ಡಿಸೆಂಬರ್ 24,25ರಂದು ಸೋಮವಾರಪೇಟೆ ಕೊಡವ ಸಮಾಜ ಸುವರ್ಣ ಮಹೋತ್ಸವ

KannadaprabhaNewsNetwork |  
Published : Sep 27, 2024, 01:21 AM IST
ಡಿ. ೨೪ ಹಾಗೂ ೨೫ರಂದುಕೊಡವ ಸಮಾಜದ ಸುವರ್ಣ ಮಹೋತ್ಸವ ಸಮಾರಂಭ | Kannada Prabha

ಸಾರಾಂಶ

ಸೋಮವಾರಪೇಟೆ ಕೊಡವ ಸಮಾಜದ ಸುವರ್ಣ ಮಹೋತ್ಸವ ಸಮಾರಂಭವನ್ನು ಡಿ.೨೪ ಹಾಗೂ ೨೫ರಂದು ಸಮಾಜದ ಸಭಾಂಗಣದಲ್ಲಿ ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಮಾಜದ ಅಧ್ಯಕ್ಷ ಮಾಳೇಟಿರ ಅಭಿಮನ್ಯುಕುಮಾರ್ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ಇಲ್ಲಿನ ಕೊಡವ ಸಮಾಜದ ಸುವರ್ಣ ಮಹೋತ್ಸವ ಸಮಾರಂಭವನ್ನು ಡಿ.೨೪ ಹಾಗೂ ೨೫ರಂದು ಸಮಾಜದ ಸಭಾಂಗಣದಲ್ಲಿ ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಮಾಜದ ಅಧ್ಯಕ್ಷ ಮಾಳೇಟಿರ ಅಭಿಮನ್ಯುಕುಮಾರ್ ಹೇಳಿದ್ದಾರೆ.

ಸುವರ್ಣ ಮಹೋತ್ಸವ ಸಮಾರಂಭ ಆಚರಣೆ ಕುರಿತು ಕೊಡವ ಸಮಾಜದಲ್ಲಿ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ೧೯೭೪ರಲ್ಲಿ ಪ್ರಾರಂಭಗೊಂಡ ಸೋಮವಾರಪೇಟೆ ಕೊಡವ ಸಮಾಜ ಸುವರ್ಣ ಮಹೋತ್ಸವ ಆಚರಣೆಯ ಹೊಸ್ತಿಲಿನಲ್ಲಿ ಇದ್ದು ಜಿಲ್ಲೆಯ ಮತ್ತು ರಾಜ್ಯದ ಇತರೆಡೆಯ ಕೊಡವ ಸಮಾಜಗಳ ಸಂಪೂರ್ಣ ಸಹಕಾರ ಅತ್ಯಗತ್ಯ ಎಂದರು.

ಸುವರ್ಣಮಹೋತ್ಸವ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಕ್ರೀಡಾ ಸ್ಪರ್ಧೆಗಳು ನಡೆಯಲಿವೆ. ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ, ಇದುವರೆಗೂ ಸಮಾಜ ಬೆಳೆದ ಬಂದ ರೀತಿ, ಸಾಧನೆ ಹಾಗೂ ಬರಹಗಾರರ ಕಥೆ, ಕವನ, ಲೇಖನಗಳನ್ನೊಳಗೊಂಡ ಸ್ಮರಣ ಸಂಚಿಕೆ ಹೊರತರಲಾಗುವುದು ಎಂದರು.

ಕಾರ್ಯಕ್ರಮದ ಯಶಸ್ಸಿಗಾಗಿ ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು. ಪೂರ್ವಭಾವಿ ಸಭೆಯಲ್ಲಿ ಸಮಾಜದ ಸದಸ್ಯರು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

ಸಮಾಜದ ಉಪಾಧ್ಯಕ್ಷ ಬೊಳಂದಂಡ ಕುಟ್ಟಪ್ಪ, ಕಾರ್ಯದರ್ಶಿ ಅನಿಲ್, ಖಜಾಂಚಿ ಪಾಡೆಯಂಡ ಮುತ್ತಣ್ಣ ಸೇರಿದಂತೆ ಆಡಳಿತ ಮಂಡಳಿ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!