ಸೋ.ಪೇಟೆ: ಫೂಟ್ ಥೆರಪಿ ಚಿಕಿತ್ಸಾ ಉಚಿತ ಶಿಬಿರ

KannadaprabhaNewsNetwork |  
Published : Jul 24, 2025, 01:45 AM IST
ಸೋಮವಾರಪೇಟೆ ತಾಲೂಕು ಪತ್ರಕರ್ತರ ಸಂಘ ಹಾಗೂ ವಾಹನ ಚಾಲಕರ ಸಂಘದಿಂದ ಫೂಟ್ ಥೆರಪಿ ಕಾರ್ಯಕ್ರಮ | Kannada Prabha

ಸಾರಾಂಶ

ಕೊಡಗು ಪತ್ರಕರ್ತರ ಸಂಘದ ಸೋಮವಾರಪೇಟೆ ತಾಲೂಕು ಘಟಕ, ವಾಹನ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘ ಹಾಗೂ ಕಂಪಾನಿಯೋ ಸಂಸ್ಥೆ ಸಹಯೋಗದಲ್ಲಿ ಬುಧವಾರ ವಾಹನ ಚಾಲಕರು ಮತ್ತು ಮೋಟಾರು ಮೋಟಾರು ಕೆಲಸಗಾರರ ಸಂಘದ ಸಭಾಂಗಣದಲ್ಲಿ ಸಾರ್ವಜನಿಕರಿಗೆ ಉಚಿತ ಫೂಟ್ ಪಲ್ಸ್ ಥೆರಪಿ ಚಿಕಿತ್ಸಾ ಶಿಬಿರ ನಡೆಯಿತು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ಕೊಡಗು ಪತ್ರಕರ್ತರ ಸಂಘದ ಸೋಮವಾರಪೇಟೆ ತಾಲೂಕು ಘಟಕ, ವಾಹನ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘ ಹಾಗೂ ಕಂಪಾನಿಯೋ ಸಂಸ್ಥೆ ಸಹಯೋಗದಲ್ಲಿ ಬುಧವಾರ ವಾಹನ ಚಾಲಕರು ಮತ್ತು ಮೋಟಾರು ಮೋಟಾರು ಕೆಲಸಗಾರರ ಸಂಘದ ಸಭಾಂಗಣದಲ್ಲಿ ಸಾರ್ವಜನಿಕರಿಗೆ ಉಚಿತ ಫೂಟ್ ಪಲ್ಸ್ ಥೆರಪಿ ಚಿಕಿತ್ಸಾ ಶಿಬಿರ ನಡೆಯಿತು.ಕಾರ್ಯಕ್ರಮವನ್ನು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು. ನಂತರ ಮಾತನಾಡಿ, ಜನರ ಜೀವನ ಶೈಲಿ ಬದಲಾಗುತ್ತಿರುವುದರಿಂದ ಆರೋಗ್ಯದ ಸಮಸ್ಯೆ ಹೆಚ್ಚಾಗುತ್ತಿದೆ. ಉತ್ತಮ ಆಹಾರ, ವ್ಯಾಯಾಮದಿಂದ ಹಿಂದೆ ಸರಿಯುತ್ತಿದ್ದು, ಸಿದ್ಧ ಆಹಾರಗಳನ್ನು ಬಳಸುವ ಮೂಲಕ ಆರೋಗ್ಯ ಹದಗೆಡುತ್ತಿದೆ. ದಿನಂಪ್ರತಿ ಸ್ವಲ್ಪ ಸಮಯವನ್ನಾದರೂ ವ್ಯಾಯಾಮಕ್ಕೆ ಅವಕಾಶ ಮಾಡಿಕೊಳ್ಳಬೇಕು. ವರ್ಷಕ್ಕೊವ್ಮ್ಮೆಯಾದರೂ, ಪೂರ್ಣ ಪ್ರಮಾಣದಲ್ಲಿ ನಮ್ಮ ಆರೋಗ್ಯವನ್ನು ತಪಾಸಣೆ ಮಾಡಿಸಿಕೊಳ್ಳುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದರು.