ಕರಾವಳಿ ಉತ್ಸವ ವಿಶೇಷ: ಹೆಲಿಕಾಪ್ಟರ್ ರೈಡ್‍ಗೆ ಚಾಲನೆ

KannadaprabhaNewsNetwork |  
Published : Dec 22, 2024, 01:31 AM IST
ಹೆಲಿಕಾಪ್ಟರ್‌ನಲ್ಲಿ ಕುಳಿತು ಸಂಚಾರ ನಡೆಸಿದ ಹರೇಕಳ ಹಾಜಬ್ಬ ಹಾಗೂ ಅಮೈ ಮಹಾಲಿಂಗ ನಾಯ್ಕ್‌. | Kannada Prabha

ಸಾರಾಂಶ

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಮಾತನಾಡಿ, ಕರಾವಳಿ ಉತ್ಸವವನ್ನು ಆಕರ್ಷಣೀಯವನ್ನಾಗಿಸಲು ಹೆಲಿಕಾಪ್ಟರ್ ಪ್ರಯಾಣದ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಹೆಲಿಕಾಪ್ಟರ್‌ನಲ್ಲಿ ಸಂಚರಿಸಿ ಮಂಗಳೂರು ನಗರವನ್ನು ವೈಮಾನಿಕವಾಗಿ ದರ್ಶನ ಮಾಡಿ ಹಾಗೂ ಕಡಲ ಕಿನಾರೆ ಸೌಂದರ್ಯವನ್ನು ವೀಕ್ಷಿಸಬಹುದಾಗಿದೆ ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಕರಾವಳಿ ಉತ್ಸವದಲ್ಲಿ ಇದೇ ಮೊದಲ ಬಾರಿಗೆ ಸಾರ್ವಜನಿಕರಿಗೆ ಹೆಲಿಕಾಪ್ಟರ್ ಸಂಚಾರ ಮಾಡುವ ಅವಕಾಶ ಒದಗಿಸಲಾಗಿದ್ದು, ಇದಕ್ಕೆ ಶನಿವಾರ ಪದ್ಮಶ್ರೀ ಪುರಸ್ಕೃತರಾದ ಹರೇಕಳ ಹಾಜಬ್ಬ ಮತ್ತು ಅಮೈ ಮಹಾಲಿಂಗ ನಾಯ್ಕ್‌ ಜಂಟಿಯಾಗಿ ಚಾಲನೆ ನೀಡಿದರು. ನಗರದ ಮೇರಿಹಿಲ್ ಹೆಲಿಪ್ಯಾಡ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹರೇಕಳ ಹಾಜಬ್ಬ, ಅಮೈ ಮಹಾಲಿಂಗ ನಾಯ್ಕ್‌ ಅವರು ಹೆಲಿಕಾಪ್ಟರ್‌ನಲ್ಲಿ ಸಂಚರಿಸುವ ಮೂಲಕ ಚಾಲನೆ ನೀಡಿದರು.ಈ ಸಂದರ್ಭ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್ ಕೆ., ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್, ಅರಣ್ಯ ಸಂರಕ್ಷಣಾಧಿಕಾರಿ ಆಂಟೋನಿ ಮರಿಯಪ್ಪ ಮತ್ತಿತರರು ಉಪಸ್ಥಿತರಿದ್ದು, ಹೆಲಿಕಾಪ್ಟರ್‌ನಲ್ಲಿ ಸಂಚರಿಸಿದರು.

ಬಳಿಕ ಮಾತನಾಡಿದ ಹರೇಕಳ ಹಾಜಬ್ಬ ಮತ್ತು ಮಹಾಲಿಂಗ ನಾಯ್ಕ್‌, ಕರಾವಳಿ ಉತ್ಸವದ ಸೊಬಗಿಗೆ ಸಾರ್ವಜನಿಕರಿಗೆ ಹೆಲಿಕಾಪ್ಟರ್ ಸಂಚಾರ ಆರಂಭಿಸಿರುವುದು ಶ್ಲಾಘನೀಯ ಎಂದು ಹೇಳಿದರು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಮಾತನಾಡಿ, ಕರಾವಳಿ ಉತ್ಸವವನ್ನು ಆಕರ್ಷಣೀಯವನ್ನಾಗಿಸಲು ಹೆಲಿಕಾಪ್ಟರ್ ಪ್ರಯಾಣದ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಹೆಲಿಕಾಪ್ಟರ್‌ನಲ್ಲಿ ಸಂಚರಿಸಿ ಮಂಗಳೂರು ನಗರವನ್ನು ವೈಮಾನಿಕವಾಗಿ ದರ್ಶನ ಮಾಡಿ ಹಾಗೂ ಕಡಲ ಕಿನಾರೆ ಸೌಂದರ್ಯವನ್ನು ವೀಕ್ಷಿಸಬಹುದಾಗಿದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಹೆಲಿಟೂರಿಸಂ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಇದು ಹೆಚ್ಚು ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.

21ಹೆಲಿ1,2

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡ್ರಗ್ಸ್‌ ವಿರುದ್ಧ ಸಿಎಂ ತವರಿಂದಲೇ ಹೋರಾಟ : ವಿಜಯೇಂದ್ರ
ಚಿಕ್ಕಮಗಳೂರು ಗಿರಿಧಾಮಗಳಲ್ಲಿ ಪ್ರವಾಸಿಗರ ಕಾರುಬಾರು