ಕನ್ನಡಪ್ರಭ ವಾರ್ತೆ ಕಾರವಾರ
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಮತಗಟ್ಟಿ ಅಧಿಕಾರಿಗಳು ಪ್ರಿ ಫಿಲ್ಡ್ ಎನ್ಯೂಮರೇಷನ್ ಫಾರ್ಮ್‌ಗಳನ್ನು ನೀಡಲು ಒಂದು ಬಾರಿ ಮತ್ತು ಭರ್ತಿ ಮಾಡಿದ ಅರ್ಜಿಗಳನ್ನು ಸಂಗ್ರಹಿಸಲು ಮೂರು ಬಾರಿ ಮನೆಗೆ ಭೇಟಿ ನೀಡಲಿದ್ದು, ಬಿಎಲ್‌ಒಗಳು ತಮ್ಮ ಮನೆಗೆ ಬಂದಾಗ ಫಾರ್ಮ್‌ಗಳನ್ನು ಭರ್ತಿ ಮಾಡಿ ಅವರಿಗೆ ಮರಳಿ ನೀಡುವುದು ಅತ್ಯಂತ ಕಡ್ಡಾಯವಾಗಿದೆ. ಫಾರ್ಮ್‌ನ ಮರಳಿ ನೀಡದಿದ್ದರೆ, ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗುವುದಿಲ್ಲ. ಎರಡು ಫಾರ್ಮ್ಗಳಲ್ಲಿ ಒಂದನ್ನು ಬಿಎಲ್‌ಒಗೆ ನೀಡಿ, ಮತ್ತೊಂದನ್ನು ಸಾರ್ವಜನಿಕರು ತಮ್ಮ ರೆಫರೆನ್ಸಾಗಿ ಇಟ್ಟುಕೊಳ್ಳಬಹುದು. ಪ್ರಿ-ಫಿಲ್ಡ್ ಅರ್ಜಿಯಲ್ಲಿ ಮತದಾರರ ಹೆಸರು, ಎಪಿಕ್ ಸಂಖ್ಯೆ, ವಿಳಾಸ, ಭಾಗದ ಸಂಖ್ಯೆ, ಕ್ರಮ ಸಂಖ್ಯೆ ಹಾಗೂ ಪ್ರಸ್ತುತ ಚಾಲ್ತಿಯಲ್ಲಿರುವ ಫೋಟೋ ಮುದ್ರಿತವಾಗಿದ್ದು, ಈ ಎರಡು ಎನ್ಯುಮರೇಷನ್ ಪ್ರತಿಗಳಿಗೆ ಬಿ.ಎಲ್.ಓ ಮತ್ತು ಮತದಾರರು ಅಥವಾ ಅವರ ಕುಟುಂಬದ ಸದಸ್ಯರು ಕಡ್ಡಾಯವಾಗಿ ಸಹಿ ಮಾಡಬೇಕಾಗುತ್ತದೆ ಹಾಗೂ ತಮ್ಮ ಇತ್ತೀಚಿನ ಕಲರ್ ಭಾವಚಿತ್ರವನ್ನು ನೀಡಬೇಕು. ಎನ್ಯುಮರೇಷನ್ ಫಾರಂ ಜೊತೆಯಲ್ಲಿ ಯಾವುದೇ ದಾಖಲೆಗಳನ್ನು ನೀಡುವ ಅಗತ್ಯವಿಲ್ಲ ಎಂದರು.ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕಾಗಿ ಜಿಲ್ಲೆಯಲ್ಲಿ 6 ಮತದಾರರ ನೋಂದಣಾಧಿಕಾರಿಗಳು, 12 ಸಹಾಯಕ ಮತದಾರರ ನೋಂದಣಾಧಿಕಾರಿಗಳು, 1,445 ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿ.ಎಲ್.ಓ) ಹಾಗೂ 144 ಬಿ.ಎಲ್.ಓ ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಅಲ್ಲದೇ ಸದರಿ ಪ್ರಕ್ರಿಯೆಗೆ ಜಿಲ್ಲಾ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು, ವಿಧಾನಸಭಾ ಕ್ಷೇತ್ರವಾರು ನೋಡಲ್ ಅಧಿಕಾರಿಗಳನ್ನು ಹಾಗೂ ಹೋಬಳಿ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.ಈಗಾಗಲೇ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು ಇದುವರೆಗೆ ಬೂತ್ ಮಟ್ಟದ 2,822 ಏಜೆಂಟರನ್ನು ನೇಮಕ ಮಾಡಿರುತ್ತಾರೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 12,30,016 ಮತದಾರರಿದ್ದು, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ನಡೆಯುತ್ತಿದ್ದು , ಪೂರ್ವ ತಯಾರಿಗಾಗಿ ಮತದಾರರ ವಿವರಗಳನ್ನು ಹೋಲಿಸಿ ಶೇ.93.47 (ಮ್ಯಾಫಿಂಗ್ ಮಾಡಿದ್ದು) ಖಚಿತಪಡಿಸಿಕೊಳ್ಳಲಾಗಿದೆ. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಆರಂಭವಾಗುವವರೆಗೆ ಮ್ಯಾಪಿಂಗ್ ಪ್ರಕ್ರಿಯೆ ಮುಂದುವರೆಯಲಿದೆ ಎಂದರು.ಕರಡು ಮತದಾರರ ಪಟ್ಟಿಯನ್ನು ಆ. 5ರಂದು ಪ್ರಕಟಿಸಲಿದ್ದು, ಸೆ. 4ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಬಹುದು. ಅ. 3 ರವರೆಗೆ ಸೂಚನೆ/ಹಕ್ಕು ಮತ್ತು ಆಕ್ಷೇಪಣೆಗಳನ್ನು ವಿಲೇವಾರಿ ಮಾಡಿ, ಅ. 7 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದರು.ಭಾರತದ ನಾಗರಿಕರಾಗಿರುವ ಮತ್ತು ಅರ್ಹತಾ ದಿನಾಂಕಕ್ಕೆ ಹದಿನೆಂಟು ವರ್ಷ ಪೂರೈಸಿರುವ ಮತ್ತು ಯಾವುದೇ ಕಾನೂನಿನ ಅಡಿಯಲ್ಲಿ ಅನರ್ಹಗೊಳಿಸದೇ ಇರುವ ಪ್ರತಿಯೊಬ್ಬ ವ್ಯಕ್ತಿಯು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಅರ್ಹನಾಗಿದ್ದು, ಅರ್ಹ ನಾಗರಿಕರು ಮತದಾರರ ಪಟ್ಟಿಯಿಂದ ಕೈಬಿಟ್ಟುಹೋಗದಂತೆ ಜಾಗೃತಿ ವಹಿಸಲಾಗುವುದು. ಸಾರ್ವಜನಿಕರಿಗೆ ಎನ್ಯುಮರೇಷನ್ ಫಾರಂ ಭರ್ತಿ ಮಾಡುವುದು ಸೇರಿದಂತೆ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಕುರಿತಂತೆ ಯಾವುದೇ ಗೊಂದಲಗಳಿದ್ದರೆ ತಮ್ಮ ಮತಗಟ್ಟೆ ವ್ಯಾಪ್ತಿಯ ಬಿ.ಎಲ್.ಓ ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಇದ್ದರು.