ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿಯಾಗಿ ಸೈನಿಕ ಸಾವು

KannadaprabhaNewsNetwork |  
Published : Sep 23, 2026, 01:30 AM IST
ಕೆ ಕೆ ಪಿ ಸುದ್ದಿ 01: ಅಪಘಾತದಲ್ಲಿ ಯೋಧ ಸಾವು.  | Kannada Prabha

ಸಾರಾಂಶ

ಅಪಘಾತದ ತೀವ್ರತೆಗೆ ಚನ್ನವೀರೇಗೌಡಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ನಗರದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಆಸ್ಪತ್ರೆಯಲ್ಲಿ ಯೋಧನಿಗೆ ಸೂಕ್ತ ಚಿಕಿತ್ಸೆ ಸಿಗದ ಕಾರಣ ಮೃತಪಟ್ಟಿದ್ದಾಗಿ ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ಕನಕಪುರ: ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ರಜೆಯ ಮೇಲೆ ಊರಿಗೆ ಬಂದಿದ್ದ ಐಟಿಬಿಪಿ ಯೋಧ ಮೃತಪಟ್ಟ ಘಟನೆ ಕನಕಪುರ ಬೈಪಾಸ್ ರಸ್ತೆಯ ಗಡಸಳ್ಳಿ ಬಳಿ ತಡರಾತ್ರಿ ನಡೆದಿದೆ. ತಾಲೂಕಿನ ಶಿವನಹಳ್ಳಿ ನಿವಾಸಿಯಾಗಿರುವ ಚನ್ನವೀರೇಗೌಡ (45) ಮೃತಪಟ್ಟ ಯೋಧನಾಗಿದ್ದು, ಇಂಡೋ- ಟಿಬೆಟಿಯನ್ ಬಾರ್ಡರ್ ಪೊಲೀಸ್ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಚನ್ನವೀರೇಗೌಡ ಮೊನ್ನೆಯಷ್ಟೇ ರಜೆಯ ಮೇಲೆ ಸ್ವಗ್ರಾಮಕ್ಕೆ ಬಂದಿದ್ದರು. ತಡರಾತ್ರಿ ಯೋಧ ತಮ್ಮ ಮಗನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಗಡಸಳ್ಳಿ ಬಳಿ ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್‌ ಗೆ ಬೈಕ್ ಡಿಕ್ಕಿಯಾಗಿದೆ, ಅಪಘಾತದ ತೀವ್ರತೆಗೆ ಚನ್ನವೀರೇಗೌಡಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ನಗರದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಆಸ್ಪತ್ರೆಯಲ್ಲಿ ಯೋಧನಿಗೆ ಸೂಕ್ತ ಚಿಕಿತ್ಸೆ ಸಿಗದ ಕಾರಣ ಮೃತಪಟ್ಟಿದ್ದಾಗಿ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಸ್ಥಳಕ್ಕೆ ಕನಕಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಪ್ರಕರಣ ದಾಖಲಿಸಿಕೊಂಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಿ.ಎಫ್: ಕಾರ್ಮಿಕರ ವೇತನ‌ಮಿತಿ ₹ 25,000ಕ್ಕೆ ಹೆಚ್ಚಳ: ಪಿಎಫ್ ಆಯುಕ್ತ ಎಂ. ಸುಬ್ರಹ್ಮಣ್ಯಂ
ವಿದ್ಯಾರ್ಥಿಗಳು ಶಿಸ್ತು ಅಳವಡಿಸಿ: ಡಾ. ಕಣ್ಣೂರ್