ಗ್ರಾಮಸಭೆಯಲ್ಲಿ ಸಮಸ್ಯೆಗಳು ಬಗೆಹರಿಸಿಕೊಳ್ಳಿ

KannadaprabhaNewsNetwork | Published : Jan 18, 2025 12:48 AM

ಸಾರಾಂಶ

ಕುಂದಾಣ: ಗ್ರಾಮಗಳಲ್ಲಿರುವ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಗ್ರಾಪಂ ಅಧ್ಯಕ್ಷ ಎಸ್.ಎಂ.ಆನಂದ್ ಕುಮಾರ್ ತಿಳಿಸಿದರು.

ಕುಂದಾಣ: ಗ್ರಾಮಗಳಲ್ಲಿರುವ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಗ್ರಾಪಂ ಅಧ್ಯಕ್ಷ ಎಸ್.ಎಂ.ಆನಂದ್ ಕುಮಾರ್ ತಿಳಿಸಿದರು.

ತಾಲೂಕಿನ ಜಾಲಿಗೆ ಗ್ರಾಪಂ ವ್ಯಾಪ್ತಿಯ ಜುಟ್ಟನಹಳ್ಳಿ ಶಾಲಾ ಆವರಣದಲ್ಲಿ ೨೦೨೪-೨೫ನೇ ಸಾಲಿನ ಮೊದಲನೇ ಹಂತದ ಗ್ರಾಮ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಕುಡಿಯುವ ನೀರು, ಕಾಂಕ್ರೀಟ್ ರಸ್ತೆ, ಚರಂಡಿ ಕಾಮಗಾರಿ, ಬೀದಿದೀಪ ಸೇರಿದಂತೆ ಅನೇಕ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಹೇಳಿದರು.

ಪಿಡಿಒ ಪ್ರಕಾಶ್ಗ್ರಾ ಮಾತನಾಡಿ, ಗ್ರಾಪಂ ಆಯ್ಯವ್ಯಯ ಹಾಗೂ ಅಭಿವೃದ್ಧಿ ಕೆಲಸಗಳ ವಿವರಣೆ ನೀಡಿ, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೆರೆ-ಕುಂಟೆ, ರಾಜಕಾಲುವೆ ಒತ್ತುವರಿ ತೆರವುಗೊಳಿಸಲು ಸದಾ ಸಿದ್ಧ ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಗ್ರಾಮಸ್ಥರಲ್ಲಿ ಕ್ಯಾನ್ಸರ್ ಹೆಚ್ಚು ಕಾಣಿಸಿಕೊಳ್ಳುತ್ತಿದ್ದು ಪಂಚಾಯಿತಿ ಆರೋಗ್ಯ ಅಭಿಯಾನದ ಮೂಲಕ ಅರಿವು ಮೂಡಿಸುತ್ತಿದೆ. ಸರ್ಕಾರದಲ್ಲಿ ದೊರೆಯುವಂತಹ ಆರೋಗ್ಯ ಸೌಲಭ್ಯಗಳನ್ನು ಪಡೆದು ಗುಣಮುಖರಾಗಿ ಇತರರಿಗೂ ಕಾಯಿಲೆ ಕುರಿತು ಅರಿವು ಮೂಡಿಸಿ ಉತ್ತಮ ಜೀವನಶೈಲಿ ರೂಪಿಸಿಕೊಳ್ಳಿ ಎಂದರು.

ಸಭೆಯಲ್ಲಿ ತರಬೇತಿ ಪಡೆದಿರುವ ಮಹಿಳೆಯರಿಗೆ ಹೊಲಿಗೆ ಯಂತ್ರ, ವಿಶೇಷಚೇತನರಿಗೆ, ರೈತರಿಗೆ ಹಾಗೂ ಪಿಯುಸಿ, ಪದವಿ ಮತ್ತು ಸ್ನಾತಕೋತರ ಪದವಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು.

ಇದೇ ಸಂದರ್ಭದಲ್ಲಿ ನೋಡಲ್ ಅಧಿಕಾರಿ ಕಮಲ, ಜಾಲಿಗೆ ಗ್ರಾಪಂ ಉಪಾಧ್ಯಕ್ಷೆ ಭವ್ಯ, ಸದಸ್ಯರಾದ ದೀಪ್ತಿ, ಬಾಲಸುಬ್ರಹ್ಮಣ್ಯ, ಸುಬ್ರಹ್ಮಣ್ಯ, ವಿಜಯ ರಾಘವೇಂದ್ರ, ಆನಂದ್, ಮಂಜುಳಾ, ಶೋಭಾ, ಕೆಂಪರಾಜು, ಅಪ್ಪಯ್ಯ ಬಿ.ಎಂ. ಸುಚಿತ್ರ, ಮುನಿಯಪ್ಪ, ಮುನಿರತ್ನಮ್ಮ, ಜಯಮ್ಮ, ಅಶ್ವಿನಿ, ಶಿವಲಿಂಗಮ್ಮ, ಮಹೇಶ್ ಕುಮಾರ್, ಗೋಪಿನಾಥ್, ಸೌಮ್ಯ, ಲಕ್ಷ್ಮಮ್ಮ, ಪದ್ಮಾವತಿ, ಪಂಚಾಯಿತಿ ಕಾರ್ಯದರ್ಶಿ ನರಸಿಂಹಮೂರ್ತಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕ ವಿಶ್ವಾಸ್ ಇತರರಿದ್ದರು.

೧೭ ಚಿತ್ರ ಸುದ್ದಿ ೦೧

ಕುಂದಾಣ ಹೋಬಳಿಯ ಜಾಲಿಗೆ ಗ್ರಾಪಂ ವ್ಯಾಪ್ತಿಯ ಜುಟ್ಟನಹಳ್ಳಿ ಶಾಲಾ ಆವರಣದಲ್ಲಿ ನಡೆದ ಗ್ರಾಮ ಸಭೆಯಲ್ಲಿ ಪಿಯುಸಿ, ಪದವಿ ಮತ್ತು ಸ್ನಾತಕೋತರ ಪದವಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು.

Share this article