಸ.ನಂಜುಂಡಸ್ವಾಮಿ, ಪ್ರಮುಖರಾದ ಸೋಮರಾಜ್, ಎಚ್.ಜಿ.ಸುಬ್ರಹ್ಮಣ್ಯ ಭಟ್, ಸಿದ್ದಾನಾಯ್ಕ್, ದಮಯಂತಿ, ಮರಳುಸಿದ್ದಪ್ಪ ಇನ್ನಿತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಡ್ಡಾಯ..ವೈಜ್ಞಾನಿಕ ಪ್ರಸ್ತಾವನೆ ಸಲ್ಲಿಕೆಯಲ್ಲಿ ರಾಜ್ಯ ಹಿಂದೆ: ಡಾ.ಧನಂಜಯ ಸರ್ಜಿ
ನವೀನ ಮಾದರಿಯ ಕೃಷಿ ಪದ್ಧತಿಯಿಂದ ಹೆಚ್ಚು ಲಾಭ: ಡಾ. ತುಷಾರ್ ಕಾಂತಿ ಬೆಹರಾ