ಕರ್ತವ್ಯದಲ್ಲಿದ್ದ ಸೈನಿಕ ಹೃದಯಾಘಾತದಿಂದ ಸಾವು

KannadaprabhaNewsNetwork |  
Published : Aug 06, 2025, 01:30 AM IST
ಕಿರಣರಾಜ ಕೇದಾರಿ | Kannada Prabha

ಸಾರಾಂಶ

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದ ಕಿರಣರಾಜ ಕೇದಾರಿ ತೆಲಸಂಗ ( 23) ಆಗ್ನಿವೀರ ಯೋಧ ಮಂಗಳವಾರ ಬೆಳಗ್ಗೆ ಪಂಜಾಬ್‌ನಲ್ಲಿ ಕರ್ತವ್ಯದಲ್ಲಿದ್ದಾಗ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಕನ್ನಡಪ್ರಭ ವಾರ್ತೆ ಅಥಣಿ

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದ ಕಿರಣರಾಜ ಕೇದಾರಿ ತೆಲಸಂಗ ( 23) ಆಗ್ನಿವೀರ ಯೋಧ ಮಂಗಳವಾರ ಬೆಳಗ್ಗೆ ಪಂಜಾಬ್‌ನಲ್ಲಿ ಕರ್ತವ್ಯದಲ್ಲಿದ್ದಾಗ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ದೇಶ ಸೇವೆ ಮಾಡುವ ಕನಸು ಹೊತ್ತಿದ್ದ ಕಿರಣರಾಜ್ ಸೇನೆಗೆ ನೇಮಕಗೊಂಡು ಒಂದೇ ವರ್ಷದಲ್ಲಿ ಅಕಾಲಿಕ ನಿಧನ ಹೊಂದಿರುವುದು ಅವರ ಕುಟುಂಬಸ್ಥರಿಗೆ ಮತ್ತು ಇಡೀ ಗ್ರಾಮಸ್ಥರಿಗೆ ತೀವ್ರ ಅಘಾತ ಉಂಟುಮಾಡಿದೆ.

ಕಳೆದ ಒಂದು ವರ್ಷದ ಹಿಂದೆ ಭಾರತೀಯ ಸೇನೆಗೆ ಸೇರಿದ್ದ ಕಿರಣರಾಜ ತರಬೇತಿ ಮುಗಿಸಿಕೊಂಡು 6 ತಿಂಗಳ ಹಿಂದಷ್ಟೇ ರಜೆಯ ಮೇಲೆ ಗ್ರಾಮಕ್ಕೆ ಆಗಮಿಸಿ, ಮತ್ತೆ ಪಂಜಾಬ್ ರಾಜ್ಯದ ಪಟಿಯಾಲ್ ರೆಜಿಮೆಂಟ್‌ನಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದರು. ಮಂಗಳವಾರ ಮುಂಜಾನೆ ಪ್ರತಿನಿತ್ಯದಂತೆ ಸಹೋದ್ಯೋಗಿಗಳೊಂದಿಗೆ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದ, ಈ ವೇಳೆ ಮೈದಾನದಲ್ಲಿ ಕುಸಿದು ಬಿದ್ದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆಂದು ಸೇನಾ ಕಚೇರಿಯ ಮೂಲಗಳು ತಿಳಿಸಿವೆ. ಅವರ ಅಕಾಲಿಕ ನಿಧನದ ಸುದ್ದಿ ಇಡೀ ಗ್ರಾಮಸ್ಥರಲ್ಲಿ ಶೋಕ ಉಂಟು ಮಾಡಿದೆ. ಮೃತ ಯೋಧನಿಗೆ ತಂದೆ, ತಾಯಿ, ಸಹೋದರಿ, ಸಹೋದರ ಸೇರಿದಂತೆ ಅಪಾರ ಬಂಧು ಬಳಗವಿದೆ. ನಾಳೆ ಪಾರ್ಥಿವ ಶರೀರ ಆಗಮನ

ಸೈನಿಕನ ಪಾರ್ಥಿವ ಶರೀರವು ಪಂಜಾಬನಿಂದ ಬುಧವಾರ ಸಂಜೆ ದೆಹಲಿ ವಿಮಾನ ನಿಲ್ದಾಣದ ಮೂಲಕ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಗುರುವಾರ ಮುಂಜಾನೆ ಆಗಮಿಸಲಿದೆ. ಬೆಳಗಾವಿಯಿಂದ ಭಾರತೀಯ ಸೇನೆಯ ವಾಹನದಲ್ಲಿ ಐಗಳಿ ಗ್ರಾಮಕ್ಕೆ ಪಾರ್ಥಿವ ಶರೀರ ಆಗಮಿಸಿದ ನಂತರ ಅಂತಿಮ ದರ್ಶನ ಹಾಗೂ ಸಕಲ ಗೌರವದೊಂದಿಗೆ ಅಂತ್ಯ ಸಂಸ್ಕಾರ ಜರಗಲಿದೆ. ದೇಶಕ್ಕಾಗಿ ಸೇವಿ ಸಲ್ಲಿಸುವ ವೇಳೆ ನಿಧನ ಹೊಂದಿದ ಯೋಧನಿಗೆ ಗೌರವ ಸಲ್ಲಿಸಲು ಗ್ರಾಮಸ್ಥರು ಸಿದ್ಧತೆ ನಡೆಸಿದ್ದಾರೆ.

PREV

Recommended Stories

ಧರ್ಮಸ್ಥಳ ಗ್ರಾಮದಲ್ಲಿ ಕಳೇಬರ ಸಿಗದಿದ್ರೆ ಮುಸುಕುಧಾರಿ ಲೋಪವಲ್ಲ
ಪ್ರಧಾನಿ ಆಗಮನ ಹಿನ್ನೆಲೆಯಲ್ಲಿ 35 ಬೀದಿ ನಾಯಿಗಳ ಬಂಧನ