ಕನ್ನಡಪ್ರಭ ವಾರ್ತೆ ಹಾಸನ
ಸಹಾನುಭೂತಿ ಮತ್ತು ಸಮುದಾಯ ಸೇವೆಯಲ್ಲಿ ಚಾಲಿತವಾಗಿರುವ ಅಕ್ಕ ಪಡೆ ಸಮಾಜದಲ್ಲಿ ಸ್ಪಂದಿಸುವ ಸುರಕ್ಷಣಾ ಘಟಕವಾಗಿ ಮತ್ತು ಶೈಕ್ಷಣಿಕ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತದೆ. ಈ ವೇಳೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಧರಣಿ ಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಿಲೀಪ್ ಮತ್ತಿತರರು ಉಪಸ್ಥಿತರಿದ್ದರು.ಅಕ್ಕ ಪಡೆ ಉದ್ದೇಶ:
ದೌರ್ಜನ್ಯ ಹಿಂಸೆ ನಿರ್ಲಕ್ಷ್ಯ ಅಥವಾ ಶೋಷಣೆ ಎದುರಿಸುತ್ತಿರುವ ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲಿಕ ಸಹಾಯ ಹಸ್ತ ಮತ್ತು ರಕ್ಷಣೆ ಒದಗಿಸುವುದು. ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ, ಘನತೆ ಮತ್ತು ಸಬಲೀಕರಣವನ್ನು ಉತ್ತೇಜಿಸುವುದು ಶಿಕ್ಷಣದ ಮೂಲಕ ಹಕ್ಕುಗಳು, ಕಾನೂನುಗಳು, ಸುರಕ್ಷತಾ ಕ್ರಮಗಳು ಮತ್ತು ಲಭ್ಯವಿರುವ ಬೆಂಬಲ ವ್ಯವಸ್ಥೆಗಳ ಬಗ್ಗೆ ಜಾಗೃತಿ ಮೂಡಿಸುವುದು, ಸಮಾಜದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆದು ಕಾನೂನಿನ ರಕ್ಷಣೆಯೊಂದಿಗೆ ಭಯಮುಕ್ತ ವಾತಾವರಣ ಸೃಷ್ಟಿಸುವುದು.ಅಕ್ಕ ಪಡೆ ವ್ಯಾಪ್ತಿ:
ತ್ವರಿತ ಪ್ರತಿಕ್ರಿಯೆ - ಅಕ್ಕ ಪಡೆ ತಂಡವು ಸೂಕ್ಷ್ಮ ಪ್ರದೇಶಗಳಲ್ಲಿ ಮತ್ತು ಮಹಿಳೆಯರು ಹಾಗೂ ಮಕ್ಕಳನ್ನು ಒಳಗೊಂಡು ಸಂಕಷ್ಟದ ಕರೆಗಳಿಗೆ ಸ್ಪಂದಿಸುತ್ತದೆ ಮಹಿಳೆಯರಿಗೆ ಕಿರುಕುಳ ಮತ್ತು ಈವ್ ಟೀಸಿಂಗ್ ತಡೆಗಟ್ಟಲು ಶಾಲೆ ಕಾಲೇಜು, ಉದ್ಯಾನವನ, ಸಿನಿಮಾ ಮಂದಿರ, ಸ್ಥಳೀಯ ಮಾರುಕಟ್ಟೆಗಳಿಗೆ ನಿಯಮಿತವಾಗಿ ಭೇಟಿ ನೀಡುವುದು ಫೋಕ್ಸೋ, ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ ಮಕ್ಕಳ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಮಹಿಳೆಯರು ಮತ್ತು ಮಕ್ಕಳ ಕಳ್ಳಸಾಗಣಿ ಮಾದಕ ವಸ್ತುಗಳ ದುರುಪಯೋಗದ ಬಗ್ಗೆ ಜಾಗೃತಿ ಮೂಡಿಸುವುದು, ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವುದು. ಅಕ್ಕಪಡೆ ಯೋಜನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಸನ ಇವರಿಗೆ ಸಂಪರ್ಕಿಸಬಹುದಾಗಿದೆ.