ಕನ್ನಡಪ್ರಭ ವಾರ್ತೆ ನಾಗಮಂಗಲ
ಪಟ್ಟಣದ ತಾಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಮಾಸಿಕ ಸಭೆಯಲ್ಲಿ ಮಾತನಾಡಿ, ಗ್ಯಾರಂಟಿ ಯೋಜನೆಯಡಿ ಬರುವ ಎಲ್ಲಾ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ಸಮರ್ಪಕವಾಗಿ ತಲುಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪಂಚ ಗ್ಯಾರಂಟಿ ಯೋಜನೆಗಳಿಂದ ಅರ್ಹ ಫಲಾನುಭವಿಗಳು ವಂಚಿತರಾಗಿದ್ದರೆ ಅಂತಹ ಫಲಾನುಭವಿಗಳನ್ನು ಪತ್ತೆಹಚ್ಚಿ ಯೋಜನೆಗೆ ಒಳಪಡಿಸಬೇಕು. ಅರ್ಹ ಫಲಾನುಭವಿಗಳು ಈ ಯೋಜನೆಯಿಂದ ವಂಚಿತರಾಗಬಾರದು ಎಂದರು.ಯೋಜನೆಗಳನ್ನು ಇನ್ನಷ್ಟ ಪಾರದರ್ಶಕಗೊಳಿಸಲು ಸಚಿವ ಎನ್.ಚಲುವರಾಯಸ್ವಾಮಿ ಅವರ ನಿರ್ದೇಶನದಂತೆ ಇನ್ನು ಮುಂದೆ ತಾಲೂಕಿನ ಗ್ರಾಪಂ ಕೇಂದ್ರಗಳಲ್ಲಿ ಸಭೆ ನಡೆಸಲಾಗುವುದು. ಆ.29ರಂದು ನೆಲ್ಲಿಗೆರೆ ಗ್ರಾಪಂ ಕೇಂದ್ರದಲ್ಲಿ ಸಭೆ ನಡೆಸಲಾಗುವುದು ಎಂದರು.
ಡೇರಿ ಅಧ್ಯಕ್ಷರಾಗಿ ಎಸ್.ಡಿ.ನಾಗರಾಜು ಆಯ್ಕೆ
ಮಂಡ್ಯ:ತಾಲೂಕಿನ ಸೂನಗಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎಸ್.ಡಿ.ನಾಗರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾಲೂಕಿನ ಸೂಗನಹಳ್ಳಿ ಡೇರಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಎಸ್.ಡಿ.ನಾಗರಾಜು ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಎಸ್.ಡಿ.ನಾಗರಾಜು ಅವಿರೋಧವಾಗಿ ಆಯ್ಕೆಗೆ ಸಹಕರಿಸಿದ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಹಾಗೂ ಸದಸ್ಯರು, ಜೆಡಿಎಸ್ ಕಾರ್ಯಕರ್ತರು, ಮುಖಂಡರು, ಗ್ರಾಮಸ್ಥರಿಗೆ ಅಭಿನಂದನೆ ಸಲ್ಲಿಸಿದ್ದಾರೆ.