ವಿದ್ಯುತ್‌ ವಂಚಿತ ಮನೆಗಳಿಗೆ ತಾತ್ಕಾಲಿಕ ಸೌರ ವಿದ್ಯುತ್‌ ಸಂಪರ್ಕ

KannadaprabhaNewsNetwork |  
Published : Oct 15, 2026, 02:45 AM IST
14-ಎನ್ ಪಿ ಕೆ-1.ಮಡಿಕೇರಿ ತಾಲೂಕಿನ ಚೆಂಬು ಗ್ರಾಮದ ದಬ್ಬಡ್ಕ ಭಾಗದಸುಮಾರು 22 ಕುಟುಂಬಗಳಿಗೆ ಸೌರ ವಿದ್ಯುತ್ ಅಳವಡಿಸುವ ಕಾಮಗಾರಿಗೆ ಅಧಿಕೃತವಾಗಿ ಚಾಲನೆನೀಡಲಾಯಿತು. | Kannada Prabha

ಸಾರಾಂಶ

ದಶಕಗಳಿಂದ ವಿದ್ಯುತ್ ಸೌಲಭ್ಯಗಳಿಂದ ವಂಚಿತವಾಗಿದ್ದ ಮಡಿಕೇರಿ ತಾಲೂಕಿನ ಚೆಂಬು ಗ್ರಾಮದ ದಬ್ಬಡ್ಕ ಭಾಗದ ಸುಮಾರು 29 ಕುಟುಂಬಗಳ ಪೈಕಿ, ತಾತ್ಕಾಲಿಕ ಸೌರ ವಿದ್ಯುತ್ ಸಂಪರ್ಕಕ್ಕೆ ಬೇಡಿಕೆ ಸಲ್ಲಿಸಿದ 22 ಕುಟುಂಬಗಳಿಗೆ ಸೌರ ವಿದ್ಯುತ್ ಅಳವಡಿಸುವ ಕಾಮಗಾರಿಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು.

ನಾಪೋಕ್ಲು: ದಶಕಗಳಿಂದ ವಿದ್ಯುತ್ ಸೌಲಭ್ಯಗಳಿಂದ ವಂಚಿತವಾಗಿದ್ದ ಮಡಿಕೇರಿ ತಾಲೂಕಿನ ಚೆಂಬು ಗ್ರಾಮದ ದಬ್ಬಡ್ಕ ಭಾಗದ ಸುಮಾರು 29 ಕುಟುಂಬಗಳ ಪೈಕಿ, ತಾತ್ಕಾಲಿಕ ಸೌರ ವಿದ್ಯುತ್ ಸಂಪರ್ಕಕ್ಕೆ ಬೇಡಿಕೆ ಸಲ್ಲಿಸಿದ 22 ಕುಟುಂಬಗಳಿಗೆ ಸೌರ ವಿದ್ಯುತ್ ಅಳವಡಿಸುವ ಕಾಮಗಾರಿಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು.

ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಸೂಚನೆಯಂತೆ, ಅರಣ್ಯ ಇಲಾಖೆಯ ಮುಖಾಂತರ ಈ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಕಮಲ ಬದಿಕೋಡಿ ಅವರ ಮನೆಗೆ ಸೋಲಾರ್ ಅಳವಡಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇನ್ನುಳಿದ ಅರ್ಹ ಮನೆಗಳಿಗೂ ನಿರಂತರವಾಗಿ ಸೋಲಾರ್ ವ್ಯವಸ್ಥೆ ಅಳವಡಿಸಲಾಗುವುದು ಎಂದು ತಿಳಿಸಲಾಗಿದೆ.ಶಾಸಕ ಪೊನ್ನಣ್ಣ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಸೂಚನೆಯಂತೆ ಅವರ ಅನುಪಸ್ಥಿತಿಯಲ್ಲಿ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್, ಸಂಪಾಜೆ ವಲಯ ಅರಣ್ಯಾಧಿಕಾರಿ ಡಿನ್ಸಿ ದೇಚಮ್ಮ ಹಾಗೂ ಸಿಬ್ಬಂದಿ ವರ್ಗ, ವಲಯ ಕಾಂಗ್ರೆಸ್ ಅಧ್ಯಕ್ಷ ರವಿರಾಜ್ ಹೊಸೂರು, ಜಿಲ್ಲಾ ಸಾಮಾಜಿಕ ಜಾಲತಾಣ ಅಧ್ಯಕ್ಷ ಸೂರಜ್ ಹೊಸೂರು ಮತ್ತು ಸ್ಥಳೀಯ ಪ್ರಮುಖರು ಪೂಜೆ ನೆರವೇರಿಸುವ ಮೂಲಕ ಯೋಜನೆಗೆ ಚಾಲನೆ ನೀಡಿದರು.ವಲಯ ಅರಣ್ಯಾಧಿಕಾರಿ ಡಿನ್ಸಿ ದೇಚಮ್ಮ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್ ಶುಭ ಹಾರೈಸಿದರು.

ವಲಯ ಕಾಂಗ್ರೆಸ್ ಅಧ್ಯಕ್ಷ ರವಿರಾಜ್ ಹೊಸೂರು ಮಾತನಾಡಿ, ಮುಂದಿನ ದಿನಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುಮತಿ ಸಿಕ್ಕ ತಕ್ಷಣ ಕಾಯಂ ವಿದ್ಯುತ್ ವ್ಯವಸ್ಥೆ ಮಾಡಲಾಗುವುದು ಎಂದರು.

ಜಿಲ್ಲಾ ಸಾಮಾಜಿಕ ಜಾಲತಾಣ ಅಧ್ಯಕ್ಷ ಸೂರಜ್ ಹೊಸೂರು ಮಾತನಾಡಿದರು.

ಪಕ್ಷದ ಮಾಜಿ ವಲಯ ಅಧ್ಯಕ್ಷರು ಹಾಗೂ ಹಿರಿಯ ನಾಯಕರಾದ ಸೋಮಣ್ಣ ಬಾಲಂಬಿ, ಹಿರಿಯರಾದ ಬಂಗಾರಕೋಡಿ ವೆಂಕಟರಮಣ, ರಘುನಾಥ್ ಬಾಲಂಬಿ, ಮಾಣಿಕಲ್ಲು ವಿನಯ, ಹರ್ಷಿತ್ ಚೆಂಡೆಡ್ಕ, ಉದಯ ಹೊದ್ದಟ್ಟಿ, ಕೊಪ್ಪದ ಶಿವರಾಮ, ಕೊಪ್ಪದ ಭುವನೇಶ್ವರ, ಹೊಸೂರು ಗಿರೀಶ್, ಕೆದಂಬಾಡಿ ಗಿರೀಶ್, ಬಂಗಾರಕೋಡಿ ವಿಕಿ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪುನರೂರು ಕ್ಷೇತ್ರ ಬ್ರಹ್ಮಕಲಶ ಲಾಂಛನ ಬಿಡುಗಡೆ
ಕುಂಟಿಕಾನಮಠ ದೇವಸ್ಥಾನದಲ್ಲಿ ನವರಾತ್ರಿ ಆಚರಣೆ