ಸೊರಬ: ೧೬,೨೦೯ ಮತದಾರರು ಪಟ್ಟಿಯಿಂದ ಹೊರಗೆ

KannadaprabhaNewsNetwork |  
Published : Aug 26, 2026, 01:45 AM IST
ಫೋಟೊ:೨೫ಕೆಪಿಸೊರಬ-೦೧ : ಸೊರಬ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಸಂಬAಧಿಸಿದAತೆ ಮತದಾರರ ನೋಂದಣಾಧಿಕಾರಿ ಕೆ.ಆರ್. ಸುಜಾತಾ ಅಧ್ಯಕ್ಷತೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊAದಿಗೆ ಸಭೆ ನಡೆಯಿತು. | Kannada Prabha

ಸಾರಾಂಶ

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧಿಸಿದಂತೆ ಮತದಾರರ ನೋಂದಣಾಧಿಕಾರಿ ಕೆ.ಆರ್. ಸುಜಾತಾ ಅಧ್ಯಕ್ಷತೆಯಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಚುರಪಡಿಸಿ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಸೊರಬ

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧಿಸಿದಂತೆ ಮತದಾರರ ನೋಂದಣಾಧಿಕಾರಿ ಕೆ.ಆರ್. ಸುಜಾತಾ ಅಧ್ಯಕ್ಷತೆಯಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಚುರಪಡಿಸಿ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಲಾಯಿತು.

ತಹಸೀಲ್ದಾರ್ ಹಾಗೂ ಮತದಾರರ ಉಪ ನೋಂದಾಣಾಧಿಕಾರಿ ಕೆ. ಪುರಂದರ ಮಾತನಾಡಿ, ತಾಲೂಕಿನಲ್ಲಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಕರಡು ಮತದಾರರ ಪಟ್ಟಿಯು ಬಿಡುಗಡೆಯಾಗಿದ್ದು, ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿರುವುದನ್ನು ಸ್ಥಳೀಯ ಬಿಎಲ್‌ಒ ಅಥವಾ ಚುನಾವಣಾ ಆಯೋಗದ ಅಧಿಕೃತ ಜಾಲತಾಣದಲ್ಲಿ ಪರಿಶೀಲಿಸಿಕೊಳ್ಳಬಹುದು ಎಂದರು.

ಪ್ರಸ್ತುತ ಪ್ರಕಟಿಸಲಾಗಿರುವ ಕರಡು ಮತದಾರರ ಪಟ್ಟಿಯಲ್ಲಿ ಸುಮಾರು ೧೬,೨೦೯ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಹೊರಗಿಡಲಾಗಿದೆ. ಇದರಲ್ಲಿ ಈವರೆಗೆ ಮ್ಯಾಪಿಂಗ್ ಆಗದಿರುವ ೧೧೮೩ ಮತದಾರರಿಗೆ ಹಾಗೂ ತಂದೆ-ಮಗನ ವಯಸ್ಸಿನ ಗಣನೀಯ ಅಂತರ ಸೇರಿದಂತೆ ದೋಷಪೂರಿತ ಮಾಹಿತಿ ಇರುವ (ಅನೋಮಲಿಸ್) ೨೮೯೮ ಮತದಾರರು ಸೇರಿದಂತೆ ಒಟ್ಟು ೪೦೮೧ ಮತದಾರರಿಗೆ ನೋಟಿಸ್ ನೀಡಲಾಗುತ್ತದೆ ಎಂದು ತಿಳಿಸಿದರು.

ಪಟ್ಟಿಯಲ್ಲಿ ಹೆಸರು ಇಲ್ಲದಿರುವವರು ಆಕ್ಷೇಪಣೆ ಸಲ್ಲಿಸಲು ಸೆಪ್ಟೆಂಬರ್ ೨೩ರವರೆಗೆ ಅವಕಾಶವಿದ್ದು, ಮತದಾರರು ತಮ್ಮ ಹೆಸರು ಇದೆಯೇ ಎಂದು ಪರಿಶೀಲಿಸಿಕೊಳ್ಳುವ ಬಗ್ಗೆ ಚುನಾವಣಾ ಆಯೋಗ ಮಾಹಿತಿ ನೀಡಲಿದೆ ಎಂದು ಮಾಹಿತಿ ನೀಡಿದರು.

