ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆ ಪರಿಹರಿಸಿ

KannadaprabhaNewsNetwork |  
Published : Feb 09, 2025, 01:16 AM IST
ಶಿರ್ಷಿಕೆ-೮ಕೆ.ಎಂ.ಎಲ್‌.ಅರ್.೧- ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಮತ್ತು ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ತಹಶೀಲ್ದಾರ್ ವಿ.ರೂಪ ಅವರ ಮುಖಾಂತರ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರಿಗೆ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಮಾಲೂರು ಶಾಖೆ ವತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಎಲ್ಲಾ ಇಲಾಖೆಗಳಲ್ಲಿರುವಂತೆ ವರ್ಗಾವಣೆಯಾಗಿ ವಿಶೇಷ ಮಾರ್ಗಸೂಚಿ ರಚಿಸಬೇಕು. ಸೇವಾ ವಿಷಯಗಳು ಸಂಬಂಸಿದಂತೆ ಸೌಲಭ್ಯಗಳು ಮೂಲ ಸೌಲಭ್ಯಗಳು ಕಲ್ಪಿಸಬೇಕು ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ತಾಂತ್ರಿಕ ಹುದ್ದೆಗಳಿಗೆ ನೀಡಿದ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ನೀಡಬೇಕು

ಕನ್ನಡಪ್ರಭ ವಾರ್ತೆ ಮಾಲೂರು

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಮತ್ತು ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ತಹಶೀಲ್ದಾರ್ ವಿ. ರೂಪ ಅವರ ಮುಖಾಂತರ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರಿಗೆ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಮಾಲೂರು ಶಾಖೆ ವತಿಯಿಂದ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಲೂರು ಶಾಖೆಯ ಅಧ್ಯಕ್ಷ ವಿ. ಮುನೇಶ್ ಮಾತನಾಡಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಮತ್ತು ಬೇಡಿಕೆಗಳ ಈಡೇರಿಕೆಗಾಗಿ ಈಗಾಗಲೇ ಮೊದಲ ಹಂತದ ಹೋರಾಟವನ್ನು ನಡೆಸಿದ್ದು ಯಾವುದೇ ಪ್ರಯೋಜನವಾಗದ ಕಾರಣ ಎರಡನೇ ಹಂತದ ಹೋರಾಟವನ್ನು ಫೆಬ್ರವರಿ ೧೦ ರಿಂದ ಅನಿರ್ದಿಷ್ಟ ಅವಧಿಯ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದರು.

ವೇತನ ಶ್ರೇಣಿ ನಿಗದಿ ಮಾಡಿ

ರಾಜ್ಯಾದ್ಯಂತ ಆಧಾರ್ ಸೀಡಿಂಗ್ ಪ್ರಕ್ರಿಯೆಯಲ್ಲಿ ಪತ್ತೆಯಾಗಿರುವ ೫೧.೫ಲಕ್ಷ ಮೃತ ಖಾತೇದಾರರ ಪಹಣಿ ದಾಖಲೆಗಳನ್ನು ಅಭಿಯಾನ ಮಾದರಿಯಲ್ಲಿ ವಾರಸುದಾರರ ಹೆಸರುಗಳಿಗೆ ಪೌತಿ ಖಾತೆ ದಾಖಲಿಸುವ ಈ ಪೌತಿ ಖಾತೆ ಆಂದೋಲನ ಕೈಬಿಡಬೇಕು. ಅಂತರ್ ಜಿಲ್ಲ ವರ್ಗಾವಣೆ ಕೆಸಿಎಸ್‌ಆರ್ ನಿಯಮ ೧೬ಎ.ರಾ ಉಪಖಂಡ (೨)ನ್ನು ಮರು ಸ್ಥಾಪಿಸುವ ಬಗ್ಗೆ ಎಲ್ಲಾ ಇಲಾಖೆಗಳಲ್ಲಿರುವಂತೆ ವರ್ಗಾವಣೆಯಾಗಿ ವಿಶೇಷ ಮಾರ್ಗಸೂಚಿ ರಚಿಸಬೇಕು. ಸೇವಾ ವಿಷಯಗಳು ಸಂಬಂಸಿದಂತೆ ಸೌಲಭ್ಯಗಳು ಮೂಲ ಸೌಲಭ್ಯಗಳು ಕಲ್ಪಿಸಬೇಕು ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ತಾಂತ್ರಿಕ ಹುದ್ದೆಗಳಿಗೆ ನೀಡಿದ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ನೀಡಬೇಕು ಎಂದರು.

ತಹಸೀಲ್ದಾರ್‌ಗೆ ಮನವಿ ಸಲ್ಲಿಕೆ

ಕ್ಷೇತ್ರ ಮಟ್ಟದ ಆಯುಕ್ತಾಲಯದಡಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಜೇಷ್ಠತೆಯನ್ನು ರಾಜ್ಯಮಟ್ಟದ ಜೇಷ್ಠತೆಯನ್ನಾಗಿ ಪರಿಗಣಿಸಬೇಕು ಮನೆ ಆನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಾಥಮಿಕ ವರದಿ ನೀಡುವ ಜವಾಬ್ದಾರಿ ನಿರ್ವಹಿಸುವಂತೆ ಆದೇಶಿಸಬೇಕು ಎಂಬ ಬೇಡಿಕೆ ಸೇರಿದಂತೆ ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ರೀತಿಯ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಶೀಲ್ದಾರ್ ಎಂ.ವಿ. ರೂಪ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಜಿಲ್ಲಾ ಶಾಖೆಯ ಪ್ರಧಾನ ಕಾರ್ಯದರ್ಶಿ ಪ್ರವೀಣ್, ಮಾಲೂರು ಶಾಖೆಯ ಪ್ರಧಾನ ಕಾರ್ಯದರ್ಶಿ ರಾಹುಲ್, ಖಜಾಂಚಿ ರಾಹುಲ್, ಗ್ರಾಮ ಆಡಳಿತ ಅಧಿಕಾರಿಗಳಾದ ವಿನಯ್, ಶರತ್, ಲೋಕೇಶ್, ರೂಪೇಂದ್ರ, ಅಮರ್ ಶಂಕರ್, ಸ್ವಾತಿ, ದರ್ಶನಿ, ಇನ್ನಿತರ ಗ್ರಾಮ ಆಡಳಿತ ಅಧಿಕಾರಿಗಳು ಹಾಜರಿದ್ದರು.

PREV

Recommended Stories

ಸರ್ಕಾರಿ ಯೋಜನೆ ತಲುಪಲು ‘ಅರಿವು’ ಕಾರ್ಯಕ್ರಮ ಸಹಕಾರಿ: ಯಶ್ಪಾಲ್‌ ಸುವರ್ಣ
ತಾಯಿ ಹೆಸರಿನಲ್ಲಿ ಒಂದು ಸಸಿ ಹಾಗೂ ಬೀಜದುಂಡೆ ಕಾರ್ಯಕ್ರಮಕ್ಕೆ ಚಾಲನೆ