ಸೋಮವಾರಪೇಟೆ: ಸಾರ್ವಜನಿಕರ ಕುಂದುಕೊರತೆ ಜನಸಂಪರ್ಕ ಸಭೆ

KannadaprabhaNewsNetwork |  
Published : Oct 02, 2026, 02:45 AM IST
ಡಾ.ಮಂತರ್‌ಗೌಡ  | Kannada Prabha

ಸಾರಾಂಶ

ತಾಲೂಕಿನ ನೇರುಗಳಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಲಕನೂರು ಕಾಟಿಕೊಪ್ಪಲು ಗ್ರಾಮದಲ್ಲಿ ಶಾಸಕ ಡಾ. ಮಂತರ್‌ ಗೌಡ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಾರ್ವಜನಿಕರ ಕುಂದುಕೊರತೆ ಜನಸಂಪರ್ಕ ಸಭೆಯಲ್ಲಿ ಹಕ್ಕುಪತ್ರ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದರು.

ಸೋಮವಾರಪೇಟೆ : ತಾಲೂಕಿನ ನೇರುಗಳಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಲಕನೂರು ಕಾಟಿಕೊಪ್ಪಲು ಗ್ರಾಮದಲ್ಲಿ ಶಾಸಕ ಡಾ. ಮಂತರ್‌ ಗೌಡ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಾರ್ವಜನಿಕರ ಕುಂದುಕೊರತೆ ಜನಸಂಪರ್ಕ ಸಭೆಯಲ್ಲಿ ಹಕ್ಕುಪತ್ರ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದರು.

ಕಾಟಿಕೊಪ್ಪಲು ಗ್ರಾಮದ ಸರ್ವೇ ನಂ. 36/6 ರ ಜಾಗದ ವಿಚಾರ ಪ್ರಮುಖವಾಗಿ ಪ್ರಸ್ತಾಪವಾಯಿತು. 1950 ರ ಜಮಾಬಂದಿ ದಾಖಲೆಗಳ ಪ್ರಕಾರ ಈ ಜಾಗ ಪೈಸಾರಿ ಎಂದು ದಾಖಲಾಗಿದ್ದು, ಗ್ರಾಮದಲ್ಲಿರುವ 40ಕ್ಕೂ ಹೆಚ್ಚು ಕುಟುಂಬಗಳು ತಲಾ 3 ಸೆಂಟ್ಸ್‌ ಜಾಗಕ್ಕೆ 3,500 ರು., ಪಾವತಿಸಿ 2021ರಲ್ಲಿ ಸರ್ಕಾರಕ್ಕೆ ಹಕ್ಕುಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.ಹೇಮಾವತಿ ನದಿ ಮುಳುಗಡೆಯಿಂದ ನಿರಾಶ್ರಿತರಾದ 50 ಕುಟುಂಬಗಳಿಗೆ ಇದೇ ಸರ್ವೇ ನಂಬರ್‌ನಲ್ಲಿ ಸರ್ಕಾರದಿಂದ ಒ.ಎಂ. ಫಾರಂ ನೀಡಲಾಗಿದೆ. ಅಲ್ಲದೆ, 2006 ರಲ್ಲಿ ಅಂದಿನ ಜಿಲ್ಲಾಧಿಕಾರಿ ಸುಭಾಷ್ ಯಾದವ್ ಅವರು ಸರ್ವೇ ನಂ. 36/6 ರಲ್ಲಿ ಸುಮಾರು 150 ಎಕರೆ ಜಾಗವನ್ನು ಜನರಿಗೆ ಮನೆ ನಿರ್ಮಿಸಿಕೊಳ್ಳಲು ಹಕ್ಕುಪತ್ರ ನೀಡುವ ಉದ್ದೇಶದಿಂದ ಕಾಯ್ದಿರಿಸಿ ಆದೇಶ ಹೊರಡಿಸಿದ್ದರು ಎಂದು ಗ್ರಾಮಸ್ಥರು ಸಭೆಯ ಗಮನಕ್ಕೆ ತಂದರು.

ಈ ಎಲ್ಲ ದಾಖಲೆಗಳಿದ್ದರೂ 3 ಸೆಂಟ್ ಜಾಗಕ್ಕೆ ಹಕ್ಕುಪತ್ರ ನೀಡದೆ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ. ಇದರಿಂದ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಸಚಿನ್ ಹೇಳಿದರು.

