ಕನ್ನಡಪ್ರಭ ವಾರ್ತೆ ಉಡುಪಿ
ಬುಧವಾರ ಇಲ್ಲಿನ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆದ ಶ್ರೀ ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಹನ್ನೆರಡನೇ ಶತಮಾನದಲ್ಲಿ ಶರಣರು ಭಕ್ತಿ ಮತ್ತು ಜ್ಞಾನದ ಸಂಪಾದನೆಗಾಗಿ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಸಾಗಿ ತಮ್ಮ ವಿಚಾರಗಳ ಮೂಲಕ ಮತ್ತು ವಚನಗಳ ಮೂಲಕ ಜನರಿಗೆ ಜೀವನದ ಸಂದೇಶವನ್ನು ಸಾರುತ್ತಿದ್ದರು. ಅಂತಹ ಶರಣರ ಪುಸ್ತಕಗಳನ್ನು, ವಚನಗಳನ್ನು ಹೆಚ್ಚಾಗಿ ಓದಿಕೊಂಡು ಮನದಟ್ಟು ಮಾಡಿಕೊಂಡರೆ ನಮ್ಮ ಮನಸ್ಥಿತಿ ಸುಧಾರಣೆಗೊಳಿಸಬಹುದು ಎಂದರು.
ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ನಿರಂಜನ ಯು.ಸಿ, ರೇಣುಕಾಚಾರ್ಯರು ನಡೆದು ಬಂದ ಜೀವನದ ಹಾದಿ, ಅವರ ವ್ಯಕ್ತಿತ್ವ ಮತ್ತು ಸಮಾಜಕ್ಕೆ ಅವರು ನೀಡಿದ ಕೊಡುಗೆಗಳ ಕುರಿತಾಗಿ ವಿಶೇಷ ಉಪನ್ಯಾಸ ನೀದರು.ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ.ನಿತ್ಯಾನಂದ ವಿ.ಗಾಂವ್ಕರ್ ಮಾತನಾಡಿ, ಶರಣರ ಹಾಗೂ ಮಹಾನುಭವರ ಕೊಡುಗೆಗಳನ್ನು ವಿದ್ಯಾರ್ಥಿಗಳು ಪ್ರೇರಣೆಯಾಗಿಟ್ಟುಕೊಂಡರೆ ಬದುಕಲ್ಲಿ ಯಶಸ್ಸು ಕಾಣಬಹುದು ಹಾಗೂ ಬದುಕನ್ನು ಕಟ್ಟಿಕೊಳ್ಳಬಹುದು ಎಂದರು.
ವೀರಶೈವ ಸಮುದಾಯದ ಸದಸ್ಯರು, ಕಾಲೇಜಿನ ಉಪನ್ಯಾಸಕ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ಕನ್ನಡ ವಿಭಾಗದ ಉಪನ್ಯಾಸಕಿ ಸರಿತಾ ನಿರೂಪಿಸಿ, ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ರತ್ನಮಾಲಾ ವಂದಿಸಿದರು.