ಕನ್ನಡಪ್ರಭ ವಾರ್ತೆ ಚಾಮರಾಜನಗರ
ಜೂ.5ರಂದು ಸಾರ್ವಜನಿಕರಿಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತಿದೆ. ಪ್ರತಿ ವರ್ಷ ಒಂದೊಂದು ಧ್ಯೇಯ ವಾಕ್ಯಗಳೊಂದಿಗೆ ಈ ದಿನ ಆಚರಣೆಗೊಳ್ಳುತ್ತದೆ. ಈ ಬಾರಿಯ ವಿಶ್ವ ಪರಿಸರ ದಿನವನ್ನು ‘ನಮ್ಮ ಭೂಮಿ: ನಮ್ಮ ಭವಿಷ್ಯ’ ಎಂಬ ಧ್ಯೇಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ ಎಂದರು.
ವಾತಾವರಣದಲ್ಲಿ ಹೆಚ್ಚುತ್ತಿರುವ ಬಿಸಿ, ನಿರಂತರ ವಾಯು ಮಾಲಿನ್ಯ, ಜಲಮಾಲಿನ್ಯ, ಭೂ ಮಾಲಿನ್ಯ ಎಲ್ಲದಕ್ಕೂ ಬೆಲೆ ಕಟ್ಟುವ ಕಾಲ ಬಹಳ ದೂರವಿಲ್ಲ. ಇರುವ ಒಂದೇ ಒಂದು ಭೂಗ್ರಹವನ್ನು ಉಳಿಸಿಕೊಳ್ಳಬೇಕಾಗಿದೆ. ಹವಾಮಾನ ಏರುಪೇರುಗಳಿಂದ ಇದೇ ಮಾನವ ಕುಲ ರೋಗರುಜಿನ ಮತ್ತು ಆಹಾರ ಕೊರತೆಯಿಂದ ಬಳಲಿ ಮಾನವ ಸಂಕುಲ ನಾಶದ ಹಾದಿ ಹಿಡಿದಿದೆ ಎಂದರು. ವಲಯ ಅರಣ್ಯಾಧಿಕಾರಿ ಉಮೇಶ್ ಮಾತನಾಡಿ, ರಾಸಾಯನಿಕ ಮುಕ್ತ, ಸಾವಯವ ಹಾಗೂ ಸಸ್ಯ ಮೂಲದ ಆಹಾರ ಪದಾರ್ಥಗಳನ್ನೇ ಬಳಸಬೇಕು. ಇದರಿಂದ ಪರಿಸರಕ್ಕೂ ನಿರಾಳ, ನಮ್ಮ ಆರೋಗ್ಯಕ್ಕೂ ವರದಾನ ಎಂದರು.ಬಾಲ ನ್ಯಾಯ ಮಂಡಳಿ ಸದಸ್ಯ ಟಿ.ಜೆ. ಸುರೇಶ್ ಮಾತನಾಡಿ, ಜನರು ಸಂಘ ಸಂಸ್ಥೆಗಳೊಂದಿಗೆ ಕೈ ಜೋಡಿಸಿದಾಗ ಮಾತ್ರ ಪರಿಸರ ಸಂರಕ್ಷಣೆ ಸಾಧ್ಯ. ಸಾರ್ವಜನಿಕರನ್ನು ಪರಿಸರ ಪ್ರೇಮಿಗಳಾಗಬೇಕು. ಹವಾಮಾನ ಸಂರಕ್ಷಣೆ ಬಗ್ಗೆ ಜಾಗೃತರಾಗುವುದು ಮುಖ್ಯ ಎಂದು ತಿಳಿಸಿದರು. ಸ್ಕೌಟ್ ಆ್ಯಂಡ್ ಗೈಡ್ ಜಿಲ್ಲಾ ಸಂಘಟಕ ಕೆ.ಪಿ. ಅಶೋಕ್ ಕುಮಾರ್. ಜೆ. ಶ್ರೀನಿಧಿ, ಅರಣ್ಯ ಸಿಬ್ಬಂದಿ ಹಾಜರಿದ್ದರು.