ಜ.3ರಿಂದ ಸೋಮೇಶ್ವರೋತ್ಸವ-2025: ಪ್ರಭಾವತಿ

KannadaprabhaNewsNetwork |  
Published : Jan 01, 2025, 12:00 AM IST
ಕ್ಯಾಪ್ಷನ31ಕೆಡಿವಿಜಿ37 ದಾವಣಗೆರೆಯ ಸೋಮೇಶ್ವರ ವಿದ್ಯಾಸಂಸ್ಥೆಯಿಂದ ಸೋಮೇಶ್ವರೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿರುವ ಕುರಿತು ಪ್ರಾಚಾರ್ಯೆ ಪ್ರಭಾವತಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. | Kannada Prabha

ಸಾರಾಂಶ

ನಗರದ ಶ್ರೀ ಸೋಮೇಶ್ವರ ವಿದ್ಯಾಸಂಸ್ಥೆಯಿಂದ ಜ.3, 4 ಹಾಗೂ 5ರಂದು ಸೋಮೇಶ್ವರೋತ್ಸವ-2025 ಕಾರ್ಯಕ್ರಮವನ್ನು ವಿದ್ಯಾಸಂಸ್ಥೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಚಾರ್ಯೆ ಪ್ರಭಾವತಿ ದಾವಣಗೆರೆಯಲ್ಲಿ ಹೇಳಿದ್ದಾರೆ.

- ಕಾರ್ಯಕ್ರಮದಲ್ಲಿ ಸೋಮೇಶ್ವರ ಸಿರಿ ಪ್ರಶಸ್ತಿ ನೀಡಿ ಗೌರವ: ಪ್ರಾಚಾರ್ಯೆ ಪ್ರಭಾವತಿ ಮಾಹಿತಿ । ವಿವಿಧ ಗಣ್ಯರು ಭಾಗಿ - - - ಕನ್ನಡಪ್ರಭ ವಾರ್ತೆ ದಾವಣಗೆರೆ ನಗರದ ಶ್ರೀ ಸೋಮೇಶ್ವರ ವಿದ್ಯಾಸಂಸ್ಥೆಯಿಂದ ಜ.3, 4 ಹಾಗೂ 5ರಂದು ಸೋಮೇಶ್ವರೋತ್ಸವ-2025 ಕಾರ್ಯಕ್ರಮವನ್ನು ವಿದ್ಯಾಸಂಸ್ಥೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಚಾರ್ಯೆ ಪ್ರಭಾವತಿ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜ.3ರಂದು ಸಂಜೆ 5.45 ಗಂಟೆಗೆ ನಡೆಯುವ ಸಮಾರಂಭದ ಸಾನಿಧ್ಯವನ್ನು ಹುಬ್ಬಳ್ಳಿಯ ಚಿನ್ಮಯ ಮಿಷನ್‌ನ ಸ್ವಾಮಿ ಕೃತಾತ್ಮಾನಂದಶ್ರೀ ವಹಿಸಲಿದ್ದಾರೆ. ಸಾಹಿತಿ ಅಶೋಕ ಹಂಚಲಿ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯ ಸಚೇತಕ ಡಾ.ಎ.ಎಚ್ ಶಿವಯೋಗಿಸ್ವಾಮಿ, ಮಾಜಿ ಶಾಸಕ ಅರುಣ ಕುಮಾರ್ ಭಾಗವಹಿಸುವರು. ಅಂದು ನಡೆಯುವ ಸಮಾರಂಭದಲ್ಲಿ ನಿವೃತ್ತ ಶಿಕ್ಷಕ ಮಹಾಲಿಂಗಪ್ಪ ಯಾದವ್, ಫಿಜಿಯೋಥೆರಪಿಸ್ಟ್ ಡಾ.ಬಸವರಾಜ ಶಿವಪೂಜೆ ಅವರಿಗೆ ಸೋಮೇಶ್ವರ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.

