ಹರಿದು ಬರುತ್ತಿರುವ ಭಕ್ತ ಸಾಗರ । ಮೆಟ್ಟಿಲುದ್ದಕ್ಕೂ ಜೈ ಶ್ರೀ ರಾಮ್, ಜೈ ಹನುಮಾನ್ ಘೋಷಣೆಕನ್ನಡಪ್ರಭ ವಾರ್ತೆ ಗಂಗಾವತಿ
ಬೆಂಗಳೂರು, ಗದಗ ಮತ್ತು ಗಂಗಾವತಿ ನಗರದಿಂದ ಬಂದಿದ್ದ ವಿವಿಧ ಮಾದರಿಯ ಹೂಗಳಿಂದ ಅಲಂಕೃತಗೊಂಡಿದೆ. ಬೆಟ್ಟದ ಕೆಳಗೆ ಆಂಜನೇಯಸ್ವಾಮಿ ಪಾದುಕೆಗಳಿದ್ದು, ಇಲ್ಲಿರುವ ಮಂಟಪವನ್ನು ಹೂವುಗಳಿಂದ ಸಿಂಗರಿಸಲಾಗಿದೆ.
ದೇಗುಲದ ದ್ವಾರ ಬಾಗಿಲು ಮತ್ತು ಆವರಣ ಸುತ್ತಲು ಹೂಗಳ ಅಲಂಕಾರ ಜೊತೆಗೆ ಬಾಳೆ, ಕಂಬ ಮತ್ತು ಮಾವಿನ ತೋರಣಗಳಿಂದ ಸಿಂಗಾರಗೊಂಡಿದೆ. ಜತೆಗೆ ಭಗವಾಧ್ವಜ, ಬ್ಯಾನರ್ ರಾರಾಜಿಸುತ್ತವೆ.ಮೆಟ್ಟಿಲುದ್ದಕ್ಕೂ ಜೈ ಶ್ರೀ ರಾಮ್, ಜೈ ಹನುಮಾನ್ ಘೋಷಣೆ:
ಅಂಜನಾದ್ರಿ ಆಂಜನೇಯಸ್ವಾಮಿ ದೇಗುಲದಲ್ಲಿ ಡಿ.13ರಂದು ಹನುಮಮಾಲೆ ವಿಸರ್ಜನೆಗೆ ಸಕಲ ಸಿದ್ದತೆ ಮಾಡಲಾಗಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.ಅಂಜನಾದ್ರಿ ಬೆಟ್ಟದಲ್ಲಿ ಪಾಕಶಾಲೆ ವೀಕ್ಷಿಸಿ ಮಾತನಾಡಿದರು. ಈಗಾಗಲೇ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿದೆ. ಭಕ್ತರಿಗೆ ಎಲ್ಲಾ ರೀತಿಯ ಸೌಕರ್ಯ ಕಲ್ಪಿಸಲಾಗಿದೆ. ಸುಮಾರು 2 ಲಕ್ಷ ಭಕ್ತರು ಬರುವ ನಿರೀಕ್ಷೆ ಇದೆ. ಬರುವ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಗುತ್ತದೆ. ಸುಗಮವಾಗಿ ಭಕ್ತರು ದರ್ಶನ ಪಡೆಯುವ ವ್ಯವಸ್ಥೆ ಮಾಡಲಾಗಿದೆ ಎಂದರು.ಈ ಸಂದರ್ಭ ಸಹಾಯಕ ಆಯುಕ್ತ ಕ್ಯಾ. ಮಹೇಶ ಮಾಲಗಿತ್ತಿ, ತಹಸೀಲ್ದಾರ ವಿಶ್ವನಾಥ ಮುರುಡಿ, ನಗರಸಭೆ ಪೌರಾಯುಕ್ತ ವಿರೂಪಾಕ್ಷಮೂರ್ತಿ ಇದ್ದರು.