ಫೂಟ್ ಥೆರಪಿ ಮೂಲಕ ಪಾದದಿಂದ ಚಿಕಿತ್ಸೆ ನೀಡಲಾಗುವುದು. ನಮ್ಮ ರಕ್ತ ಸಂಚಾರಕ್ಕೆ ಫೂಟ್ ಥೆರಪಿಯಿಂದ ಹೆಚ್ಚಿನ ಅನುಕೂಲವಾಗುವುದು. ವಾಹನ ಸವಾರರು ಶ್ರಮವಹಿಸಿ ಕೆಲಸ ಮಾಡುವ್ಯದುರಿಂದ ಈ ಥೆರಪಿಯಿಂದ ಹೆಚ್ಚಿನ ಅನುಕೂಲವಾಗುವುದು. ಸಾಧ್ಯವಾದಷ್ಟು ಜನರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಪತ್ರಕರ್ತರು ಹಾಗೂ ವಾಹನ ಚಾಲಕರು ಮತ್ತು ಮಾಲೀಕರ ಸಂಘದ ಸದಸ್ಯರಿಗೆ ಒಂದು ದಿನದ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಲಾಗುವುದು ಎಂದು ಹೇಳಿದರು.ಕಂಪಾನಿಯೋ ಸಂಸ್ಥೆಯ ವ್ಯವಸ್ಥಾಪಕ ಶಶಿಕಾಂತ್ ಪೂಜಾರಿ ಮಾತನಾಡಿ, ನಮ್ಮಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚು ಮಾಡಲು ಫೂಟ್ ಥೆರಪಿ ಬಹಳ ಉಪಯುಕ್ತವಾಗಿದೆ. ನಾವು ನೀಡುತ್ತಿರುವ ಅರ್ಧಗಂಟೆಯ ಫೂಟ್ ಥೆರಪಿ ೫ ಕಿಲೋ ಮೀಟರ್ ನಡಿಗೆಗೆ ಸಮನಾಗಿರುವುದು. ನಾವು ನಮ್ಮ ರಕ್ತಪರಿಚಲನೆಯನ್ನು ಸುಸ್ಥಿತಿಯಲ್ಲಿಡಲು ಕಲ್ಲು ಮತ್ತು ಮರಳಿನ ರಸ್ತೆಯಲ್ಲಿ ನಡೆಯಬೇಕು. ಇದರಿಂದ ನಮ್ಮ ಆರೋಗ್ಯ ಸುಧಾರಣೆಯೊಂದಿಗೆ, ಬಿಪಿ. ಸಕ್ಕರೆ ಕಾಯಿಲೆ, ನಿದ್ರಾಹೀನತೆ, ಪಾರ್ಶ್ವವಾಯು ಸೇರಿದಂತೆ ಹಲವು ಕಾಯಿಲೆಗಳನ್ನು ನಿಯಂತ್ರಣದಲ್ಲಿಡಬಹುದಾಗಿದೆ. ಇದರಿಂದ ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ. ಎಲ್ಲರಿಗೂ ೧೫ ದಿನಗಳ ಕಾಲು ಉಚಿತವಾಗಿ ಚಿಕತ್ಸೆ ನೀಡಲಾಗುತ್ತಿದ್ದು, ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಪತ್ರಕರ್ತರ ಸಂಘದ ಸೋಮವಾರಪೇಟೆ ತಾಲೂಕು ಘಟಕ ಅಧ್ಯಕ್ಷ ಎಚ್.ಆರ್. ಹರೀಶ್‌ ಕುಮಾರ್ ವಹಿಸಿದ್ದರು. ವೇದಿಕೆಯಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್, ವಾಹನ ಚಾಲಕರು ಮತ್ತು ಮೋಟಾರು ಮೋಟಾರು ಕೆಲಸಗಾರರ ಸಂಘದ ಅಧ್ಯಕ್ಷ ಬಾಲಕೃಷ್ಣ ಪ್ರಜಾರಿ, ಗೌರವಾಧ್ಯಕ್ಷ ಕೆ.ಜಿ. ಸುರೇಶ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗುಣಮಟ್ಟ ಸಾಹಿತ್ಯ ರಚಿಸಲು ಶುದ್ಧ ಮನಸ್ಸು ಅಗತ್ಯ
ಒಂದೇ ಒಂದು ಸರ್ಕಾರಿ ಶಾಲೆ ಮುಚ್ಚಬೇಡಿ