ಕನ್ನಡಪ್ರಭ ವಾರ್ತೆ ಮಡಿಕೇರಿ
ಕಾರ್ಯಕ್ರಮದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ಸ್ವಚ್ಛ ಭಾರತ್ ಅಭಿಯಾನ ಯೋಜನೆಯಡಿ ವೈಜ್ಞಾನಿಕವಾಗಿ ಘನತ್ಯಾಜ್ಯ ವಿಲೇವಾರಿಗೆ ಮುಂದಾಗಲಾಗಿದೆ. ಆ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ ಶೇ.50ರಷ್ಟು ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದರು.
ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ, ಕುಶಾಲನಗರ ಮತ್ತು ವಿರಾಜಪೇಟೆ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಲಾಗುತ್ತಿದೆ ಎಂದು ಶಾಸಕ ಡಾ.ಮಂತರ್ ಗೌಡ ತಿಳಿಸಿದರು.ಜಿಲ್ಲೆಯ ಮೂರು ಸ್ಥಳೀಯ ಸಂಸ್ಥೆಗಳ ಸುಮಾರು 1.52 ಲಕ್ಷ ಟನ್ ಪಾರಂಪರಿಕ ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗುತ್ತಿದೆ. ಇದರಲ್ಲಿ ಮಡಿಕೇರಿ ನಗರದ ಸುಮಾರು 76,636 ಟನ್ ಕಸವನ್ನು ವಿಲೇವಾರಿ ಮಾಡಲಾಗುತ್ತಿದೆ ಎಂದು ಶಾಸಕರು ವಿವರಿಸಿದರು.
ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ನಗರಸಭೆ ಸ್ಥಳೀಯ ಸದಸ್ಯ ಅಪ್ಪಣ್ಣ, ನಗರಸಭೆ ಮಾಜಿ ಅಧ್ಯಕ್ಷರಾದ ಅನಿತಾ ಪೂವಯ್ಯ, ಪೌರಾಯುಕ್ತ ಎಚ್.ಆರ್.ರಮೇಶ್, ನಗರಸಭಾ ಸದಸ್ಯರು ಇತರರು ಇದ್ದರು.