ಸರ್ವೇ ನಂ.36/6 ರ ಜಾಗವು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಹಾಗೂ ಗ್ರಾಮಸ್ಥರ ನಡುವೆ ಗೊಂದಲ ಉಂಟಾಗಿದ್ದು, ಅರಣ್ಯ ಇಲಾಖೆಯಿಂದಲೂ ಗ್ರಾಮಸ್ಥರಿಗೆ ತೊಂದರೆಯಾಗುತ್ತಿದೆ ಎಂದು ಸಭೆಯಲ್ಲಿ ದೂರಲಾಯಿತು.ಗ್ರಾಮಸ್ಥರ ಸಮಸ್ಯೆ ಆಲಿಸಿದ ಶಾಸಕ ಡಾ. ಮಂತರ್ ಗೌಡ ಮಾತನಾಡಿ, ಜನರ ಬದುಕಿನೊಂದಿಗೆ ಅಧಿಕಾರಿಗಳು ಆಟವಾಡಬಾರದು. ಜನರಿಗೆ ಸಮಸ್ಯೆಯ ಕುರಿತು ಸ್ಪಷ್ಟ ಮಾಹಿತಿ ನೀಡಿ, ಅವರಿಗೆ ಸಹಕಾರಿಯಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮದ ಕಿರಣ್ ಮಾತನಾಡಿ ಹಳೆ ಮದಲಾಪುರ ಜೇನು ಕುರುಬರ ಕಾಲೋನಿ ಹೋಗುವ ರಸ್ತೆ ಅಭಿವೃದ್ಧಿಗೆ ನಿರ್ಮಿತಿ ಕೇಂದ್ರದಿಂದ ಅಂದಾಜು 40 ಲಕ್ಷ ರು. ಹಣ ಬಿಡುಗಡೆ ಮಾಡಿದ್ದು ಕಾಂಕ್ರೀಟ್ ರಸ್ತೆ ಕಾಮಗಾರಿ ಕಳಪೆ ಆಗಿದೆ ಆರೋಪಿಸಿದರು. ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೆ ಇತ್ತ ಸುಳಿದಿಲ್ಲ. ರಸ್ತೆ ನಿರ್ಮಾಣಗೊಂಡು ಹದಿನೈದು ದಿನದಲ್ಲೇ ರಸ್ತೆ ಬಿರುಕು ಬಿಟ್ಟಿದೆ ಎಂದು ದೂರಿದರು. ಇದಕ್ಕೆ ಉತ್ತರ ನೀಡಿದ ಶಾಸಕರು ತಕ್ಷಣ ನಿರ್ಮಿತಿ ಕೇಂದ್ರದ ಇಂಜಿನಿಯರ್ ಗೆ ಸ್ಥಳದಲ್ಲೇ ಕರೆ ಮಾಡಿ ಇಲ್ಲಿ ನಡೆದಿರುವ ಕಾಮಗಾರಿ ಕಳೆಪೆ ಆಗಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಕೂಡಲೆ ಪರಿಶೀಲಿಸಿ ಕಾಮಗಾರಿಯನ್ನು ಮರು ನಿರ್ಮಾಣ ಮಾಡುವಂತೆ ತಿಳಿಸಿದರು.

ಸಭೆಯಲ್ಲಿ ಇಒ ಪರಮೇಶ ಕುಮಾರ್, ಗ್ಯಾರೆಂಟಿ ಅನುಷ್ಠಾನ ಸಮಿತಿ ಸದಸ್ಯ ಎಸ್.ಎಂ. ಡಿಸಿಲ್ವಾ, ಪಿ ಡಬ್ಲ್ಯೂ ಡಿ ಇಂಜಿನಿಯರ್ ಕುಮಾರ್, ಎಸಿಎಫ್ ನವೀನ್ ಕುಮಾರ್. ಆರ್‌ಎಫ್‌ಒ ಮಲ್ಲೇಶ್. ಸಮಾಜದ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದೇಗೌಡ. ಸೆಸ್ಕ್ ಎಇಇ ವಿನಯ್ ಕುಮಾರ್ ಇದ್ದರು.

--------------------------------------------

೩೦ಎಸ್‌ಪಿಟಿ೦೪: ಸೋಮವಾರಪೇಟೆ ತಾಲೂಕಿನ ಯಲಕನೂರು-ಕಾಟಿಕೊಪ್ಪಲು ಗ್ರಾಮದಲ್ಲಿ ಶಾಸಕ ಡಾ.ಮಂತರ್‌ಗೌಡ ಅವರು ರೈತರ ಸಮಸ್ಯೆಗಳನ್ನು ಆಲಿಸಿದರು. ಸಚಿನ್, ಪರಮೇಶ ಕುಮಾರ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಘು ಭೂಕಂಪನದಿಂದ ಆತಂಕ ಬೇಡ: ಭೂ ವಿಜ್ಞಾನಿ ಕೆ.ಚಂದ್ರಶೇಖರ
ಕೆಎಸ್‌ಆರ್‌ಟಿಸಿ: 11ರಿಂದ ದಸರಾ ಪ್ರಯುಕ್ತ ವಿಶೇಷ ಪ್ಯಾಕೇಜ್‌ ಪ್ರವಾಸ