ಕುರುಗೋಡು ಪೊಲೀಸ್ ಇಲಾಖೆಯಿಂದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ, ಅಕ್ರಮ ಸಾಗಣೆ ವಿರೋಧ ಜಾಗೃತಿ ಜಾಥಾ
ಇಲ್ಲಿನ ಪಟ್ಟಣದ ಪೊಲೀಸ್ ಇಲಾಖೆಯಿಂದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಣೆ ವಿರೋಧ ಜಾಗೃತಿ ಜಾಥಾ ಶನಿವಾರ ಹಮ್ಮಿಕೊಳ್ಳಲಾಗಿತ್ತು.
ಬಾಲಕರ ಸರ್ಕಾರ ಪ್ರೌಢಶಾಲೆ ಕ್ರೀಡಾಂಗಣದಿಂದ ಆರಂಭಗೊಂಡ ಜಾಥಾ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.ಜಾಥಾದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಮಾದಕ ವಸ್ತು ಸೇವನೆ ಮತ್ತು ಅಕ್ರಮ ಸಾಗಣೆಯ ವಿರುದ್ಧ ಘೋಷಣೆ ಕೂಗಿ ಜಾಗೃತಿ ಮೂಡಿಸಿದರು.
ಬಿತ್ತಿದ ಬೀಜ ಲೋಪವಿಲ್ಲದೆ ಮೊಳಕೆಯೊಡೆಯುವ ಫಲವತ್ತಾದ ಯುವಕರ ಹೃದಯದಲ್ಲಿ ಉತ್ತಮ ಚಿಂತನೆಗಳನ್ನು ಬಿತ್ತಿ ಸನ್ಮಾರ್ಗದತ್ತ ಕೊಂಡೊಯ್ಯುವ ಅಗತ್ಯವಿದೆ. ಮನೆಯೇ ಮೊದಲ ಪಾಠ ಶಾಲೆಯಾಗಿದ್ದು, ಪೋಷಕರ ದುಶ್ಚಟವು ಮಕ್ಕಳ ಮನಸ್ಸಿನ ಮೇಲೆ ಪ್ರಭಾವ ಬೀರುವುದರಿಂದ ಕೆಲ ಅಪ್ರಾಪ್ತರು ದಾಸರಾಗುತ್ತಿದ್ದಾರೆ. ದೇಶದ ಭವಿಷ್ಯವಾಗಿರುವ ಯುವ ಸಮೂಹ ಉತ್ತಮ ಆಚಾರ, ವಿಚಾರದ ಕಡೆ ಗಮನಹರಿಸಬೇಕು ಎಂದರು.
ತಹಶೀಲ್ದಾರ್ ನರಸಪ್ಪ ತಹಶೀಲ್ದಾರ್ ಮಾತನಾಡಿ, ಯುವ ಸಮೂಹದಿಂದ ದೇಶದ ಏಳಿಗೆ ಸಾಧ್ಯ. ಪ್ರತಿಯೊಬ್ಬರೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು. ಪೋಷಕರ ದುಶ್ಚಟವು ಮಕ್ಕಳ ಮನಸ್ಸಿನ ಮೇಲೆ ಪ್ರಭಾವ ಬೀರುವುದರಿಂದ ಕೆಲ ಅಪ್ರಾಪ್ತರು ದಾಸರಾಗುತ್ತಿದ್ದಾರೆ. ದೇಶದ ಭವಿಷ್ಯವಾಗಿರುವ ಯುವ ಸಮೂಹ ಉತ್ತಮ ಆಚಾರ, ವಿಚಾರದ ಕಡೆ ಗಮನಹರಿಸಬೇಕು ಎಂದರು.
ಪಿಎಸ್ಐ ಸುಪ್ರಿತ್ ವಿರೂಪಾಕ್ಷಪ್ಪ, ಪುರಸಭೆ ಅಧ್ಯಕ್ಷ ಟಿ.ಶೇಖಣ್ಣ, ಪುರಸಭೆ ಉಪಾಧ್ಯಕ್ಷ ಚನ್ನಪಟ್ಟಣ ಮಲ್ಲಿಕಾರ್ಜುನ, ಡಾ. ಗುರುರಾಜ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ರಾಘವೇಂದ್ರ, ಶಿಕ್ಷಕರು, ವಿದ್ಯಾರ್ಥಿಗಳು ಪೊಲೀಸ್, ಗೃಹರಕ್ಷಕ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಇದ್ದರು.