ಕಳೆದ ಜೂನ್ ೧೬ರ ಮತಪಟ್ಟಿಯಲ್ಲಿದ್ದಂತೆ ತಾಲೂಕಿನಲ್ಲಿ ೧,೯೮, ೯೫೫ ಮತದಾರರಿದ್ದು, ಅವರಲ್ಲಿ ೧,೮೨,೭೪೬ ಮತದಾರರ ಹೆಸರನ್ನು ಅಧಿಕೃತಗೊಳಿಸಿ, ಗಣಕೀಕರಣ ಕಾರ್ಯ ಪೂರ್ಣಗೊಳಿಸಲಾಗಿದೆ. ಅಂದರೆ, ಶೇ.೯೧.೮೫ ರಷ್ಟು ಪರಿಷ್ಕರಣೆ ಕಾರ್ಯಪೂರ್ಣಗೊಂಡಂತಾಗಿದೆ. ಎಸ್‌ಐಆರ್ ಪ್ರಕ್ರಿಯೆ ವೇಳೆ ೧೬,೨೦೯ಮತದಾರರನ್ನು ''''''''ಎಎಸ್‌ಡಿಡಿಒ'''''''' ವರ್ಗಕ್ಕೆ ಸೇರಿಸಲಾಗಿದೆ. ಈ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಬರುವುದಿಲ್ಲ. ಈ ಪೈಕಿ ೫,೭೫೯ ಮತದಾರರು ಮೃತರಾಗಿರುವುದನ್ನು, ೧,೦೯೩ ಮತದಾರರು ಗೈರಾಗಿರುವುದನ್ನು ಹಾಗೂ ೭೮೨೨ ಮತದಾರರು ಸ್ಥಳಾಂತರಗೊಂಡಿರುವುದನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.

ಕರಡು ಮತದಾರರ ಪಟ್ಟಿಯಿಂದ ಹೊರಗುಳಿದಿರುವ ಮತದಾರರ (ಎಎಸ್‌ಡಿಡಿಒ) ಪೈಕಿ ಗೈರು ಸ್ಥಳಾಂತರಗೊಂಡಿರುವ, ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಅಥವಾ ತಿದ್ದುಪಡಿ ಇದ್ದರೆ, ಹೊಸ ಸೇರ್ಪಡೆಗೆ ಮತದಾರರು ನಿಗದಿತ ದಾಖಲೆಗಳೊಂದಿಗೆ ಫಾರ್ಮ್ ೬ ಸಲ್ಲಿಕೆ ಮಾಡಬೇಕು. ಇದರ ಜತೆಗೆ ಅ.೧ಕ್ಕೆ ೧೮ ವರ್ಷ ತುಂಬುವ ಯುವ ಮತದಾರರು ನಿಗದಿತ ದಾಖಲೆಗಳೊಂದಿಗೆ ಫಾರ್ಮ್ ೬ ಸಲ್ಲಿಸಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಬಹುದು. ಹೆಸರು, ವಿಳಾಸ ಬದಲಾವಣೆಗೆ ನಮೂನೆ-೮ ಬಳಸಿ ಅರ್ಜಿ ಹಾಕಬಹುದು. ಮತಗಟ್ಟೆ ಅಧಿಕಾರಿಗಳ ಪರಿಶೀಲನೆಯ ನಂತರ ಆ ಮತದಾರರ ಪಟ್ಟಿಯ ಪೌರತ್ವ ದೃಢಪಟ್ಟರಷ್ಟೇ, ಅವರ ಹೆಸರನ್ನು ಅಂತಿಮ ಮತದಾರರ ಪಟ್ಟಿಗೆ ಸೇರಿಸಲಾಗುತ್ತದೆ ಎಂದರು.

ಸಭೆಯಲ್ಲಿ ಮತದಾರರ ನೋಂದಣಾಧಿಕಾರಿ ಕೆ.ಆರ್. ಸುಜಾತಾ, ಚುನಾವಣಾ ಶಿರಸ್ತೇದಾರ್ ವೈ.ಎಸ್. ದೀಪಕ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಕಲೇಶಪುರ ವಿಧಾನಸಭಾ ಕ್ಷೇತ್ರದಲ್ಲಿ 18 ಸಾವಿರ ಮತದಾರರು ಹೊರಕ್ಕೆ
ಪಡಿತರ ಕಾರ್ಡ್ ಹೊಂದಿರುವ ಸದಸ್ಯರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿ: ಮೂಡ್ಲೀಗೌಡ