ಅರಸೀಕೆರೆ ತಾಲೂಕಿಗೆ ವಿಶೇಷ ಅನುದಾನ

KannadaprabhaNewsNetwork |  
Published : Feb 24, 2026, 02:15 AM IST
ಕೆ.ಎಂ. ಶಿವಲಿಂಗೇಗೌಡ: ಎತ್ತಿನಹೊಳೆ ಕಾಮಗಾರಿಗೆ ವೇಗ—ಅರಸೀಕೆರೆ ತಾಲೂಕಿಗೆ ₹200 ಕೋಟಿ ವಿಶೇಷ ಅನುದಾನ | Kannada Prabha

ಸಾರಾಂಶ

ಎತ್ತಿನಹೊಳೆ ಕಾಮಗಾರಿಯನ್ನು ಇನ್ನಷ್ಟು ಚುರುಕುಗೊಳಿಸುವ ಉದ್ದೇಶದಿಂದ ಸರ್ಕಾರದಿಂದ 200 ಕೋಟಿ ರು. ವಿಶೇಷ ಅನುದಾನವನ್ನು ತರಲಾಗಿದೆ ಎಂದು ರಾಜ್ಯ ಗೃಹ ಮಂಡಳಿಯ ಅಧ್ಯಕ್ಷರೂ ಆಗಿರುವ ಶಾಸಕ ಕೆ.ಎಂ. ಶಿವಲಿಂಗೇಗೌಡರು ಹೇಳಿದರು. ಬೋರನಕಪ್ಪಲು ಗ್ರಾಮದಿಂದ ಮಣ್ಣು ಮಾಕನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ 1 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆ ಮಧ್ಯ ಕರ್ನಾಟಕದ ಬಯಲು ಸೀಮೆಗೆ ವರದಾನವಾಗಿದ್ದು, ಶೀಘ್ರದಲ್ಲೇ ತಾಲೂಕಿನ ಕೆರೆ–ಕಟ್ಟೆಗಳಿಗೆ ನೇತ್ರಾವತಿ ನೀರು ಹರಿದು ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ತಾಲೂಕಿನ ಮೂಲಕ ಹಾದುಹೋಗುತ್ತಿರುವ ಎತ್ತಿನಹೊಳೆ ಕಾಮಗಾರಿಯನ್ನು ಇನ್ನಷ್ಟು ಚುರುಕುಗೊಳಿಸುವ ಉದ್ದೇಶದಿಂದ ಸರ್ಕಾರದಿಂದ 200 ಕೋಟಿ ರು. ವಿಶೇಷ ಅನುದಾನವನ್ನು ತರಲಾಗಿದೆ ಎಂದು ರಾಜ್ಯ ಗೃಹ ಮಂಡಳಿಯ ಅಧ್ಯಕ್ಷರೂ ಆಗಿರುವ ಶಾಸಕ ಕೆ.ಎಂ. ಶಿವಲಿಂಗೇಗೌಡರು ಹೇಳಿದರು. ಬೋರನಕಪ್ಪಲು ಗ್ರಾಮದಿಂದ ಮಣ್ಣು ಮಾಕನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ1 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆ ಮಧ್ಯ ಕರ್ನಾಟಕದ ಬಯಲು ಸೀಮೆಗೆ ವರದಾನವಾಗಿದ್ದು, ಶೀಘ್ರದಲ್ಲೇ ತಾಲೂಕಿನ ಕೆರೆ–ಕಟ್ಟೆಗಳಿಗೆ ನೇತ್ರಾವತಿ ನೀರು ಹರಿದು ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ರಾಜ್ಯದ ಪವಿತ್ರ ಧಾರ್ಮಿಕ ಯಾತ್ರಾ ಸ್ಥಳಗಳಲ್ಲಿ ಒಂದಾದ ಯಾದಪುರದ ಜೇನುಕಲ್ ಸಿದ್ದೇಶ್ವರ ಸ್ವಾಮಿ ಕ್ಷೇತ್ರಕ್ಕೆ ಸಂಪರ್ಕ ಹೊಂದಿರುವ ಬೋರನಕೊಪ್ಪಲು, ಹಾರನಹಳ್ಳಿ, ಮುರುಂಡಿ, ಸಂಕೋಡನಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಿಗೆ ಸುಸಜ್ಜಿತ ಸಂಪರ್ಕ ರಸ್ತೆಗಳನ್ನು ನಿರ್ಮಿಸಲಾಗಿದೆ. ಇದರಿಂದ ಯಾತ್ರಿಕರಿಗೆ ಹಾಗೂ ಸ್ಥಳೀಯರಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದರು.ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಗೀಜಿಹಳ್ಳಿ ಧರ್ಮಶೇಖರ್‌ ಮಾತನಾಡಿ, ಕ್ಷೇತ್ರದ ಜನತೆಯ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸದನದಲ್ಲಿ ಧ್ವನಿ ಎತ್ತಿದ ಜನಪರ ನಾಯಕರೆಂದು ಶಾಸಕರನ್ನು ಶ್ಲಾಘಿಸಿದರು. ಮುಂದಿನ ದಿನಗಳಲ್ಲಿ ಕ್ಷೇತ್ರದ ಅಭಿವೃದ್ಧಿ ಮತ್ತಷ್ಟು ವೇಗ ಪಡೆಯಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.ರೈತ ಸಂಘದ ಮುಖಂಡ ಬೋರನಕೊಪ್ಪಲು ಶಿವಲಿಂಗಪ್ಪ ಮಾತನಾಡಿದರು. ವೇದಿಕೆಯಲ್ಲಿ ಗೀಜಿಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಧರ್ಮೇಶ್ ಸೇರಿದಂತೆ ನಾಗರಾಜ್, ಬೈರೇಶ್, ಯಳವಾರೆ ಕೇಶವಣ್ಣ, ಬೋರನಕೊಪ್ಪಲು ಸ್ವಾಮಣ್ಣ, ರವಿ, ವೈ.ಕೆ. ದೇವರಾಜ್, ಗುತ್ತಿಗೆದಾರ ಜ್ಞಾನೇಶ್ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೇವರಾಯನದುರ್ಗದಲ್ಲಿ ರೋಪ್ ವೇ ನಿರ್ಮಾಣ
ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕ ಶಕ್ತಿ: ಎಚ್.ಎಂ.ರೇವಣ್ಣ