ಕನ್ನಡಪ್ರಭ ವಾರ್ತೆ ಕುಂದಾಪುರ
ಸುದ್ದಿಗಾರರೊಂದಿಗೆ ಮಾತನಾಡಿದ ಖಾದರ್, ಯೋಧ ಅನೂಪ್ ಪೂಜಾರಿ ಪತ್ನಿಗೆ ಸರ್ಕಾರಿ ಉದ್ಯೋಗ ನೀಡುವಂತೆ ಸ್ಥಳೀಯರು ಹಾಗೂ ಕುಟುಂಬದವರು ಮನವಿ ಮಾಡಿದ್ದು, ಮುಖ್ಯಮಂತ್ರಿಗಳೊಂದಿಗೆ ಈ ಮಾತನಾಡುವುದಾಗಿ ತಿಳಿಸಿದ್ದಾರೆ.
ಮಂಗಳವಾರದ ದುರಂತದಲ್ಲಿ ಮೃತರಾದ ರಾಜ್ಯದ ಎಲ್ಲಾ ಸೈನಿಕರ ಕುಟುಂಬದವರಿಗೂ ರಾಜ್ಯ ಸರ್ಕಾರದಿಂದ ದೊರಕುವ ಎಲ್ಲ ಸವಲತ್ತುಗಳನ್ನು ನೀಡುವ ಬಗ್ಗೆ ಮುಖ್ಯಮಂತ್ರಿ ಈಗಾಗಲೇ ತಿಳಿಸಿದ್ದು, ಇದನ್ನು ಶೀಘ್ರವಾಗಿ ಅನೂಪ್ ಕುಟುಂಬದವರಿಗೂ ಒದಗಿಸಲು ಪ್ರಯತ್ನಿಸುತ್ತೇವೆ ಎಂದರು.ಮಾಜಿ ಸಚಿವ ವಿನಯಕುಮಾರ ಸೊರಕೆ, ದಿನೇಶ್ ಹೆಗ್ಡೆ ಮೊಳಹಳ್ಳಿ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಒಟ್ಟಾಗಿ ಪ್ರಯತ್ನ ನಡೆಸುವುದಾಗಿ ತಿಳಿಸಿದ ಅವರು, ಹುತಾತ್ಮ ಯೋಧನ ಹೆಸನಲ್ಲಿ ಸ್ಮಾರಕ ನಿರ್ಮಾಣವೂ ಸೇರಿದಂತೆ ಯಾವುದೇ ಕಾರ್ಯಕ್ರಮಗಳನ್ನು ರೂಪಿಸುವುದಿದ್ದರೂ, ಸ್ಥಳೀಯ ಆಡಳಿತ ತೀರ್ಮಾನ ಕೈಗೊಳ್ಳಲಿ. ಆ ಬಳಿಕ ಸರ್ಕಾರದಿಂದ ಬೇಕಾದ ಸಹಕಾರ ನೀಡಲು ಬದ್ಧರಿರುವುದಾಗಿ ತಿಳಿಸಿದರು.
ಸ್ವೀಕರ್ ಯು.ಟಿ.ಖಾದರ್ ಅವರೊಂದಿಗೆ ತುಳುವಿನಲ್ಲಿ ಮಾತನಾಡಿದ ಅನೂಪ್ ಅವರ ಪತ್ನಿ ಪೆರ್ಡೂರು ಮೂಲದ ಮಂಜುಶ್ರೀ, ‘ಮದ್ಮೆ ಆಪುನ್ ದುಂಬುಡ್‍ಲ ದಿನಾಲಾ ಪೋನ್ ಮಲ್ತೊಂದಿತ್ತಿರ್, ಮಂಗಳವಾರ ರಾತ್ರಿ ಮುಟ್ಟ ಪೋನ್ ಬೈದಿಜ್ಜಿ ಎಂದನಗ್ ಪೋಡಿಗೆ ಆತಂಡ್....’ ( ಮದುವೆಯಾಗುವ ಮೊದಲಿನಿಂದಲೂ ಪ್ರತಿ ದಿನ ಪೋನ್ ಮಾಡುತ್ತಿದ್ದರು. ಮಂಗಳವಾರ ರಾತ್ರಿಯವರೆಗೂ ಪೋನ್ ಬಾರದೆ ಇದ್ದಾಗ ನನಗೆ ಹೆದರಿಕೆಯಾಗಿತ್ತು ) ಎಂದು ಕಣ್ಣೀರಾದರು.
ಅನೂಪ್ ಪೂಜಾರಿ ಅವರ ಪತ್ನಿ ಹಾಗೂ ಕುಟುಂಬಿಕರನ್ನು ಭೇಟಿ ಮಾಡಿ ಸಾಂತ್ವನ ತಿಳಿಸಿದ ಉಡುಪಿ ಶಾಸಕ ಯಶಪಾಲ್ ಸುವರ್ಣ ತಮ್ಮ ವಯಕ್ತಿಕ 1 ಲಕ್ಷ ರು. ಚೆಕ್ ನೀಡಿ ಅನೂಪ್ ಅವರ ಪುತ್ರಿ ಇಶಾನಿ ಅವರ ಹೆಸರಿನಲ್ಲಿ ನಿಖರ ಠೇವಣೆ ಇಡುವಂತೆ ಹೇಳಿದರು.
ಸ್ಥಳಿಯ ಪ್ರಮುಖರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಬಿ.ಹಿರಿಯಣ್ಣ ಚಾತ್ರಬೆಟ್ಟು, ಮಲ್ಯಾಡಿ ಶಿವರಾಮ್ ಶೆಟ್ಟಿ, ಅಶೋಕ ಪೂಜಾರಿ ಬೀಜಾಡಿ, ಪ್ರಕಾಶ್ ಪೂಜಾರಿ ಬೀಜಾಡಿ, ಅವಿನಾಶ್ ಉಳ್ತೂರು, ಶೇಖರ ಚಾತ್ರಬೆಟ್ಟು, ಸದಾನಂದ ಶೆಟ್ಟಿ ಕೆದೂರು, ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಸುರೇಂದ್ರ ಶೆಟ್ಟಿ ಸಹನಾ, ಯಾಸಿನ್ ಹೆಮ್ಮಾಡಿ, ಅನಿಲ್ ಚಾತ್ರಬೆಟ್ಟು, ಜಸಿಂತಾ ಡಿಮೆಲ್ಲೋ, ಎನ್ಎಸ್ಐಸ್‌ಯು ಮುಖಂಡ ಸಯ್ಯದ್ ಫುರ್ಖಾನ್ ಮುಂತಾದವರಿದ್ದರು.