ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು. ಇದನ್ನು ಖಂಡಿಸಿ, ಸೋಮವಾರ ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಪಕ್ಷದ ತಾಲೂಕು ಘಟಕದ ಅಧ್ಯಕ್ಷ ಸಿ.ಎಸ್. ನಾಗರಾಜು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸೋಮವಾರಪೇಟೆ: ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು. ಇದನ್ನು ಖಂಡಿಸಿ, ಸೋಮವಾರ ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಪಕ್ಷದ ತಾಲೂಕು ಘಟಕದ ಅಧ್ಯಕ್ಷ ಸಿ.ಎಸ್. ನಾಗರಾಜು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ದಿನದಿಂದ ದಿನಕ್ಕೆ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಹಾಲು, ಮೊಸರು, ತುಪ್ಪ ಜನ ಸಾಮಾನ್ಯರು ಬಳಸದಂತೆ ಆಗಿದೆ. ಇದರೊಂದಿಗೆ ಕೆಸ್‌ಆರ್‌ಟಿಸಿ ಬಸ್ ದರವನ್ನು ಶೇ. 37ರಷ್ಟು ಹೆಚ್ಚಿಸಿದ್ದು, ಬಡವರು ಮತ್ತು ಕೂಲಿ ಕಾರ್ಮಿಕರಿಗೆ ಸಮಸ್ಯೆ ಎದುರಿಸುವಂತಾಗಿದೆ. ಸರ್ಕಾರ ಗ್ಯಾರಂಟಿ ಯೋಜನೆಯಲ್ಲಿ ಉಚಿತ ಕೊಡುಗೆಗಳನ್ನು ನೀಡುತ್ತಿರುವುದು ಹೆಚ್ಚಿನ ಸಮಸ್ಯೆಯಾಗಿದೆ. ಶಕ್ತಿ ಯೋಜನೆಯಲ್ಲಿ ಸರ್ಕಾರಿ ಅಧಿಕಾರಿಗಳು, ಉಳ್ಳವರು ಉಚಿತ ಪ್ರಯಾಣ ಮಾಡುತ್ತಿದ್ದಾರೆ. ನಿಜವಾದ ಫಲಾನುಭವಿಗಳು ಹಾಗೂ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ನೀಡಿದಲ್ಲಿ ಹೆಚ್ಚಿನ ಅನುಕೂಲವಾಗುತ್ತಿತ್ತು ಎಂದರು.
ರಾಜ್ಯದಲ್ಲಿ ಹತ್ತು ಹಲವು ಗುರುತರವಾದ ಸಮಸ್ಯೆಗಳಿದ್ದು, ಮೊದಲು ಅವುಗಳನ್ನು ಪರಿಹರಿಸುವುದನ್ನು ಬಿಟ್ಟು, ಉಳಿದ ಎಲ್ಲ ಕೆಲಸಗಳನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ದೂರಿದರು.
ಈ ಬಾರಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಿಗದಿಗೊಳಿಸಿದ್ದು, ಬಿಜೆಪಿ ಮತ್ತು ಜೆಡಿಎಸ್ ಒಂದಾಗಿ ಚುನಾವಣೆ ಎದುರಿಸಲಿದೆ. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳಿಗೆ ಸೀಟು ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸುವ ಮೂಲಕ ಎಲ್ಲದರ ಅಧಿಕಾರ ಹಿಡಿಯಲಾಗುವುದು ಎಂದರು.
ಪಕ್ಷದ ಪ್ರಮುಖರಾದ ಶಿವಪ್ಪ, ಮಸಗೋಡು ಸುರೇಶ್ ಹಾಗೂ ವಿಜೀಶ್ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.