ಜ.4ರಂದು ಸಂಜೆ 5.45 ಗಂಟೆಗೆ ಸಮಾರಂಭದ ಸಾನಿಧ್ಯವನ್ನು ಹರಿಹರ ಪಂಚಮಸಾಲಿ ಗುರುಪೀಠದ ಶ್ರೀ ವಚನಾನಂದ ಸ್ವಾಮೀಜಿ ವಹಿಸಲಿದ್ದಾರೆ. ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಪ್ರತಿಭಾ ಪುರಸ್ಕಾರ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಸಾಪ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ಆಗಮಿಸಲಿದ್ದಾರೆ. ಮಕ್ಕಳನ್ನು ಸತ್ಪ್ರಜೆಗಳಾಗಿ ರೂಪಿಸುವಲ್ಲಿ ಕುಟುಂಬದ ಪಾತ್ರ ವಿಷಯ ಕುರಿತು ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತೆ ಕು.ಹಾರಿಕಾ ಮಂಜುನಾಥ್ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕೆನರಾ ಬ್ಯಾಂಕ್ ಎಂಪ್ಲಾಯಿಸ್ ಯೂನಿಯನ್ ರಾಷ್ಟ್ರೀಯ ಕಾರ್ಯದರ್ಶಿ ಕೆ.ರಾಘವೇಂದ್ರ ನಾಯರಿ ಅವರಿಗೆ ಸೋಮೇಶ್ವರ ಸಿರಿ ಪ್ರಶಸ್ತಿ ನೀಡಲಾಗುವುದು. ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯ ಪಠ್ಯಕ್ರಮದಲ್ಲಿ ಪ್ರಥಮ ಸ್ಥಾನ ಪಡೆದ ವೈ.ಎಂ. ಸೃಜನಾ ಹಾಗೂ ಕೇಂದ್ರ ಪಠ್ಯಕ್ರಮದಲ್ಲಿ ಪ್ರಥಮ ಸ್ಥಾನ ಪಡೆದ ಎಚ್.ಎಂ. ಪವನ್ ಅವರಿಗೆ ಸೋಮೇಶ್ವರ ಸಾಧನಾ ಸಿರಿ ಹಾಗೂ ₹25 ಸಾವಿರ ನಗದು ಪುರಸ್ಕಾರ ನೀಡಲಾಗುವುದು ಎಂದು ಪ್ರಭಾವತಿ ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಪಿ.ಎನ್. ಪರಮೇಶ್ವರಪ್ಪ, ಎಚ್.ಕೆ.ಗಾಯತ್ರಿ, ಎನ್.ಆರ್. ಹರೀಶ್ ಬಾಬು ಉಪಸ್ಥಿತರಿದ್ದರು.

- - -

ಬಾಕ್ಸ್‌ * ಜ.5ರಂದು ಸಂಜೆ 5.45 ಗಂಟೆಗೆ ನಡೆಯುವ ಸಮಾರಂಭದಲ್ಲಿ ಕಣ್ವಕುಪ್ಪೆ ಗವಿಮಠದ ಶ್ರೀ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಎಸ್.ಎ. ರವೀಂದ್ರನಾಥ್, ಡಿಡಿಪಿಐ ಜಿ.ಕೊಟ್ರೇಶ್, ಉದ್ಯಮಿ ಬಿ.ಸಿ.ಉಮಾಪತಿ, ಡಾ.ಅಂದನೂರು ರುದ್ರಮುನಿ ಭಾಗವಹಿಸುವರು. ನಿವೃತ್ತ ಶಿಕ್ಷಕರಾದ ಮಳಲಕೆರೆ ಗುರುಮೂರ್ತಿ ಅವರಿಗೆ ಸೋಮೇಶ್ವರ ಶಿಕ್ಷಣ ಸಿರಿ ಪುರಸ್ಕಾರದೊಂದಿಗೆ ಗೌರವಿಸಲಾಗುವುದು. ಹಿರಿಯ ಪತ್ರಕರ್ತರಾದ ರಮೇಶ್ ಜಹಗೀರದಾರ್, ದೇವಿಕಾ ಸುನೀಲ್ ಅವರಿಗೆ ಸೋಮೇಶ್ವರ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಸಂಜೆ ಖ್ಯಾತ ಸುಗಮ ಸಂಗೀತ ಗಾಯಕಿ ಎಂ.ಡಿ.ಪಲ್ಲವಿ ಹಾಗೂ ನಟ ರಮೇಶ್ ಅರವಿಂದ್ ಅವರ ಹೃದಯಸ್ಪರ್ಶಿ ಸಂಜೆ ನಡೆಯಲಿದೆ ಎಂದರು.-(ಫೋಟೋಗಳು: ಎಂ.ಡಿ.ಪಲ್ಲವಿ, ರಮೇಶ್‌ ಅರವಿಂದ್‌)

- - - -31ಕೆಡಿವಿಜಿ37:

ದಾವಣಗೆರೆಯ ಸೋಮೇಶ್ವರ ವಿದ್ಯಾಸಂಸ್ಥೆಯಿಂದ ಸೋಮೇಶ್ವರೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿರುವ ಕುರಿತು ಪ್ರಾಚಾರ್ಯೆ ಪ್ರಭಾವತಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

PREV

Recommended Stories

ಹಿಂದೂ ಮಹಾಗಣಪತಿ ಮೂರ್ತಿಯ ವಿಸರ್ಜನೆ
ಪ್ಲಾನಿಂಗ್‌ ಆ್ಯಂಡ್ ಆರ್ಕಿಟೆಕ್ಚರ್‌ ಸ್ಕೂಲ್‌ ಆರಂಭಕ್ಕೆ ಸಿದ್ಧತೆ: ಡಿಕೆಶಿ