ಸೋಮಸಮುದ್ರ ಗ್ರಾಮ ನರೇಗಾ ಕಾರ್ಮಿಕರಿಗೆ ಮೂಲಸೌಕರ್ಯ ಕಲ್ಪಿಸಿ

KannadaprabhaNewsNetwork |  
Published : May 18, 2026, 03:30 AM IST
ಕುರುಗೋಡು 02 ತಾಲ್ಲೂಕಿನ ಸೋಮಸಮುದ್ರ ಗ್ರಾಮಕ್ಕೆ ಶನಿವಾರ ಭೇಟಿನೀಡಿದ್ದ ತಾಲ್ಲೂಕು ಉಸ್ತುವಾರಿ ಕಾರ್ಯದರ್ಶಿ ಚನ್ನಪ್ಪ ನರೇಗಾ ಕಾರ್ಮಿಕರಿಂದ ಮಾಹಿತಿ ಪಡೆದರು | Kannada Prabha

ಸಾರಾಂಶ

ನರೇಗಾ ಯೋಜನೆಯಲ್ಲಿ ಕೈಗೊಂಡ ನಾಲಾ ಮತ್ತು ಕಾಲುವೆ ಹೂಳೆತ್ತುವ ಕಾಮಗಾರಿಗಳನ್ನು ಪರಿಶೀಲಿಸಿದರು.

ಕುರುಗೋಡು: ತಾಲ್ಲೂಕಿನ ಸೋಮಸಮುದ್ರ ಗ್ರಾಮಕ್ಕೆ ಶನಿವಾರ ಭೇಟಿನೀಡಿದ್ದ ತಾಲ್ಲೂಕು ಉಸ್ತುವಾರಿ ಕಾರ್ಯದರ್ಶಿ ಚನ್ನಪ್ಪ ನರೇಗಾ ಯೋಜನೆಯಲ್ಲಿ ಕೈಗೊಂಡ ನಾಲಾ ಮತ್ತು ಕಾಲುವೆ ಹೂಳೆತ್ತುವ ಕಾಮಗಾರಿಗಳನ್ನು ಪರಿಶೀಲಿಸಿದರು.

ನರೇಗಾ ಮತ್ತು ವಿಬಿಜಿ ರಾಮ್ ಜಿ ನಡುವಿನ ಗೊಂದಲದಲ್ಲಿ ಈ ವರ್ಷ ಉದ್ಯೋಗಕ್ಕಾಗಿ ಅರ್ಜಿಸಲ್ಲಿಸಿದ ಕಾರ್ಮಿಕರಿಗೆ ಸಕಾಲಕ್ಕೆ ಉದ್ಯೋಗ ಕಲ್ಪಿಸಲು ಸಾಧ್ಯವಾಗಿಲ್ಲ. ಮುಂದಿನ ತಿಂಗಳಿಂದ ವಿಬಿಜಿ ರಾಮ್ ಜಿ ಹೆಸರಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕಾಗಿದೆ. ಒಂದು ಕುಟುಂಬಕ್ಕೆ ನೂರು ದಿನ ಉದ್ಯೋಗ ನೀಡುವುದು ಕಡ್ಡಾಯವಾಗಿದೆ. ಸಾರ್ವನಿಕರಿಗೆ, ರೈತರಿಗೆ ಅನುಕೂಲವಾಗುವ ಯೋಜನೆಗಳ ಕ್ರಿಯಾಯೋಜನೆ ತಯಾರಿಸಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರಿಗೆ ಉದ್ಯೋಗ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಅಂಗವಿಕರು ಮತ್ತು ವಯೋವೃದ್ದರಿಂದ ಕಡಿಮೆ ಕೆಲಸ ಮಾಡಿಸಿ ಪೂರ್ಣಪ್ರಮಾಣದ ಕೂಲಿ ಹಣ ನೀಡಬೇಕು. ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಕಾರ್ಮಿಕರು ಕೆಲಸ ಮಾಡುವ ಸ್ಥಳದಲ್ಲಿ ಕುಡಿಯುವ ನೀರು, ನೆರಳು ಸೇರಿದಂತೆ ಮೂಲಸೌಕರ್ಯಕಲ್ಪಿಸಬೇಕು ಎಂದು ಸೂಚಿಸಿದರು.

ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶನಿವಾರ 5954 ನರೇಗಾ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅಧಿಕಾರಿಗಳು ನೀಡಿದ ಮಾಹಿತಿಗೆ ಸಿಡಿಮಿಡಿಗೊಂಡ ತಾಲ್ಲೂಕು ಉಸ್ತುವಾರಿ ಕಾರ್ಯದರ್ಶಿ ಚನ್ನಪ್ಪ, ನಿತ್ಯ ಕನಿಷ್ಟ 10 ಸಾವಿರ ಕಾರ್ಮಿಕರು ಕೆಲಸ ಮಾಡುವಂತೆ ನೋಡಿಕೊಳ್ಳಿ ಎಂದು ತಾಕೀತುಮಾಡಿದರು.

ನರೇಗಾ ಕಾರ್ಮಿಕರು ಅಳತೆಗೆ ತಕ್ಕಂತೆ ಕೆಲಸ ಮಾಡಬೇಕು. ಕಡ್ಡಾಯವಾಗಿ ಪ್ರತಿನಿತ್ಯ ಎರಡು ಬಾರಿ ಆ್ಯಪ್ ಮೂಲಕ ಹಾಜರಾತಿ ಹಾಕಬೇಕು. ಕಾಯಕ ಬಂಧುಗಳು ಕಾರ್ಮಿಕರಿಗೆ ನಿತ್ಯ ಕೆಲಸದ ಅಳತೆ ನೀಡುವ ಜತೆಗೆ ನರೇಗಾ ಮತ್ತು ವಿಬಿಜಿ ರಾಮ್ ಜಿ ಯೋಜನೆಯ ಬಗ್ಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.ಎನ್ಎಂಯಆರ್ ಪಡೆದು ಕಾರ್ಮಿಕರು ಕಡ್ಡಾಯವಾಗಿ ಕೆಲಸಕ್ಕೆ ಹಾಜರಾಗಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಕೆಲಸಕ್ಕೆ ಹಾಜರಾಗುವಂತೆ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.

ನರೇಗಾ ಸಹಾಯಕ ನಿರ್ದೇಶಕ ಶಿವರಾಮ ರೆಡ್ಡಿ, ಪಿಡಿಒ ಸಿ. ಪರಶುರಾಮ್ ಮತ್ತು ಎಂಐಸಿ ಸಂಯೋಜಕ ಚಂದ್ರಶೇಖರ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೀನಕೆರೆ ಗ್ರಾಮದಲ್ಲಿ 3 ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ
ಡೆಂಘೀ, ಮಲೇರಿಯಾ ಮುಕ್ತ ಜಿಲ್ಲೆಯಾಗಲು ಶ್ರಮಿಸಿ: ಡಿಸಿ ಕವಿತಾ ಎಸ್.ಮನ್ನಿಕೇರಿ