ಸೋಲೂರು ಹೋಬಳಿ ನೆಲಮಂಗಲ ತಾಲೂಕಿಗೆ ಸೇರ್ಪಡೆ: ಸಿಎಂಗೆ ಅಭಿನಂದನೆSolur Hobli is included in Nelamangala Taluk: Congratulations to the CM

KannadaprabhaNewsNetwork |  
Published : Sep 10, 2025, 01:03 AM IST
ಪೋಟೋ 1 : ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಶ್ರೀನಿವಾಸ್ ಹಾಗೂ ಮುಖಂಡರುಗಳು ಸಿಎಂ ಸಿದ್ದರಾಮಯ್ಯರವನ್ನು ಭೇಟಿ ಮಾಡಿ ಅಭಿನಂದಿಸಿದರು. | Kannada Prabha

ಸಾರಾಂಶ

ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯರವರನ್ನು ಸನ್ಮಾನಿಸಲಾಯಿತು.

ಕನ್ನಡಪ್ರಭ ವಾರ್ತೆ ದಾಬಸ್‍ಪೇಟೆ

ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಸೋಲೂರು ಹೋಬಳಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿಗೆ ಸೇರ್ಪಡೆ ಮಾಡಲು ಸಚಿವ ಸಂಪುಟದಲ್ಲಿ ಅನುಮೋದನೆಯಾಗಿರುವುದಕ್ಕೆ ನೆಲಮಂಗಲ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಶಾಸಕ ಎನ್.ಶ್ರೀನಿವಾಸ್ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ಸಾರಿಗೆ ಹಾಗೂ ಮುಜುರಾಯಿ ಮತ್ತು ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ವಿಧಾನಪರಿಷತ್ ಸದಸ್ಯ ರವಿ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರನ್ನು ನೋಡಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಸೋಲೂರು ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರಿದೆ. ಶಾಸಕರು ಸೇರಿ ಆ ಭಾಗದ ಮುಖಂಡರು, ಕಾರ್ಯಕರ್ತರ ಜತೆಗೆ ಜನರಿಗೂ ಒಳ್ಳೆಯದಾಗಲಿ ಎಂದು ತಿಳಿಸಿ, ಶಾಸಕರ ಜೊತೆಗೂಡಿ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್ ರವರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿಯಾಗಿ ಸನ್ಮಾನಿಸಿದಾಗ ಶಾಸಕ ಶ್ರೀನಿವಾಸ್ ಹಾಗೂ ಸೋಲೂರು ಭಾಗದ ಕಾರ್ಯಕರ್ತರ ಒತ್ತಾಸೆಯಂತೆ ಸೋಲೂರನ್ನು ನೆಲಮಂಗಲಕ್ಕೆ ಸೇರ್ಪಡೆ ಮಾಡಲಾಗಿದ್ದು, ಎಲ್ಲರಿಗೂ ಒಳ್ಳೆಯದಾಗಲಿದೆ. ನೆಲಮಂಗಲ ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರ್ಕಾರದ ಸಹಕಾರ ಸದಾ ಇರಲಿದೆ ಎಂದರು.

ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಸನ್ಮಾನದ ಬಳಿಕ ಮಾತನಾಡಿ, ಜನರ ಆಶೋತ್ತರಗಳನ್ನು ಈಡೇರಿಸುವುದು ಸರ್ಕಾರ ಹಾಗೂ ಜನಪ್ರತಿನಿಧಿಗಳ ಕರ್ತವ್ಯವಾಗಿದೆ. ಸೋಲೂರು ಜನರ ಕಷ್ಟಕ್ಕೆ ನಮ್ಮ ಸರ್ಕಾರ ಸ್ಪಂದಿಸಿದ್ದು ಇಂದು ಸಮಸ್ಯೆ ಪರಿಹಾರವಾಗಿದೆ. ನೆಲಮಂಗಲ ನಗರದ ಬಸ್ ನಿಲ್ದಾಣ ಅಭಿವೃದ್ಧಿ ಹಾಗೂ ಇನ್ನಿತರೆ ವಿಚಾರಗಳನ್ನು ಸೆ. 11 ರಂದು ಸಭೆ ನಡೆಸಿ ಪರಿಹಾರ ಒದಗಿಸುವುದಾಗಿ ತಿಳಿಸಿದರು. ಶಾಸಕರ ಭವನದಲ್ಲಿ ಎಂ.ಎಲ್ಲಿ ರವಿ ಅವರನ್ನು ಸನ್ಮಾನಿಸಿದರು.

ಶಾಸಕ ಎನ್.ಶ್ರೀನಿವಾಸ್ ಮಾತನಾಡಿ, ಸೋಲೂರು ಹೋಬಳಿಯ ಜನತೆಯ 47 ವರ್ಷಗಳ ಕನಸನ್ನು ನಮ್ಮ ಸರ್ಕಾರ ನನಸು ಮಾಡಿದೆ. ಈ ಹಿನ್ನೆಲೆ ಸಹಕರಿಸಿದ ಸಿಎಂ, ಡಿಸಿಎಂ, ಸಚಿವರನ್ನು ಕ್ಷೇತ್ರದ ನೂರಾರು ಕಾರ್ಯಕರ್ತರ ಜೊತೆ ಭೇಟಿ ಮಾಡಿ ಅಭಿನಂದಿಸಿದ್ದೇವೆ ಎಂದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಆರ್.ಗೌಡ, ಎನ್ ಡಿಎ ಅಧ್ಯಕ್ಷ ನಾರಾಯಣಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರದೀಪ್, ನಾಗರುದ್ರಶರ್ಮಾ, ಮಂಜುನಾಥ್ ಮತ್ತಿತರರಿದ್ದರು.

PREV

Recommended Stories

ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ 2 ರೈಸ್‌ಮಿಲ್‌ ಜಫ್ತಿ: ಕೇಸು
ಮುಂದೇಕೆ, ಈಗ್ಲೆ ಮುಸ್ಲಿಂ ಆಗ್ಬಿಡಿ : ಬಿಜೆಪಿಗರ ಕಿಡಿ