ಸೋಮವಾರಪೇಟೆ: ಶಿಕ್ಷಕರಿಗೆ ರೋಟರಿ ನೇಷನ್ ಬಿಲ್ಡರ್‌ ಪ್ರಶಸ್ತಿ ಪ್ರದಾನ

KannadaprabhaNewsNetwork |  
Published : Sep 26, 2024, 10:08 AM IST
ರೋಟರಿ ಸಂಸ್ಥೆ ವತಿಯಿಂದ  ಶಿಕ್ಷಕರ ದಿನಾಚರಣೆ | Kannada Prabha

ಸಾರಾಂಶ

ಗೋಣಿಮರೂರು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎಚ್.ಆರ್. ಸುನಿತಾ, ದೊಡ್ಡಮಳ್ತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಎಸ್.ಎಂ. ಆಶಾ, ಜಕ್ಕನಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಗುಣವತಿ, ದೊಡ್ಡಮಳ್ತೆ ಅಂಗನವಾಡಿ ಶಿಕ್ಷಕಿ ಎಚ್.ಎಸ್. ಸವಿತ, ಬೆಟ್ಟದಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಕೆ.ಎನ್. ಕವಿತ ಹಾಗೂ ಗೌಡಳ್ಳಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜಿ.ಇ. ಪ್ರವೀಣ್ ಅವರಿಗೆ ನೇಷನ್ ಬಿಲ್ಡರ್ ಅವಾರ್ಡ್ ನೀಡಿ ಗೌರವಿಸಿತು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ಇಲ್ಲಿನ ರೋಟರಿ ಸಂಸ್ಥೆ ವತಿಯಿಂದ ರೋಟರಿ ಭವನದಲ್ಲಿ ಶಿಕ್ಷಕರ ದಿನಾಚರಣೆ ನಡೆಸಲಾಯಿತು.

ಗೋಣಿಮರೂರು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎಚ್.ಆರ್. ಸುನಿತಾ, ದೊಡ್ಡಮಳ್ತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಎಸ್.ಎಂ. ಆಶಾ, ಜಕ್ಕನಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಗುಣವತಿ, ದೊಡ್ಡಮಳ್ತೆ ಅಂಗನವಾಡಿ ಶಿಕ್ಷಕಿ ಎಚ್.ಎಸ್. ಸವಿತ, ಬೆಟ್ಟದಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಕೆ.ಎನ್. ಕವಿತ ಹಾಗೂ ಗೌಡಳ್ಳಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜಿ.ಇ. ಪ್ರವೀಣ್ ಅವರಿಗೆ ನೇಷನ್ ಬಿಲ್ಡರ್ ಅವಾರ್ಡ್ ನೀಡಿ ಗೌರವಿಸಿತು.

ಅಧ್ಯಕ್ಷತೆ ವಹಿಸಿದ್ದ ರೋಟರಿ ಅಧ್ಯಕ್ಷ ಜೆ.ಕೆ. ಪೊನ್ನಪ್ಪ ಮಾತನಾಡಿ, ಕಳೆದ ಹಲವು ವರ್ಷಗಳಿಂದ ರೋಟರಿ ಸಂಸ್ಥೆ ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಶಿಕ್ಷಕರಿಗೆ ನೇಷನ್ ಬಿಲ್ಡರ್ ಅವಾರ್ಡ್ ನೀಡಿ ಗೌರವಿಸುತ್ತಿದೆ. ಶಿಕ್ಷಕರು ಉತ್ತಮ ಶಿಕ್ಷಣ ನೀಡುವ ಮೂಲಕ ರಾಷ್ಟçಕ್ಕೆ ಉತ್ತಮ ಪ್ರಜೆಗಳನ್ನು ನೀಡುತ್ತಿದ್ದಾರೆ ಎಂದರು.

ಪ್ರಶಸ್ತಿ ಸ್ವೀಕರಿಸಿದ ಗೋಣಿಮರೂರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸುನಿತಾ ಮಾತನಾಡಿ, ಯಾರಿಗೆ ಶಿಸ್ತು, ಸಂಯಮ ಇರುತ್ತದೋ ಅಂತಹವರು ಮಾತ್ರ ಶಿಕ್ಷಕರಾಗಲು ಸಾಧ್ಯ. ಎಲ್ಲ ವೃತ್ತಿಗಳಲ್ಲಿ ಶಿಕ್ಷಕರ ವೃತ್ತಿ ಅಮೂಲ್ಯವಾಗಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಭವಿಷ್ಯದ ಉತ್ತಮ ಪ್ರಜೆಗಳನ್ನು ರೂಪಿಸುವ ಕೆಲಸ ಶಿಕ್ಷಕರು ಮಾಡುತ್ತಿದ್ದಾರೆ ಎಂದರು.

ರೋಟರಿ ಕಾರ್ಯದರ್ಶಿ ಕೆ.ಡಿ. ಬಿದ್ದಪ್ಪ, ವಲಯ ಸೇನಾನಿ ಎಂ.ಎಂ. ಪ್ರಕಾಶ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು
ಗ್ರಾಮೀಣ ಭಾಗದಲ್ಲೂ ವಸತಿ ಕಟ್ಟಡಗಳಿಗೆ ಒಸಿ-ಸಿಸಿ ಬೇಕಿಲ್ಲ