ಬಸವನಬಾಗೇವಾಡಿ : ದೇವಸ್ಥಾನಕ್ಕೆ ಭೇಟಿ ನೀಡಿ ಬಸವೇಶ್ವರ ದರ್ಶನ ಪಡೆದ ಸ್ಪೀಕರ್‌ ಯು.ಟಿ.ಖಾದರ್

KannadaprabhaNewsNetwork |  
Published : Sep 30, 2024, 01:27 AM ISTUpdated : Sep 30, 2024, 12:31 PM IST
೨೯ಬಿಎಸ್ವಿ೦೨- ಬಸವನಬಾಗೇವಾಡಿಯ ಆರಾಧ್ಯದೈವ ಮೂಲನಂದೀಶ್ವರ(ಬಸವೇಶ್ವರ) ದೇವರ ದರ್ಶನವನ್ನು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಶನಿವಾರ ಪಡೆದುಕೊಂಡರು. | Kannada Prabha

ಸಾರಾಂಶ

ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಬಸವನಬಾಗೇವಾಡಿಯಲ್ಲಿ ನಡೆದ ಸೌಹಾರ್ದ ಸಮಾವೇಶದಲ್ಲಿ ಭಾಗವಹಿಸಿ, ಪಟ್ಟಣದ ಮೂಲನಂದೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ಬಸವನಬಾಗೇವಾಡಿ: ಪಟ್ಟಣದ ಬಸವ ಭವನದಲ್ಲಿ ತಾಜ್ ಸೋಸಿಯಲ್ ಗ್ರುಫ್ ಹಮ್ಮಿಕೊಂಡಿದ್ದ ಸೌಹಾರ್ದ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ್ದ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ(ಬಸವೇಶ್ವರ) ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.

 ಈ ಸಂದರ್ಭದಲ್ಲಿ ನಂದಿ ಸಕ್ಕರೆ ಕಾರ್ಖಾನೆ ನಿರ್ದೇಶಕ ಸತ್ಯಜೀತ್ ಪಾಟೀಲ, ಕೆಪಿಸಿಸಿ ವಕ್ತಾರ ನಿಕಿತರಾಜ್ ಮೌರ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಐ.ಸಿ.ಪಟ್ಟಣಶೆಟ್ಟಿ, ಎಪಿಎಂಸಿ ಮಾಜಿ ಅಧ್ಯಕ್ಷ ಶೇಖರ ಗೊಳಸಂಗಿ, ಬಸವೇಶ್ವರ ಸೇವಾ ಸಮಿತಿ ಉಪಾಧ್ಯಕ್ಷ ಬಸವರಾಜ ಹಾರಿವಾಳ, ರಾಷ್ಟ್ರೀಯ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ಪರಶುರಾಮ ಜಮಖಂಡಿ, ಪುರಸಭೆ ಸದಸ್ಯರಾದ ಜಗದೇವಿ ಗುಂಡಳ್ಳಿ, ಪ್ರವೀಣ ಪೂಜಾರಿ, ಮುಖಂಡರಾದ ಕಮಲಸಾಬ ಕೊರಬು, ಜಟ್ಟಿಂಗರಾಯ ಮಾಲಗಾರ, ಎಂ.ಜಿ.ಆದಿಗೊಂಡ, ಸಂಜೀವ ಕಲ್ಯಾಣಿ, ಶರಣಪ್ಪ ಬೆಲ್ಲದ, ರಮಜಾನ ಹೆಬ್ಬಾಳ, ಭದ್ರು ಮಣ್ಣೂರ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