ಮಹಿಳೆಯರು ಮುನ್ನೆಲೆಗೆ ಬಂದರೆ ಸಮಾಜ ಏಳಿಗೆ: ಪೊನ್ನಣ್ಣ

KannadaprabhaNewsNetwork |  
Published : Mar 09, 2026, 02:45 AM IST
ಚಿತ್ರ :  8ಎಂಡಿಕೆ3 : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ. | Kannada Prabha

ಸಾರಾಂಶ

ಮಹಿಳೆಯರು ಸಮಾಜದ ಮುನ್ನೆಲೆಗೆ ಬಂದರೆ ಸಮಾಜದ ಏಳಿಗೆ ಸಾಧ್ಯ ಎಂದು ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅಭಿಪ್ರಾಯಪಟ್ಟರು.

ಕನ್ನಡಪ್ರಭ ವಾರ್ತೆ ಶ್ರೀಮಂಗಲ

ಮಹಿಳೆಯರು ಸಮಾಜದ ಮುನ್ನೆಲೆಗೆ ಬಂದರೆ ಸಮಾಜದ ಏಳಿಗೆ ಸಾಧ್ಯ ಎಂದು ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅಭಿಪ್ರಾಯಪಟ್ಟರು. ಶ್ರೀಮಂಗಲ ಕೊಡವ ಸಮಾಜದಲ್ಲಿ ಪೊಮ್ಮಕ್ಕಡ ಕೂಟ ಆಯೋಜಿಸಿದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತಾನಾಡಿದರು.

ಆಧುನಿಕ ಸಮಾಜದಲ್ಲಿ ಮಹಿಳೆಯರಿಗೆ ಅತ್ಯಂತ ಪ್ರಮುಖವಾದ ಸ್ಥಾನವಿದೆ. ಮಹಿಳಾ ಸಬಲೀಕರಣ ಸರಕಾರದ ಪ್ರಮುಖ ಆಶಯವಾಗಿದ್ದು, ಮಹಿಳಾ ದಿನಾಚರಣೆ ಕೇವಲ ಒಂದು ಕಾರ್ಯಕ್ರಮವಾಗಿರದೆ ಇದು ಆಚರಣೆಗೆ ಬಂದರೆ ಮಾತ್ರ ಸಮಾಜಕ್ಕೆ ಒಳಿತಾಗಲಿದೆ ಎಂದು ಹೇಳಿದರು.

ಈ ಸಂದರ್ಭ ಶ್ರೀಮಂಗಲ ಕೊಡವ ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಪೆಮ್ಮಂಡ ಸಬಿತಾ ಕುಶಾಲಪ್ಪ, ಉಪಾಧ್ಯಕ್ಷೆ ಕಾಳಿಮಾಡ ಸೀಮಾ ಪ್ರಶಾಂತ್, ಕಾರ್ಯದರ್ಶಿ ಚೆಟ್ಟಂಡ ಲತಾ ಚರ್ಮಣ, ಖಜಾಂಚಿ ಮಚ್ಚಮಾಡ ಶ್ವೇತಾ ಉದಯ ಸೇರಿದಂತೆ ಪದಾಧಿಕಾರಿಗಳಾದ ಚೋನಿರ ಪವಿ ರತ್ತು, ಕೋಟ್ರಮಾಡ ಶೈಮಾ ರೋಷನ್, ಶೀತಲ್ ಮಾದಪ್ಪ, ಶೃತಿ ನಿತಿನ್, ಚೇಂದಂಡ ತಾನ್ಸಿ ಚೇತನ್, ಅಪ್ಪಚ್ಚಂಗಡ ಮೋಟಯ್ಯ, ಪೆಮ್ಮಂಡ ರಾಜ, ಕಾಳಿಮಾಡ ಪ್ರಶಾಂತ್, ಪೊಯೇಲೆಂಗಡ ಪಲ್ವಿನ್, ಚೊಟ್ಟೆಯಾoಡಮಾಡ ವಿಶು, ಮಾದೀರ ಸುಧಿ , ಅಲೆಮಾಡ ಸೋಮಣ್ಣ ಹಾಜರಿದ್ದರು.

ಆಧುನಿಕ ಜಗತ್ತಿನಲ್ಲಿ ಪುರುಷರಿಗೆ ಸಮಾನವಾಗಿ ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರು ಹೆಸರು ಮಾಡುತ್ತಿದ್ದಾರೆ. ಸೇನೆ, ಕ್ರೀಡೆ, ಸಾರ್ವಜನಿಕ ಬದುಕು ಹಾಗೂ ಸಮಾಜದ ಎಲ್ಲ ರೀತಿಯ ಚಟುವಟಿಕೆಗಳಲ್ಲೂ ಮಹಿಳೆಯರು ಪ್ರಮುಖವಾಗಿ ಕಾಣಿಸಿಕೊಳ್ಳುತ್ತಿರುವುದು ಮಹಿಳಾ ಸಬಲೀಕರಣಕ್ಕೆ ಸಾಕ್ಷಿಯಾಗಿದೆ. ಇದೇ ರೀತಿ ಮಹಿಳೆಯರು, ಸಮಾಜದ ಒಳಿತಿಗಾಗಿ ಸಂಘಟಿತರಾಗಬೇಕು.

-ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ವಿರಾಜಪೇಟೆ ಶಾಸಕ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೀನು ಮಾರಾಟ ಫೆಡರೇಶನ್‌ನಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್‌ರೇ ಯಂತ್ರ ಕೊಡುಗೆ
ಬನ್ನಂಜೆ ಶನಿ ಕ್ಷೇತ್ರ: ಚಂದ್ರಮಂಡಲ ರಥೋತ್ಸವ