ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ
ಪಟ್ಟಣದ ಬಸವೇಶ್ವರ ಯಾತ್ರಿ ನಿವಾಸದಲ್ಲಿ ಭಾನುವಾರ ಬಸವನಬಾಗೇವಾಡಿ ಉಪ ವಿಭಾಗ ಪೊಲೀಸ್ ಠಾಣಾ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದು ಕೊರತೆ ಸಭೆಯಲ್ಲಿ ಮಾತನಾಡಿದ ಅವರು, ಪಟ್ಟಣದ ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತದಲ್ಲಿ ಸಿಗ್ನಲ್ ಹಾಕಲು ಸಾಧ್ಯವಾಗುವುದಿಲ್ಲ. ಪಟ್ಟಣಕ್ಕೆ ರಿಂಗ್ ರೋಡ್ ಆದಾಗ ಮಾತ್ರ ಪಟ್ಟಣದಲ್ಲಿನ ಟ್ರಾಫಿಕ್ ಸಮಸ್ಯೆ ತಡೆಯಬಹುದಾಗಿದೆ ಎಂದು ಹೇಳಿದರು.
ಜಾತಿ ನಿಂದನೆಯ ಪ್ರಕರಣ ಗಳಲ್ಲಿ ಕೌಂಟರ್ ಪ್ರಕರಣಗಳು ಆಗದಂತೆ ತಡೆಯುವ ಮೂಲಕ ದಲಿತ ಸಮುದಾಯಕ್ಕೆ ನ್ಯಾಯ ಒದಗಿಸಲಾಗಿದೆ ಎಂದ ಅವರು, ಏನಾದರೂ ಗುಪ್ತ ಮಾಹಿತಿ ಇದ್ದರೆ ಇಲಾಖೆ ಗಮನಕ್ಕೆ ತರಬೇಕು. ಗೌಪ್ಯತೆ ಕಾಪಾಡಲಾಗುವುದು ಎಂದು ಭರವಸೆ ನೀಡಿದರು.ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರ ಕುಂದು ಕೊರತೆ ಸಭೆಯಲ್ಲಿ ಬೇರೆ ಇಲಾಖೆಯ ಸಮಸ್ಯೆಗಳನ್ನು ಚರ್ಚಿಸುವುದಕ್ಕಿಂತ ಹೆಚ್ಚಾಗಿ ಪೊಲೀಸ್ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚೆ ಮಾಡುವಂತೆ ಸಲಹೆ ನೀಡಿದರು.
ಅಂಬೇಡ್ಕರ್ ವೃತ್ತದ ಸುತ್ತಮುತ್ತ ಅಕ್ರಮವಾಗಿ ಗಾಂಜಾ ಹಾಗೂ ಮದ್ಯ ಮಾರಾಟ ಮಾಡಲಾಗುತ್ತದೆ. ಈ ಕುರಿತು ಅಬಕಾರಿ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಪೊಲೀಸ್ ಇಲಾಖೆ ಈ ಕುರಿತು ಗಮನ ಹರಿಸುವಂತೆ, ನಂದಿ ಮಾರುಕಟ್ಟೆಯಲ್ಲಿ ಸಂಜೆ ಹೊತ್ತಲ್ಲಿ ಕೆಲ ಕಿಡಿಗೇಡಿಗಳು ಮದ್ಯಸೇವನೆ ಮಾಡಿ ಬಾಟಲಿಗಳನ್ನು ಒಡೆದು ಗಲಾಟೆ ಮಾಡುತ್ತಿದ್ದಾರೆ. ಪೊಲೀಸ್ ಅಧಿಕಾರಿಗಳು ಸಂಜೆ ಹೊತ್ತಲ್ಲಿ ಗಸ್ತು ತಿರುಗುವಂತೆ ಮನವಿ ಮಾಡಿದರು.
ಪಿಐ ಗುರುಶಾಂತ ದಾಶ್ಯಾಳ ಮಾತನಾಡಿ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆಯಲ್ಲಿ ನೂರಕ್ಕೂ ಅಧಿಕ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲಾಗಿದೆ ಎಂದರು.
ಬಸವೇಶ್ವರ ವೃತ್ತ ಅಂಬೇಡ್ಕರ್ ವೃತ್ತದಲ್ಲಿ ಸಿಗ್ನಲ್ ಅಥವಾ ಒಬ್ಬ ಪೊಲೀಸ್ ಸಿಬ್ಬಂದಿ ನೇಮಿಸಬೇಕು. ಇದರಿಂದ ಟ್ರಾಫಿಕ್ ಸಮಸ್ಯೆ ತಡೆಯಬಹುದಾಗಿದೆ ಎಂದು ಮುಖಂಡ ಸಿದ್ರಾಮ ಪಾತರೊಟ್ಟಿ ಹೇಳಿದರು. ರಾತ್ರಿ ಹೊತ್ತಲ್ಲಿ ದಲಿತ ಕಾಲೋನಿಗಳಲ್ಲಿ ಪೊಲೀಸ್ ಗಸ್ತು ವ್ಯವಸ್ತೆ ಮಾಡುವಂತೆ ಮುಖಂಡ ಮಹಾಂತೇಶ ಸಾಸಾಬಾಳ ಒತ್ತಾಯಿಸಿದರು.