ಸೋಮವಾರಪೇಟೆ: ರಾಜ್ಯ ಸರ್ಕಾರ ವಿರುದ್ದ ಬಿಜೆಪಿ ಪ್ರತಿಭಟನೆ

KannadaprabhaNewsNetwork |  
Published : Jul 22, 2026, 02:45 AM IST
ನೈಜ ಫಲಾನುಭವಿಗಳಿಗೆ ವೃದ್ದಾಪ್ಯ ವೇತನ, ವಿಧವಾ ವೇತನ, ಅಂಗವಿಕಲರ ಮಾಸಾಶನಕ್ಕೆ ತಡೆ: ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ | Kannada Prabha

ಸಾರಾಂಶ

ನೈಜ ಫಲಾನುಭವಿಗಳ ವೃದ್ದಾಪ್ಯವೇತನ, ವಿಧವಾ ವೇತನ, ಅಂಗವಿಕಲರ ಮಾಸಾಶನ ತಡೆಹಿಡಿಯುವ ಮೂಲಕ ಜನವಿರೋಧಿ ನೀತಿಯನ್ನು ರಾಜ್ಯ ಸರ್ಕಾರ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಯುವಮೋರ್ಚಾ ವತಿಯಿಂದ ಪಟ್ಟಣದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಸೋಮವಾರಪೇಟೆ: ನೈಜ ಫಲಾನುಭವಿಗಳ ವೃದ್ದಾಪ್ಯವೇತನ, ವಿಧವಾ ವೇತನ, ಅಂಗವಿಕಲರ ಮಾಸಾಶನ ತಡೆಹಿಡಿಯುವ ಮೂಲಕ ಜನವಿರೋಧಿ ನೀತಿಯನ್ನು ರಾಜ್ಯ ಸರ್ಕಾರ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಯುವಮೋರ್ಚಾ ವತಿಯಿಂದ ಪಟ್ಟಣದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಸರ್ಕಾರ ಬಡ ಜನರ ಮೇಲೆ ಹೇರುತ್ತಿರುವ ಅಮಾನವೀಯ ನಿಯಮಗಳ ವಿರುದ್ಧ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರದಿಂದ ವರದಿ ಕೇಳಿದೆ. ಆದರೆ ಆಹಾರ ಇಲಾಖೆಯ ತಳಮಟ್ಟದ ಅಧಿಕಾರಿಗಳು ಹಾಗು ನ್ಯಾಯ ಬೆಲೆ ಅಂಗಡಿಯವರು ಜಾತಿ ಪ್ರಮಾಣ ಪತ್ರ ಒದಗಿಸುವಂತೆ ಹೇಳುತ್ತಾ, ಜಾತಿ ಪ್ರಮಾಣ ಪತ್ರ ನೀಡದ ಬಡವರಿಗೆ ಪಡಿತರ ನೀಡಲು ನಿರಾಕರಿಸುತ್ತಿದ್ದು, ಬಡವರು, ವೃದ್ಧರು ಕಂದಾಯ ಇಲಾಖೆ ಮುಂದೆ ಗೋಗರೆಯುತ್ತಿದ್ದಾರೆ. ವೃದ್ದರು ಸೂಕ್ತ ದಾಖಲಾತಿಗಾಗಿ ಪರದಾಡುತ್ತಿದ್ದಾರೆ. ಕೂಡಲೇ ರಾಜ್ಯಪಾಲರು ಈ ವಿಷಯದಲ್ಲಿ ಮಧ್ಯ ಪ್ರವೇಶ ಮಾಡಿ, ಬಡವರನ್ನು ರಕ್ಷಿಸಬೇಕು ಎಂದು ತಹಸೀಲ್ದಾರ್ ಕೃಷ್ಣಮೂರ್ತಿ ಮೂಲಕ ರಾಜ್ಯ ಪಾಲರಿಗೆ ಮನವಿ ಪತ್ರ ಸಲ್ಲಿಸಿದರು.

ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ವೃದ್ಧಾಪ್ಯ, ಅಂಗವಿಕಲ, ವಿಧವಾ ವೇತನವನ್ನು ನಂಬಿಕೊಂಡಿರುವ ಹೆಚ್ಚಿನ ವೃದ್ದರಿಗೆ ಕಳೆದ ಹಲವು ತಿಂಗಳಿನಿಂದ ಮಾಸಾಶನ ಬರುತ್ತಿಲ್ಲ. ಮಾಸಶನವನ್ನೇ ನಂಬಿಕೊಂಡಿದ್ದ ವೃದ್ಧರು ಉಪವಾಸ ಮಾಡುವಂತಾಗಿದೆ. ಮಾತ್ರೆ, ಔಷಧಕ್ಕೆ ಹಣವಿಲ್ಲದೆ ರೋಗಗಳು ಉಲ್ಬಣವಾಗುತ್ತಿರುವ ಬಗ್ಗೆ ಅನೇಕರು ಸಂಕಷ್ಟ ಹೇಳಿಕೊಂಡಿದ್ದಾರೆ. ಆಹಾರವು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕಾಗಿದೆ. ತಾಂತ್ರಿಕ ಮತ್ತು ಆಡಳಿತಾತ್ಮಕ ಕಾರಣಗಳನ್ನು ನೀಡಿ ಬಡವರಿಗೆ ರೇಷನ್ ನಿರಾಕರಿಸುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಹೇಳಿದರು.

ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ, ತಾಲೂಕು ಘಟಕದ ಅಧ್ಯಕ್ಷ ಮೋಹಿತ್, ಮಂಡಲ ಅಧ್ಯಕ್ಷ ಗೌತಮ್ ಗೌಡ, ಮುಖಂಡರಾದ ಚಂದ್ರಶೇಖರ್ ಹೆರೂರು, ದರ್ಶನ್ ಜೋಯಪ್ಪ, ಕವಿತಾ ವಿರೂಪಾಕ್ಷ, ತಂಗಮ್ಮ, ಮಂಜುಳಾ ಸುಬ್ರಮಣಿ, ಸವಿತಾ ಸತೀಶ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪೆರ್ಣಂಕಿಲ ಕ್ಷೇತ್ರದ ಮಹಾರಥ, ಅಂಗಣ ಚಪ್ಪರಕ್ಕೆ ಮುಹೂರ್ತ
ದೆಹಲಿ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ಖಂಡನೀಯ: ಮೊಳಹಳ್ಳಿ ದಿನೇಶ್ ಹೆಗ್ಡೆ