ಶ್ರೀಚಾಮುಂಡೇಶ್ವರಿ, ನಿಮಿಷಾಂಬ, ಮಹಾಕಾಳಿ ದೇವರುಗಳಿಗೆ ವಿಶೇಷ ಅಲಂಕಾರ, ಪೂಜೆ

KannadaprabhaNewsNetwork |  
Published : Jul 18, 2026, 12:30 AM IST
17ಕೆಎಂಎನ್ ಡಿ26,27  | Kannada Prabha

ಸಾರಾಂಶ

ಪ್ರಸಿದ್ಧ ಗಂಜಾಂನ ಶ್ರೀನಿಮಿಷಾಂಭಾ ದೇವಾಲಯದಲ್ಲಿ ದೇವಾಲಯದ ಮುಖ್ಯ ಅರ್ಚಕ ಸೂರ್ಯನಾರಾಯನಭಟ್ ನೇತೃತ್ವದಲ್ಲಿ ವಿಶೇಷ ಅಲಂಕಾರದೊಂದಿಗೆ ಪೂಜೆಗಳ ನೆರವೇರಿಸಲಾಗಿತ್ತು. ಸಾವಿರಾರು ಮಂದಿ ವಿವಿಧೆಡೆಯಿಂದ ಭಕ್ತರು ಆಗಮಿಸಿ ಸರತಿ ಸಾಲಿನಿಲ್ಲಿ ನಿಂತು ದೇವಿ ದರ್ಶನ ಪಡೆದರು. ಬಂದ ಭಕ್ತರಿಗೆ ಮಹಾ ಮಂಗಳಾರತಿ, ತೀರ್ಥ- ಪ್ರಸಾದವನ್ನು ನೀಡಿ ದೇವಾಲಯಕ್ಕೆ ಬಂದ ಭಕ್ತರೆಲ್ಲರಿಗೂ ವಿಶೆಷ ಸಿಹಿಯೊಂದಿಗೆ ಅನ್ನ ಸಂತರ್ಪಣೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಆಷಾಢ ಮಾಸದ ಮೊದಲನೇ ಶುಕ್ರವಾರದ ಪ್ರಯುಕ್ತ ಪಟ್ಟಣದ ಶ್ರೀ ಚಾಮುಂಡೇಶ್ವರಿ ಅಮ್ಮನವರಿಗೆ ಮಂಗಳ ದ್ರವ್ಯ ಸಹಿತ ಪಂಚಾಮೃತ ಅಭಿಷೇಕ ನಡೆಸಿ ವಿಶೇಷವಾಗಿ ಶಾಕಾಂಬರ ಅಲಂಕಾರ ಮಾಡಲಾಯಿತು.

ದೇವಾಲಯದ ಮುಖ್ಯ ಅರ್ಚಕ ಲಕ್ಷ್ಮೀಶ್ ಅವರ ತಂಡ ಗುರುವಾರ ರಾತ್ರಿಯಿಂದಲೇ ದೇವಾಲಯದಲ್ಲಿ ವಿವಿಧ ಬಗೆಯ ಹೂಗಳಿಂದ ಗರ್ಭ ಗುಡಿ ಸೇರಿದಂತೆ ದೇವಿಗೆ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು.

ದೇವಾಲಯದ ಪಕ್ಕದಲ್ಲಿ ಹೋಮ, ಹವನಗಳ ನಡೆಸಿ ಶುಕ್ರವಾರ ಲೋಕ ಕಲ್ಯಾಣಾರ್ಥ ಪ್ರಾರ್ಥಿಸಿದರು. ಪಟ್ಟಣ ಮಾತ್ರವಲ್ಲದೆ ಅಕ್ಕ ಪಕ್ಕದ ಗ್ರಾಮಗಳಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಕ್ಕೆ ಆಗಮಿಸಿ ತಾಯಿ ಚಾಮುಂಡೇಶ್ವರಿ ದರ್ಶನ ಮಾಡಿ ಪುನೀತರಾದರು. ಬಂದ ಭಕ್ತರಿಗೆ ಮಂಗಳಾರತಿ, ತೀರ್ಥ, ಪ್ರಸಾದ ವಿತರಿಸಲಾಯಿತು.

ಪ್ರಸಿದ್ಧ ಗಂಜಾಂನ ಶ್ರೀನಿಮಿಷಾಂಭಾ ದೇವಾಲಯದಲ್ಲಿ ದೇವಾಲಯದ ಮುಖ್ಯ ಅರ್ಚಕ ಸೂರ್ಯನಾರಾಯನಭಟ್ ನೇತೃತ್ವದಲ್ಲಿ ವಿಶೇಷ ಅಲಂಕಾರದೊಂದಿಗೆ ಪೂಜೆಗಳ ನೆರವೇರಿಸಲಾಗಿತ್ತು. ಸಾವಿರಾರು ಮಂದಿ ವಿವಿಧೆಡೆಯಿಂದ ಭಕ್ತರು ಆಗಮಿಸಿ ಸರತಿ ಸಾಲಿನಿಲ್ಲಿ ನಿಂತು ದೇವಿ ದರ್ಶನ ಪಡೆದರು. ಬಂದ ಭಕ್ತರಿಗೆ ಮಹಾ ಮಂಗಳಾರತಿ, ತೀರ್ಥ- ಪ್ರಸಾದವನ್ನು ನೀಡಿ ದೇವಾಲಯಕ್ಕೆ ಬಂದ ಭಕ್ತರೆಲ್ಲರಿಗೂ ವಿಶೆಷ ಸಿಹಿಯೊಂದಿಗೆ ಅನ್ನ ಸಂತರ್ಪಣೆ ನಡೆಸಲಾಯಿತು.

ಪಟ್ಟಣದ ಲಕ್ಷ್ಮಿದೇವಿ ದೇವಾಲಯ, ತಾಲೂಕಿನ ಟಿ.ಎಂ.ಹೊಸೂರು ಗೇಟ್ ಬಳಿಯ ಮಹಾ ಕಾಳಿ ದೇವಾಲಯದಲ್ಲೂ ಆಷಾಢ ಮಾಸದ ಮೊದಲನೇ ಶುಕ್ರವಾರದ ವಿಶೇಷ ಪೂಜೆಗಳು ಜರುಗಿದವು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಳ್ವಾಸ್‌ನ 21 ವಿದ್ಯಾರ್ಥಿಗಳಿಗೆ 99 ಪರ್ಸಂಟೈಲ್‌ಗಿಂತ ಅಧಿಕ ಅಂಕ
ನೀಟ್ ಮರುಪರೀಕ್ಷೆ ರಿಸಲ್ಟ್‌ ಬಗ್ಗೆ ವಿದ್ಯಾರ್ಥಿಗಳ ಅತೃಪ್ತಿ