ಕನ್ನಡಪ್ರಭ ವಾರ್ತೆ ಬಾಗಲಕೋಟೆ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಗೆ ವೃತ್ತಿ ಅಭಿವೃದ್ಧಿ, ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಹಾಗೂ ಸರ್ಕಾರಿ ಉದ್ಯೋಗಗಳ ಅವಕಾಶಗಳನ್ನು ಬಳಸಿಕೊಳ್ಳುವ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ವಿಡಿಯೋ ವರ್ಚ್ಯೂವಲ್ ಮೂಲಕ ಮಾರ್ಗದರ್ಶನ ನೀಡಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಗೆ ವೃತ್ತಿ ಅಭಿವೃದ್ಧಿ, ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಹಾಗೂ ಸರ್ಕಾರಿ ಉದ್ಯೋಗಗಳ ಅವಕಾಶಗಳನ್ನು ಬಳಸಿಕೊಳ್ಳುವ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ವಿಡಿಯೋ ವರ್ಚ್ಯೂವಲ್ ಮೂಲಕ ಮಾರ್ಗದರ್ಶನ ನೀಡಿದರು.ನವ ನಗರದಲ್ಲಿರುವ ಜಿಲ್ಲಾ ಪಂಚಾಯತಿಯ ಸಂಪನ್ಮೂಲ ಕೇಂದ್ರದ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಿರುವವರಿಗೆ ಹಾಗೂ ಸರ್ಕಾರಿ ಉದ್ಯೋಗಗಳ ಆಕಾಂಕ್ಷಿಗಳಿಗೆ ವಿಡಿಯೋ ವರ್ಚ್ಯೂವಲ್ ಮೂಲಕ ಮಾರ್ಗದರ್ಶನ ಮಾಡಿದರು. ವಿದ್ಯಾರ್ಥಿಗಳು ಜೀವನದಲ್ಲಿ ಸ್ಪಷ್ಟವಾದ ಗುರಿಯನ್ನು ಹೊಂದಿರಬೇಕು. ಆ ಗುರಿ ಸಾಧನೆಗಾಗಿ ವ್ಯಕ್ತಿಯೂ ತನ್ನಲ್ಲಿ ಶಿಸ್ತನ್ನು ರೂಢಿಸಿಕೊಳ್ಳಬೇಕು, ಸಮಯ ನಿರ್ವಹಣೆ, ನಿರಂತರ ಅಧ್ಯಯನ ಹಾಗೂ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವಾಗ ಸೂಕ್ತ ಅಧ್ಯಯನ ಯೋಜನೆಯೊಂದನ್ನು ರೂಪಿಸಿಕೊಂಡು ಪ್ರಚಲಿತ ವಿದ್ಯಮಾನಗಳು, ಸಾಮಾನ್ಯ ಜ್ಞಾನ ಹಾಗೂ ಹಿಂದಿನ ವರ್ಷದ ಪರೀಕ್ಷೆಗೆ ಸಂಬಂಧಿಸಿದ ಪ್ರಶ್ನೆ ಪತ್ರಿಕೆಗಳ, ಹಳೆಯ ಪ್ರಶ್ನೆ ಪತ್ರಿಕೆಗಳ ಅಭ್ಯಾಸಕ್ಕೆ ಪ್ರಮುಖ ಆದ್ಯತೆ ನೀಡುವಂತೆ ತಿಳಿಸಿದರು.
ಇನ್ನು, ರಾಜ್ಯ ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಲಭ್ಯವಿರುವ ಉದ್ಯೋಗಾವಕಾಶಗಳು ಹಾಗೂ ಅವುಗಳ ನೇಮಕಾತಿಗೆ ಸಂಬಂಧಿಸಿದ ಪರೀಕ್ಷೆಗಳ ಸ್ವರೂಪ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ತಂತ್ರಗಳು ಹಾಗೂ ವೃತ್ತಿಯ ಆಯ್ಕೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ಸೇರಿದಂತೆ ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು.ಪ್ರಮುಖವಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ತಮ್ಮ ಹಿನ್ನೆಲೆಯನ್ನು ಮಿತಿಯೆಂದು ಭಾವಿಸದೆ, ತಮ್ಮ ಸುತ್ತಲು ಲಭ್ಯವಿರುವ ಶೈಕ್ಷಣಿಕ ಸಂಪನ್ಮೂಲಗಳನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಸ್ಪಷ್ಟ ಗುರಿ ಹಾಗೂ ಉನ್ನತ ಸಾಧನೆ ಮಾಡುವುದರತ್ತ ಮುಖ್ಯವಾಗಿ ಗಮನಹರಿಸಬೇಕು ಎಂದು ಗ್ರಾಮೀಣ ವಿದ್ಯಾರ್ಥಿಗಳನ್ನು ಪ್ರೇರೆಪಿಸಿದರು.ಇಂದಿನ ದಿನಮಾನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸನ್ನು ಸಾಧಿಸಲು ಕಠಿಣವಾದ ಪರಿಶ್ರಮದ ಜೊತೆಗೆ ನಿರಂತರವಾದ ಪ್ರಯತ್ನ ಹಾಗೂ ಸರಿಯಾದ ಮಾರ್ಗದರ್ಶನವೊಂದು ಅಗತ್ಯವಾಗಿ ಬೇಕೆ ಬೇಕು. ವಿದ್ಯಾರ್ಥಿಗಳು ತಮಗೆ ಸಿಕ್ಕಿರುವ ಸಮಯವನ್ನು ಸದುಪಯೋಗಪಡಿಸಿಕೊಂಡು ಜ್ಞಾನ, ಕೌಶಲ್ಯ ಹಾಗೂ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳುವ ಮೂಲಕ ಭವಿಷ್ಯದಲ್ಲಿ ಜವಾಬ್ದಾರಿಯುತ ಪ್ರಜೆಯಾಗುವ ಮೂಲಕ, ಸರ್ಕಾರಿ ಅಧಿಕಾರಿಗಳಾಗುವ ಗುರಿ ಹೊಂದಬೇಕು ಎಂಬ ಸಂದೇಶ ನೀಡಿದರು.ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಅರಿವು ಮೂಡಿಸಿ, ಆತ್ಮವಿಶ್ವಾಸ ತುಂಬಿ ಸರ್ಕಾರಿ ಉದ್ಯೋಗ ಪಡೆಯುವ ಅವರ
ಕನಸನ್ನು ನನಸಾಗಿಸಿಕೊಳ್ಳಲು ಪ್ರೇರೇಪಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.