ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮಾ ವಿರುದ್ಧವೇ ಆಕ್ರೋಶ
ಕಡೂರು ತಾಲೂಕಿನ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಕಡೂರು ಶಾಸಕ ಆನಂದ್ ನೇತೃತ್ವದಲ್ಲಿ ನೂರಾರು ಮಂದಿ ಚಿಕ್ಕಮಗಳೂರಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬುಧವಾರ ಮುತ್ತಿಗೆ ಹಾಕಿದ ಘಟನೆ ನಡೆದಿದೆ.
ನೇರವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮಾ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ ಕಾರ್ಯ ಕರ್ತರು, ಅವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮಾ ಪೊಲೀಸ್ ಅಧಿಕಾರಿ ಸಿಬ್ಬಂದಿಯನ್ನು ಬೇಕಾಬಿಟ್ಟಿ ವರ್ಗಾ ವಣೆ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರ ಮಾತಿಗೆ ಮನ್ನಣೆ ನೀಡುತ್ತಿಲ್ಲ ಎಂಬ ಅಸಮಧಾನ ಹೊರಹಾಕಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಆನಂದ್ ಕಡೂರು ತಾಲೂಕು ವ್ಯಾಪ್ತಿಯ ಅಜ್ಜಂಪುರ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿ ಕರ್ತವ್ಯದಲ್ಲಿ ಲೋಪ ಉಂಟಾಗಿತ್ತು ಎಂದು ಸುಮಾರು ಐದು ಗ್ರಾಪಂ ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದರು. ಈ ಬಗ್ಗೆ ಸಂಬಂಧಪಟ್ಟ ಡಿವೈಎಸ್‌ಪಿ ಗಮನಕ್ಕೆ ತರಲಾಗಿತ್ತು. ಡಿವೈಎಸ್‌ಪಿ ಸಮಸ್ಯೆ ಪರಿಹಾರ ಮಾಡದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಗಿದೆ, ಪ್ರತಿಭಟನೆ ವ್ಯಕ್ತಪಡಿಸುವ ಉದ್ದೇಶದಿಂದ ಬಂದಿಲ್ಲ ಎಂದು ಮಾಹಿತಿ ನೀಡಿದರು.
ತನಿಖೆ ನಡೆಸುವುದಾಗಿ ಎಸ್ಪಿ ಭರವಸೆಸಂಬಂಧಪಟ್ಟ ಮುಖಂಡರು ಉಂಟಾದ ಸಮಸ್ಯೆಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಮನಕ್ಕೆ ತರಲಾಗಿದೆ. ಮುಖಂಡರು, ಕಾರ್ಯಕರ್ತರು ಮಾಡಿದ ಆರೋಪಗಳಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವ ದಲ್ಲಿ ತನಿಖೆ ಮಾಡುವುದಾಗಿ ಜಿತೇಂದ್ರ ಕುಮಾರ್ ದಯಾಮ ಭರವಸೆ ನೀಡಿದ್ದಾರೆ ಎಂದು ಶಾಸಕ ಆನಂದ್ ತಿಳಿಸಿದರು.
ಕಡೂರು ಶಾಸಕ ಆನಂದ್ ಬುಧವಾರ ಚಿಕ್ಕಮಗಳೂರಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ನೂರಾರು ಕಾರ್ಯಕರ್ತರೊಂದಿಗೆ ಭೇಟಿ.ಫೋಟೋ
ಕಡೂರು ಶಾಸಕ ಆನಂದ್ ನೂರಾರು ಮಂದಿ ಕಾರ್ಯಕರ್ತರೊಂದಿಗೆ ಬುಧವಾರ ಚಿಕ್ಕಮಗಳೂರಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಮುತ್ತಿಗೆ ಸಾಧ್ಯತೆ ಹಿನ್ನೆಲೆಯಲ್ಲಿ ಪೊಲೀಸ್ ಬಂದೋಬಸ್ತ್ ಮಾಡಿದ್ದು.