
ಹಲಗೂರು:
ಕರ್ನಾಟಕ ಪಬ್ಲಿಕ್ ಸ್ಕೂಲ್ ಅವರಣದಲ್ಲಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದಿಂದ ಆಯೋಜಿಸಿದ್ದ ಹಲಗೂರು ವಲಯ ಸಮ್ಮೇಳನದಲ್ಲಿ ಮಾತನಾಡಿ, ಗ್ರಾಮಗಳಿಗೆ ಅಗತ್ಯವಿರುವ ರಸ್ತೆ, ಚರಂಡಿ, ಬೀದಿ ದೀಪ ಸೇರಿದಂತೆ ಸ್ಮಶಾನಕ್ಕೆ ಮೂಲ ಸೌಕರ್ಯ ಒದಗಿಸಲು ಸ್ಥಳೀಯ ಆಡಳಿತ ಅಧಿಕಾರಿಗಳನ್ನು ಪ್ರಶ್ನಿಸುವ ಪರಿಪಾಠ ಬೆಳೆಸಿಕೊಂಡರೇ ಸಮಸ್ಯೆ ಬಗೆಹರಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದರು.
ಗ್ರಾಮೀಣ ಪ್ರದೇಶದ ಬಡ ಜನರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಕೆಲವು ಮೈಕ್ರೊ ಫೈನಾನ್ಸ್ ಕಂಪನಿಗಳಿಂದ ಸಾಲ ಪಡೆದುಕೊಂಡು ಸಾಲ ಮರುಪಾವತಿ ಸಾಧ್ಯವಾಗದೇ ಮರ್ಯಾದೆಗೆ ಅಂಜಿ ಆತ್ಮಹತ್ಯೆಗೆ ಶರಣಾಗುತ್ತಿರುವುದು ತುಂಬಾ ನೋವಿನ ವಿಷಯ ಎಂದರು.ಪ್ರತಿಯೊಬ್ಬ ಜೀವ ಅಮೂಲ್ಯ. ಭಾದಿತರು ಸಾವಿಗೆ ಶರಣಾಗುವುದನ್ನು ಬಿಟ್ಟು ನಮ್ಮ ಗಮನಕ್ಕೆ ತಂದರೇ ಸಮಸ್ಯೆ ಬಗೆಹರಿಸಲು ಸಂಘಟನೆ ಮೂಲಕ ಶ್ರಮಿಸಲಾಗುವುದು ಎಂದರು.
ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆಗೆ ಆಗ್ರಹ
ಧರ್ಮಸ್ಥಳ ಗ್ರಾಮದ ಸುತ್ತಮುತ್ತ ನಡೆದಿದೆ ಎನ್ನಲಾದ ಮಹಿಳೆಯರ ಹತ್ಯೆ ಕುರಿತಂತೆ ತನಿಖೆಗೆ ರಾಜ್ಯ ಸರ್ಕಾರ ಎಸ್‌ಐಟಿ ನೇಮಿಸಿರುವುದು ಸ್ವಾಗತಾರ್ಹ. ಹೈಕೋರ್ಟ್‌ನ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸುವಂತೆ ದಸಂಸ (ಪ್ರೊ.ಬಿ.ಕೃಷ್ಣಪ್ಪ) ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಒತ್ತಾಯಿಸಿದರು.
ಸರ್ಕಾರದ ಅಧೀನದಲ್ಲಿರುವ ತನಿಖಾ ತಂಡವಾದ ಎಸ್‌ಐಟಿ ಈ ಹಿಂದಿನ ವಾಲ್ಮೀಕಿ ನಿಗಮದ ಭ್ರಷ್ಟಾಚಾರ ಪ್ರಕರಣದಲ್ಲಿ ಕ್ಲೀನ್ ಚೀಟ್ ನೀಡಿತ್ತು. ಅದೇ ಮಾದರಿಯಲ್ಲಿ ಈ ತನಿಖೆಯೂ ನಡೆದರೆ ಪ್ರಯೋಜನವಿಲ್ಲ. ರಾಜ್ಯ ಉಚ್ಛ ನ್ಯಾಯಾಲಯದ ನ್ಯಾಯಾಧೀಶರ ಉಸ್ತುವಾರಿಯಲ್ಲಿ ಎಸ್‌ಐಟಿ ತಂಡ ತನಿಖೆ ನಡೆಸಬೇಕು. ಉಚ್ಛ ನ್ಯಾಯಾಲಯದ ನ್ಯಾಯಾಧೀಶರನ್ನು ಸರ್ಕಾರವೇ ಕೋರಬೇಕು ಎಂದು ಒತ್ತಾಯಿಸಿದರು.