ಸೋಮವಾರಪೇಟೆ ವಿವಿಧೋದ್ದೇಶ ಸಹಕಾರ ಸಂಘ ಶೇ. 20 ಲಾಭಾಂಶ ಘೋಷಣೆ

KannadaprabhaNewsNetwork |  
Published : Jun 11, 2026, 01:30 AM IST
ವಿವಿದ್ಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ20 ಲಾಭಾಂಶ ವಿತರಿಸಲು ತೀರ್ಮಾನ | Kannada Prabha

ಸಾರಾಂಶ

ವಿವಿಧೋದ್ದೇಶ ಸಹಕಾರ ಸಂಘದ ೨೦೨೫-೨೬ನೇ ಸಾಲಿನ ವಾರ್ಷಿಕ ಮಹಾಸಭೆ ಭಾನುವಾರ ಚನ್ನಬಸಪ್ಪ ಸಭಾಂಗಣದಲ್ಲಿ ಅಧ್ಯಕ್ಷ ಎನ್.ಟಿ. ಪರಮೇಶ್ ಅಧ್ಯಕ್ಷತೆಯಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ಇಲ್ಲಿನ ವಿವಿಧೋದ್ದೇಶ ಸಹಕಾರ ಸಂಘದ ೨೦೨೫-೨೬ನೇ ಸಾಲಿನ ವಾರ್ಷಿಕ ಮಹಾಸಭೆ ಭಾನುವಾರ ಚನ್ನಬಸಪ್ಪ ಸಭಾಂಗಣದಲ್ಲಿ ಅಧ್ಯಕ್ಷ ಎನ್.ಟಿ. ಪರಮೇಶ್ ಅಧ್ಯಕ್ಷತೆಯಲ್ಲಿ ನಡೆಯಿತು.

ಪ್ರಸಕ್ತ ಸಾಲಿನಲ್ಲಿ ಸಂಘದ ಮೂಲಕ ೧೩೬ ಕೋಟಿ ರು. ವ್ಯವಹಾರ ಮಾಡುವ ಮೂಲಕ ೫೫ ಲಕ್ಷ ರು. ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ. ೨೦ ಲಾಭಾಂಶ ನೀಡುವ ಬಗ್ಗೆ ಸಭೆ ತೀರ್ಮಾನಿಸಿತು.

ಸಂಘದ ಅಧ್ಯಕ್ಷ ಪರಮೇಶ್ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಸದಸ್ಯರ ಸಹಕಾರದಿಂದ ಹೆಚ್ಚಿನ ಲಾಭ ಗಳಿಸಲು ಸಾಧ್ಯವಾಗಿದೆ. ಸದಸ್ಯರು ಮತ್ತು ಸಾರ್ವಜನಿಕರು ಸಂಘದ ಮೇಲಿನ ನಂಬಿಕೆಯಿಂದ ಕಳೆದ ಸಾಲಿನಲ್ಲಿ ೨೦ ಕೋಟಿ ರು. ನಿರಖು ಠೇವಣಿ ಇರಿಸಿದ್ದಾರೆ. ಸದಸ್ಯರು ಮತ್ತು ಸಾರ್ವಜನಿಕರಿಗೆ ವಿವಿಧ ಉದ್ದೇಶಗಳಿಗೆ ೩೦ ಕೋಟಿ ರು. ಸಾಲ ವಿತರಿಸಲಾಗಿದೆ ಎಂದರು.

ಸಭೆಯಲ್ಲಿ ಸಂಘದ ಹಿರಿಯ ಸದಸ್ಯರಾದ ಸದಾಶಿವ ಮಾತನಾಡಿದರು. ಶೈಕ್ಷಣಿಕ ವಿಭಾಗದಲ್ಲಿ ಸಂಘದ ಸದಸ್ಯರ ಮಕ್ಕಳು ಸಾಧನೆ ಮಾಡಿದರೆ ಅಂತಹವರನ್ನು ಗುರುತಿಸಿ ಗೌರವಿಸಬೇಕೆಂದು ಸದಸ್ಯ ಕೆ.ಎನ್. ತೇಜಸ್ವಿ ಸಲಹೆ ನೀಡಿದರು. ಈ ಬಗ್ಗೆ ಮುಂದಿನ ಸಭೆಗಳಲ್ಲಿ ನಿರ್ಣಯಿಸಲಾಗುವುದು ಎಂದು ಅಧ್ಯಕ್ಷರು ತಿಳಿಸಿದರು.

ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಬಿ. ಶಿವಪ್ಪ, ನಿರ್ದೇಶಕರಾದ ಎಚ್.ಕೆ. ಮಾದಪ್ಪ, ಬಿ.ಪಿ. ಶಿವಕುಮಾರ್, ಬಿ.ಎಂ. ರಾಮ್ ಪ್ರಸಾದ್, ಎಂ. ಶ್ರೀಕಾಂತ್, ಬಿ.ಆರ್. ಮೃತ್ಯುಂಜಯ, ಎಂ.ಸಿ. ರಾಘವ, ಎಚ್.ಎಸ್. ವೆಂಕಪ್ಪ, ಕೆ.ಬಿ. ಸುರೇಶ್, ಎಂ.ಜೆ. ದರ್ಶನ್, ಸಿ.ಎನ್. ಶೋಭಿತ ಹಾಗೂ ಎಸ್.ಸಿ. ರೂಪ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಬಿ. ತಾರಾ ಇದ್ದರು. ಸರ್ಕಾರಿ ಶಾಲೆಯಲ್ಲಿ ಓದಿ ಕಳೆದ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಸದಸ್ಯೇತರ ಮಕ್ಕಳಿಗೆ ಅವರ ಶಿಕ್ಷಣ ಉತ್ತೇಜಿಸುವ ನಿಟ್ಟಿನಲ್ಲಿ ಶಿರಂಗಾಲ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಪ್ರಣಯ್ (೯೫.೮೦) ಹಾಗೂ ಕೂಡುಮಂಗಳೂರು ಸರ್ಕಾರಿ ಶಾಲೆಯ ಬಿ. ದಿಶಾ (೯೫.೩೬) ಅವರನ್ನು ಗೌರವ ಧನ ನೀಡಿ ಸನ್ಮಾನಿಸಲಾಯಿತು. ಇದೇ ಸಂದರ್ಭ ಸಂಘದ ಸದಸ್ಯರಿಗೆ ಹಾಗೂ ಸಾರ್ವಜನಿಕರಿಗೆ ಹಾಸನ ಕೆ.ಆರ್. ಪುರಂ ಐ ದೃಷ್ಠಿ ಕಣ್ಣಿನ ಆಸ್ಪತ್ರೆ ವತಿಯಿಂದ ಉಚಿತ ನೇತ್ರ ತಪಾಸಣೆ ಶಿಬಿರ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ವೆಗೆ ಬಂದು ರೈತರಿಗೆ ಹೆದರಿ ಕಾಲ್ಕಿತ್ತ ಅಧಿಕಾರಿಗಳು!
ಶಾಸಕ ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ನೀಡಿ