ಸೌತಡ್ಕ: 24ರಂದು ನೂತನ ಶಾಲೆಗೆ ಶಿಲಾನ್ಯಾಸ

KannadaprabhaNewsNetwork |  
Published : Oct 21, 2025, 01:00 AM IST
ಹರೀಶ್ ರಾವ್ ಮುಂಡ್ರುಪ್ಪಾಡಿ ಸುದ್ದಿಗೋಷ್ಠಿ ನಡೆಸಿದರು. | Kannada Prabha

ಸಾರಾಂಶ

ಶಿಲಾನ್ಯಾಸ ಸಮಾರಂಭ ಅ.24ರಂದು ನಡೆಯಲಿದೆ. ಬಳಿಕ ಸಭಾ ಕಾರ್ಯಕ್ರಮ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ನಿರ್ಮಾಣ । ಸಿದ್ಧತೆ ಪೂರ್ಣ

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ವಿವೇಕಾನಂದ ವಿದ್ಯಾವರ್ಧಕ ಸಂಘ, ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಹೊಂದಿಕೊಂಡಂತೆ ಸನಿಹದಲ್ಲಿ ನೂತನ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದ್ದು, ಸುಮಾರು 1 ಎಕರೆ 10 ಸೆಂಟ್ಸ್ ಜಾಗವನ್ನು ಖರೀದಿಸಲಾಗಿದೆ. ಅ.24ರಂದು ಶಿಲಾನ್ಯಾಸ ನಡೆಯಲಿದೆ ಎಂದು ಸೌತಡ್ಕ ಶ್ರೀ ಮಹಾಗಣಪತಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ ತಿಳಿಸಿದರು.

ಅವರು ಸೋಮವಾರ ಬೆಳ್ತಂಗಡಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಿಲಾನ್ಯಾಸ ಸಮಾರಂಭ ಅ.24ರಂದು ನಡೆಯಲಿದೆ. ಬಳಿಕ ಸಭಾ ಕಾರ್ಯಕ್ರಮ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಕೇಂದ್ರದ ಬೃಹತ್ ಕೈಗಾರಿಕೆಗಳು ಮತ್ತು ಸಾರ್ವಜನಿಕ ಉದ್ಯಮಗಳ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಸಂಸದರಾದ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಹರೀಶ್ ಪೂಂಜ, ಎಂ.ಆರ್.ಜಿ. ಗ್ರೂಪ್ ಮಂಗಳೂರಿನ ಚೇರ್ಮನ್ ಕೆ.ಪ್ರಕಾಶ್ ಶೆಟ್ಟಿ ಉಪಸ್ಥಿತರುವರು.ಸಮಾರಂಭದಲ್ಲಿ ಶಾಸಕರಾದ ವಿ. ಸುನಿಲ್ ಕುಮಾರ್, ಭಾಗೀರಥಿ ಮುರುಳ್ಯ, ಅಶೋಕ್ ಕುಮಾರ್ ರೈ, ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್, ಡಿ.ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ ವೈ., ಗುರುರಾಜ ಗಂಟಿಹೊಳೆ, ಸುರೇಶ್ , ಮಂಜುನಾಥ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್, ಎಸ್.ಎಲ್. ಭೋಜೇಗೌಡ, ಕಿಶೋರ್ ಕುಮಾರ್ ಬೊಟ್ಯಾಡಿ, ಪ್ರಾಣೇಶ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಕೊಕ್ಕಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬೇಬಿ, ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಸೌತಡ್ಕ ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಪೆರ್ನೆ ರಾಜ್ ಬೋರ್‌ವೆಲ್ಸ್‌ನ ಕೃಷ್ಣರಾಜ್, ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ರಾಧಾಕೃಷ್ಣ ನಾಯ್ಕ್, ಉದ್ಯಮಿಗಳಾದ ಶಿವಪ್ರಸಾದ್ ಇಜ್ಜಾವು, ಸುಧಾಕರ ಶೆಟ್ಟಿ, ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್‌ ಅಧ್ಯಕ್ಷ ಕೃಷ್ಣ ಭಟ್ ಹಿತ್ತಿಲು, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ ಉಪಸ್ಥಿತರಿರುವರು ಎಂದರು.ಸುದ್ದಿಗೋಷ್ಠಿಯಲ್ಲಿ ಕಟ್ಟಡ ನಿರ್ಮಾಣ ಸಮಿತಿ ಕಾರ್ಯದರ್ಶಿ ರಾಘವೇಂದ್ರ ನಾಯಕ್, ಕುಶಾಲಪ್ಪ ಗೌಡ ಪೂವಾಜೆ, ಕೃಷ್ಣ ಭಟ್ಟ ಹಿತ್ತಿಲು, ಬಾಲಕೃಷ್ಣ, ಮಾಧ್ಯಮ ಸಂಚಾಲಕ ವೃಷಾಂಕ್ ಖಾಡಿಲ್ಕರ್ ಇದ್ದರು.ಮುಂದಿನ ವರ್ಷದಿಂದಲೇ ಆರಂಭ:ಮುಂದಿನ ಶೈಕ್ಷಣಿಕ ವರ್ಷದಿಂದಲೇ ಎಲ್‌ಕೆಜಿಯೊಂದಿಗೆ ಶಾಲೆ ಪ್ರಾರಂಭವಾಗಲಿದೆ. ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬರಲು ವಾಹನದ ವ್ಯವಸ್ಥೆ ಇರಲಿದೆ. ರಾಜ್ಯ ಪಠ್ಯಕ್ರಮವನ್ನು ಅಳವಡಿಸಲಾಗುವುದು ಎಂದು ಹರೀಶ್ ರಾವ್ ತಿಳಿಸಿದ್ದಾರೆ.

PREV

Recommended Stories

ಮಲೆನಾಡು, ಕರಾವಳಿಯಲ್ಲಿ ಮಳೆ : ಜನಜೀವನ ಅಸ್ತವ್ಯಸ್ತ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