ಸೌಥ್‌ ಝೋನ್‌ ಅಥ್ಲೆಟಿಕ್ಸ್‌: ಚಕ್ರ ಎಸೆತದಲ್ಲಿ ಅವಿನಾಶ ಪ್ರಥಮ

KannadaprabhaNewsNetwork |  
Published : Oct 19, 2024, 12:20 AM ISTUpdated : Oct 19, 2024, 12:21 AM IST
ಅವಿನಾಶ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ. | Kannada Prabha

ಸಾರಾಂಶ

ದೇವರಹಿಪ್ಪರಗಿ: ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ಮಲ್ಲಿಕಾರ್ಜುನ ತಳಕೇರಿ ಪುತ್ರ ಅವಿನಾಶ ತಳಕೇರಿ ಏಳು ರಾಜ್ಯಗಳ ಸೌಥ್‌ ಝೋನ್ 18 ವರ್ಷದೊಳಗಿನ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ 50.41ಮೀ. ಚಕ್ರ ಎಸೆತ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

ದೇವರಹಿಪ್ಪರಗಿ: ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ಮಲ್ಲಿಕಾರ್ಜುನ ತಳಕೇರಿ ಪುತ್ರ ಅವಿನಾಶ ತಳಕೇರಿ ಏಳು ರಾಜ್ಯಗಳ ಸೌಥ್‌ ಝೋನ್ 18 ವರ್ಷದೊಳಗಿನ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ 50.41ಮೀ. ಚಕ್ರ ಎಸೆತ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.ಆಂಧ್ರ ಪ್ರದೇಶದ ಗುಂಟೂರು ಪಟ್ಟಣದ ನಾಗಾರ್ಜುನ ಕ್ರೀಡಾಂಗಣದಲ್ಲಿ ನಡೆದ ಏಳು ರಾಜ್ಯಗಳ ಕ್ರೀಡಾಪಟುಗಳು ಭಾಗವಹಿಸಿದ್ದು, ಸೌಥ್‌ ಝೋನ್ 18 ವರ್ಷದೊಳಗಿನವರ ಅಥ್ಲೆಟಿಕ್ಸ್‌ ಕ್ರೀಡಾಕೂಟದ ಚಕ್ರ ಎಸೆತ ವಿಭಾಗದಲ್ಲಿ ರಾಜ್ಯದ ಪರವಾಗಿ ಭಾಗವಹಿಸಿ 50.41ಮೀ. ದೂರ ಎಸೆಯುವ ಮೂಲಕ ಪ್ರಥಮ ಸ್ಥಾನ ಪಡೆದಿದ್ದಾರೆ. ಅವಿನಾಶನ ಸಾಧನೆಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಈ ಸಾಧನೆಗೆ ತಂದೆ-ತಾಯಿ, ಶಿಕ್ಷಕರು ಹಾಗೂ ಪಟ್ಟಣದ ಜನರು ಸಂತಸವನ್ನು ವ್ಯಕ್ತಪಡಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಈ ಸಾಲಲ್ಲಿ ಅಬಕಾರಿ ರಾಜಸ್ವ ಟಾರ್ಗೆಟ್‌ ಕಷ್ಟ? 11 ತಿಂಗಳಲ್ಲಿ ಮದ್ಯ ಮಾರಾಟ ಗಣನೀಯ ಕುಸಿತ
ನಾಳೆ ಸಿದ್ದರಾಮಯ್ಯ ಬಜೆಟ್‌ : ವಲಯವಾರು ನಿರೀಕ್ಷೆಗಳೇನು?