ಸಂಘಟನೆಗಳು ದೇಶದ ಹಿತಕ್ಕೆ ಕಾರ್ಯನಿರ್ವಹಿಸಲಿ: ಸೋಮಣ್ಣ ಬೇವಿನಮರದ

KannadaprabhaNewsNetwork |  
Published : Sep 17, 2026, 02:45 AM IST
ಕೇರಳ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಪರಿಷತ್ತಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು | Kannada Prabha

ಸಾರಾಂಶ

ದೇಶದ ಅಭಿವೃದ್ಧಿ ಮತ್ತು ಪ್ರಗತಿಯಲ್ಲಿ ಸಂಘಟನೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಯಾವುದೇ ಸಂಘಟನೆ ತನ್ನದೇ ಆದ ಉದ್ದೇಶ ಮತ್ತು ಸಿದ್ಧಾಂತಗಳೊಂದಿಗೆ ಕಾರ್ಯನಿರ್ವಹಿಸಿದರೂ, ಅದರ ಕಾರ್ಯಚಟುವಟಿಕೆಗಳು ಅಂತಿಮವಾಗಿ ಸಮಾಜದ ಹಾಗೂ ದೇಶದ ಹಿತಕ್ಕೆ ಪೂರಕವಾಗಿರಬೇಕು ಎಂದು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಹೇಳಿದರು.

ಮಂಗಳೂರು: ದೇಶದ ಅಭಿವೃದ್ಧಿ ಮತ್ತು ಪ್ರಗತಿಯಲ್ಲಿ ಸಂಘಟನೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಯಾವುದೇ ಸಂಘಟನೆ ತನ್ನದೇ ಆದ ಉದ್ದೇಶ ಮತ್ತು ಸಿದ್ಧಾಂತಗಳೊಂದಿಗೆ ಕಾರ್ಯನಿರ್ವಹಿಸಿದರೂ, ಅದರ ಕಾರ್ಯಚಟುವಟಿಕೆಗಳು ಅಂತಿಮವಾಗಿ ಸಮಾಜದ ಹಾಗೂ ದೇಶದ ಹಿತಕ್ಕೆ ಪೂರಕವಾಗಿರಬೇಕು ಎಂದು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಹೇಳಿದರು.

ಅವರು ಕೇರಳ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಪರಿಷತ್ತಿನ (ಮೀಡಿಯಾ ಕ್ಲಾಸಿಕಲ್ಸ್ ) ಬದಿಯಡ್ಕದಲ್ಲಿ ಶನಿವಾರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಬದಿಯಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಶಂಕರ ಅಧ್ಯಕ್ಷತೆ ವಹಿಸಿದ್ದರು.

ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಶಿವಾರೆಡ್ಡಿ, ಎ.ಆರ್.ಸುಬ್ಬಯ್ಯ ಕಟ್ಟೆ, ಬದಿಯಡ್ಕ ಗ್ರಾಮ ಪಂಚಾಯಿತಿ ಸದಸ್ಯ ಶ್ಯಾಮಪ್ರಸಾದ, ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಗಂಗಾಧರ ತೆಕ್ಕೆ ಮೂಲೆ, ಗಡಿನಾಡು ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ಚಿನಿಯಪ್ಪ ನಾಯಕ, ಬ್ಯಾರಿ ಅಕಾಡೆಮಿ ಮಾಜಿ ಸದಸ್ಯ ಆಯಿಷಾ ಪೆರ್ಲ, ಧಾರ್ಮಿಕ ಮುಖಂಡ ರಾಮನಾಥ ರೈ ಮೇಗಿನ ಕಡಾರು, ಸುಂದರ ಬಾರಡ್ಕ, ನಾರಾಯಣ ಗೋಸಾಡ, ಪಿ.ಜಿ.ಚಂದ್ರಹಾಸ ರೈ, ಈಶ್ವರ ಮಾಸ್ಟರ್, ಅನಂತಕುಮಾರ್ ಬರ್ಲಾ, ಹರೀಶ್ ಗೋಸಡ, ತಾರನಾಥ ರೈ ಮತ್ತಿತರರು ಇದ್ದರು.

ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಅಖಿಲೇಶ್ ನಗುಮುಗಂ ಸ್ವಾಗತಿಸಿದರು. ಕೋಶಾಧಿಕಾರಿ ಕರುಣಾಕರನ್ ಆದೂರು ವಂದಿಸಿದರು. ಕನ್ನಡದ ಬೆಳವಣಿಗೆಗೆ ಕೈಜೋಡಿಸಿ: ಪದಗ್ರಹಣ ಸ್ವೀಕರಿಸಿ ಮಾತನಾಡಿದ ಪರಿಷತ್ತಿನ ನೂತನ ಅಧ್ಯಕ್ಷ ಮೊಹಮ್ಮದ್ ಅಲಿ ಪೆರ್ಲ, ಕನ್ನಡದ ಉಳಿವು ಮತ್ತು ಅಭಿವೃದ್ಧಿಗಾಗಿ ಸಂಘಟಿತ ಪ್ರಯತ್ನ ಅಗತ್ಯವಾಗಿದೆ ಎಂದರು. ಬೇಸಿ ಗೋಪಾಲಕೃಷ್ಣ ಭಟ್ ಅವರಿಗೆ ‘ಕನ್ನಡ ಸಿರಿ’ ಕಾರ್ಯಕ್ರಮದ ಜವಾಬ್ದಾರಿ ವಹಿಸಲು ತೀರ್ಮಾನಿಸಲಾಯಿತು. ಕನ್ನಡ ಭಾಷೆ, ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಒಳಗೊಂಡಂತೆ ಪ್ರತಿ ತಿಂಗಳು ‘ಕನ್ನಡ ಸಿರಿ’ ಕಾರ್ಯಕ್ರಮ ಆಯೋಜಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಲುವೆಗೆ ನೀರು ಹರಿಸಿ, ಸಮರ್ಪಕ ವಿದ್ಯುತ್ ಪೂರೈಸಲು ಆಗ್ರಹ
ಅಗ್ನಿ ದುರಂತ: ಗಾಯಗೊಂಡಿದ್ದ ಮತ್ತಿಬ್ಬರ ಸಾವು