ಕನ್ನಡಪ್ರಭವಾರ್ತೆ, ಸೋಮವಾರಪೇಟೆ
ಆದರೆ, ಸ್ಥಳಕ್ಕೆ ಪರಿಶೀಲನೆಗೆ ಬಂದ ಅಧಿಕಾರಿಗಳು ಸ್ಥಳದ ಯಾವುದೇ ದಾಖಲೆಯನ್ನು ತರದೆ, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡು, ಗಣಿ ಮತ್ತು ಭೂ ವಿಜ್ಞಾನ, ಅರಣ್ಯ, ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಇಲ್ಲಿ ಕಳೆದ ಹಲವಾರು ವರ್ಷಗಳಿಂದ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಗಣಿಗಾರಿಕೆ ಮಾಡಲಾಗುತ್ತಿದೆ. ಪರವಾನಗಿ ನೀಡಿರುವ ಪ್ರದೇಶಕ್ಕಿಂತ ಹೆಚ್ಚಿನ ಪ್ರದೇಶದಲ್ಲಿ ಕೋರೆ ನಡೆಸಲಾಗುತ್ತಿದೆ. ಕಳೆದ ಒಂದುವರೆ ವರ್ಷದಿಂದ ಇದರ ವಿರುದ್ಧ ಹಲವು ಬಾರಿ ದೂರು ನೀಡಿದ್ದೇವೆ. ಆದರೂ ಅಕ್ರಮ ಗಣಿಗಾರಿಕೆಗಳ ವಿರುದ್ಧ ಅಧಿಕಾರಿಗಳು ಕ್ರಮಕೈಗೊಳ್ಳುತ್ತಿಲ್ಲ.ಇದೀಗ ಕಲ್ಲುಕೋರೆಗಳಿಗೆ ತಾತ್ಕಾಲಿಕವಾಗಿ ಬೀಗ ಹಾಕಲಾಗಿದೆ ಅಷ್ಟೆ. ಈಗಲಾದರೂ ಸೂಕ್ತ ಕಾನೂನು ಕ್ರಮಕೈಗೊಳ್ಳುತ್ತಾರೆಯೇ ಕಾದು ನೋಡಬೇಕಿದೆ. ಇಲ್ಲಿ ನಡೆಯುತ್ತಿರುವ ಎಲ್ಲಾ ಕಲ್ಲುಕೋರೆಗಳ ಬಗ್ಗೆ ಸಮಗ್ರ ತನಿಖೆ ಮಾಡುವ ಮೂಲಕ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಅನಿಲ್, ರಾಜೇಶ್ ಅಧಿಕಾರಿಗಳನ್ನು ಒತ್ತಾಯಿಸಿದರು. ಈ ಸಂದರ್ಭ ಅರಣ್ಯ ಇಲಾಖೆಯ ಆರ್‌ಎಫ್‌ಒ ಶೈಲೇಂದ್ರಕುಮಾರ್, ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ರೋಜಾ, ಗ್ರಾಮ ಲೆಕ್ಕಾಧಿಕಾರಿ ಹಾಗೂ ಗ್ರಾಮಸ್ಥರು ಇದ್ದರು.
ಸಾಕಷ್ಟು ಸಮಯದಿಂದ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರಲಾಗುತ್ತಿದೆ. ಆದರೂ, ಪರಿಶೀಲನೆಗೆ ಬರುವಾಗ ಅಧಿಕಾರಿಗಳು ಯಾವುದೇ ದಾಖಲೆಗಳಿಲ್ಲದೆ ಬಂದಿರುವುದು ಖಂಡನೀಯ. ಯಾವ ಕಾರಣಕ್ಕೆ ಪರಿಶೀಲನೆ ಮಾಡಲು ಬರುತ್ತಾರೆ. ಈ ಭಾಗದಲ್ಲಿ ಇನ್ನಷ್ಟು ಕಲ್ಲುಕೋರೆಗಳಿಗೆ ಅವಕಾಶ ನೀಡಲು ಬಂದಿದ್ದೀರಾಬೋಜೆಗೌಡ ಸ್ಥಳೀಯ ಗ್ರಾಮಸ್ಥ
ಈ ಭಾಗದ ಗ್ರಾಮಸ್ಥರ ಮನವಿಯಂತೆ ಸೂಕ್ತ ರೀತಿಯ ತನಿಖೆ ನಡೆಸಿ, ಇಲ್ಲಿ ನಡೆದಿರುವ ಕಲ್ಲುಕೋರೆಗಳ ಬಗ್ಗೆ ವಿಸ್ತೃತ ವರದಿಯನ್ನು ಮೇಲಿನ ಅಧಿಕಾರಿಗಳಿಗೆ ಸಲ್ಲಿಸಲಾಗುವುದು .ಸಂದೀಪ್, ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