₹200 ಕೋಟಿ ವೆಚ್ಚದಲ್ಲಿ ಜಲ ಸಂರಕ್ಷಣೆಗೆ ಕ್ರಮ: ಡಾ. ಅಜಯ್ ಸಿಂಗ್

KannadaprabhaNewsNetwork |  
Published : Nov 28, 2026, 01:30 AM IST
ಫೋಟೋ- ಸಿಂಗ್‌ 1 2 | Kannada Prabha

ಸಾರಾಂಶ

Special emphasis on rainwater conservation and groundwater recharge

-ಸ್ಮಾಲ್‌ ಕಿಕ್ಕರ್‌

-ಅಂತರ್ಜಲ ಮಟ್ಟ ವೃದ್ಧಿಸುವ ಉದ್ದೇಶ--

-ಮಳೆನೀರು ಸಂರಕ್ಷಣೆ, ಅಂತರ್ಜಲ ಮರುಪೂರಣಕ್ಕೆ ವಿಶೇಷ ಒತ್ತು । ಹಳ್ಳ ಪುನಶ್ಚೇತನ, ಕೆರೆಗಳ ಅಭಿವೃದ್ಧಿ

--

ಕನ್ನಡಪ್ರಭ ವಾರ್ತೆ ಕಲಬುರಗಿ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಲಭ್ಯವಿರುವ ಜಲಸಂಪನ್ಮೂಲವನ್ನು ಸಮರ್ಥವಾಗಿ ನಿರ್ವಹಿಸುವುದು, ಮಳೆನೀರನ್ನು ಸಂರಕ್ಷಿಸುವುದು ಹಾಗೂ ಅಂತರ್ಜಲ ಮಟ್ಟವನ್ನು ವೃದ್ಧಿಸುವ ಉದ್ದೇಶದಿಂದ ಶಿರಪುರ ಮಾದರಿಯಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಅನುದಾನದ ಅಡಿಯಲ್ಲಿ ₹200 ಕೋಟಿ ವೆಚ್ಚದ ಜಲ ಸಂರಕ್ಷಣಾ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಸಿಂಗ್‌ ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಶಿರಪುರ ಮಾದರಿಯಲ್ಲಿ ಸರಣಿ ಚೆಕ್‌ಡ್ಯಾಂಗಳ ನಿರ್ಮಾಣ, ಹಳ್ಳ ಮತ್ತು ನಾಲೆಗಳ ಆಳ ಹಾಗೂ ಅಗಲ ಹೆಚ್ಚಿಸುವುದು, ಅಂತರ್ಜಲ ಮರುಪೂರಣ ಘಟಕಗಳ ನಿರ್ಮಾಣ ಮತ್ತು ಕೆರೆಗಳ ಅಭಿವೃದ್ಧಿ, ವಿವಿಧ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದಿದ್ದಾರೆ.

ಮಳೆನೀರು ವ್ಯರ್ಥವಾಗಿ ಹರಿದುಹೋಗುವುದನ್ನು ತಡೆದು, ಸ್ಥಳೀಯವಾಗಿಯೇ ಸಂಗ್ರಹಿಸಿ ಭೂಮಿಯಲ್ಲಿ ಇಂಗುವಂತೆ ಮಾಡುವುದು ಶಿರಪುರ ಮಾದರಿಯ ಪ್ರಮುಖ ಉದ್ದೇಶ. ಇದರಿಂದ ಅಂತರ್ಜಲ ಮಟ್ಟ ವೃದ್ಧಿಯಾಗುವುದರ ಜೊತೆಗೆ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ ಎಂದಿದ್ದಾರೆ.

ಜಿಲ್ಲಾವಾರು ಅನುದಾನ: ಜಿಲ್ಲೆಗೆ ₹49.20 ಕೋಟಿ, ರಾಯಚೂರು ಜಿಲ್ಲೆಗೆ ₹ 38.80 ಕೋಟಿ, ಬಳ್ಳಾರಿ ಜಿಲ್ಲೆಗೆ ₹35 ಕೋಟಿ, ಯಾದಗಿರಿ, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳಿಗೆ ತಲಾ ₹21 ಕೋಟಿ ಮತ್ತು ಬೀದರ್ ಜಿಲ್ಲೆಗೆ ₹14 ಕೋಟಿ ಮೀಸಲಿಡಲಾಗಿದೆ. ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿ ತಲಾ ₹100 ಕೋಟಿ ಅನುದಾನ ನೀಡಿದ್ದು, ಒಟ್ಟು ₹200 ಕೋಟಿ ರು. ವೆಚ್ಚದಲ್ಲಿ ಕೈಗೊಳ್ಳಾಗುತ್ತಿರುವ ಕಾಮಗಾರಿಗಳನ್ನು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ.

ಶಿರಪುರ ಮಾದರಿಯಲ್ಲಿ ಹಳ್ಳ ಮತ್ತು ನಾಲೆಗಳಿಗೆ ಅಡ್ಡಲಾಗಿ ಸರಣಿ ಚೆಕ್‌ಡ್ಯಾಂಗಳನ್ನು ನಿರ್ಮಿಸುವುದರಿಂದ ಮಳೆನೀರು ವ್ಯರ್ಥವಾಗಿ ಹರಿದುಹೋಗುವುದನ್ನು ತಡೆದು, ಅಂತರ್ಜಲ ಮರುಪೂರಣಕ್ಕೆ ಹೆಚ್ಚಿನ ಅವಕಾಶ ಕಲ್ಪಿಸಬಹುದು. ಆಯಾ ಪ್ರದೇಶದ ಭೌಗೋಳಿಕ ಪರಿಸ್ಥಿತಿ, ಮಳೆಯ ಪ್ರಮಾಣ ಹಾಗೂ ನೀರಿನ ಲಭ್ಯತೆಯನ್ನು ಪರಿಗಣಿಸಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವ ಮೂಲಕ ಜಲಸಂರಕ್ಷಣೆಯಲ್ಲಿ ಸುಸ್ಥಿರ ಫಲಿತಾಂಶ ಸಾಧಿಸುವುದು ಇಲಾಖೆಯ ಉದ್ದೇಶ ಎಂದು ಅಜಯ್‌ ಸಿಂಗ್‌ ಹೇಳಿದ್ದಾರೆ.

---

...ಕೋಟ್‌...

ಕಲ್ಯಾಣ ಕರ್ನಾಟಕದಲ್ಲಿ ಬೀಳುವ ಮಳೆಯ ಪ್ರತಿಯೊಂದು ಹನಿಯನ್ನೂ ಸಮರ್ಥವಾಗಿ ಬಳಸಿಕೊಳ್ಳಬೇಕು. ಕೇವಲ ನೀರನ್ನು ಸಂಗ್ರಹಿಸುವುದಷ್ಟೇ ಗುರಿಯಲ್ಲ; ಅಂತರ್ಜಲವನ್ನು ಪುನಶ್ಚೇತನಗೊಳಿಸಿ ರೈತರಿಗೆ ದೀರ್ಘಕಾಲೀನ ಜಲ ಭದ್ರತೆಯನ್ನು ಒದಗಿಸುವುದು ಉದ್ದೇಶ.

– ಡಾ. ಅಜಯ್ ಧರ್ಮಸಿಂಗ್, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಳೆ 21 ಕುಲಕಸುಬುಗಳ 50 ಕುಟುಂಬಗಳಿಗೆ ಸನ್ಮಾನ
ಸಮಾಜದಲ್ಲಿದ್ದ ಜಾತಿ ವ್ಯವಸ್ಥೆ ವಿರುದ್ಧ ಸಮರ ಸಾರಿದ ಸಂತ