ಕುಂದಾಪುರ ; ಇಲ್ಲಿನ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಂಬಿಎ ವಿಭಾಗದ ವತಿಯಿಂದ ದ್ವಿತೀಯ ವರ್ಷದ ಎಂಬಿಎ ವಿದ್ಯಾರ್ಥಿಗಳಿಗೆ “ಪದವಿಯನ್ನು ಮೀರಿ ಭವಿಷ್ಯದ ನಾಯಕರಿಂದ ಕಾರ್ಪೊರೇಟ್ ಜಗತ್ತು ನಿರೀಕ್ಷಿಸುವ ಗುಣಗಳು” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸಂಸ್ಥೆಯ ಪ್ರಾಂಶುಪಾಲರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಕಾರ್ಯಕ್ರಮದ ಮಹತ್ವದ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರಿನ ಪ್ರೊಜಿನಿ ಟೆಕ್‌ನ ನಿರ್ದೇಶಕ ದಯಾನಂದ ಶೆಟ್ಟಿ ಅವರು ಉಪನ್ಯಾಸ ನೀಡಿ, ಇಂದಿನ ಕಾರ್ಪೊರೇಟ್ ಜಗತ್ತಿನಲ್ಲಿ ಭವಿಷ್ಯದ ನಾಯಕರು ಹೊಂದಿರಬೇಕಾದ ಕೌಶಲ್ಯಗಳು, ನಾಯಕತ್ವದ ಗುಣಗಳು, ಸಂವಹನ ಕೌಶಲ್ಯ, ತಂಡದೊಂದಿಗೆ ಕಾರ್ಯನಿರ್ವಹಿಸುವ ಸಾಮರ್ಥ್ಯ ಹಾಗೂ ಪದವಿಯ ಜೊತೆಗೆ ಪ್ರಾಯೋಗಿಕ ಜ್ಞಾನ ಮತ್ತು ವೈಯಕ್ತಿಕ ಕೌಶಲ್ಯಗಳನ್ನು ಬೆಳೆಸಿಕೊಳ್ಳುವ ಮಹತ್ವದ ಕುರಿತು ಮಾಹಿತಿ ನೀಡಿದರು.
ಸಂಸ್ಥೆಯ ಪ್ರಾಂಶುಪಾಲ ಡಾ. ರಾಮಕೃಷ್ಣ ಹೆಗ್ಡೆ, ಎಂಬಿಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರಾ ದಿನೇಶ್ ಪೂಜಾರಿ, ವಿಭಾಗದ ಎಲ್ಲಾ ಬೋಧಕ ವರ್ಗದವರು ಹಾಗೂ ದ್ವಿತೀಯ ವರ್ಷದ ಎಂಬಿಎ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.