ಜ.24ರಂದು ವಿಶೇಷ ಲೋಕ ಅದಾಲತ್

KannadaprabhaNewsNetwork |  
Published : Jan 02, 2026, 04:15 AM IST
 | Kannada Prabha

ಸಾರಾಂಶ

ಜಿಲ್ಲಾ ಕೇಂದ್ರ ಹಾಗೂ ಎಲ್ಲಾ ತಾಲೂಕು ಕೇಂದ್ರಗಳ ನ್ಯಾಯಾಲಯಗಳಲ್ಲಿ ಜನವರಿ 24ರಂದು ವಿಶೇಷ ಲೋಕ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ.ಎ ತಿಳಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಜಿಲ್ಲಾ ಕೇಂದ್ರ ಹಾಗೂ ಎಲ್ಲಾ ತಾಲೂಕು ಕೇಂದ್ರಗಳ ನ್ಯಾಯಾಲಯಗಳಲ್ಲಿ ಜನವರಿ 24ರಂದು ವಿಶೇಷ ಲೋಕ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ.ಎ ತಿಳಿಸಿದರು.

ನಗರದ ಜಿಲ್ಲಾ ನ್ಯಾಯಾಲಯ ಕಟ್ಟಡದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಎಲ್ಲ ಕಕ್ಷಿದಾರರ ಅನುಕೂಲವಾಗುವುದಕ್ಕಾಗಿ ವಿಶೇಷ ಲೋಕ ಅದಾಲತ್‌ ಹಮ್ಮಿಕೊಳ್ಳಲಾಗಿದೆ. ಅದಾಲತ್‍ನಲ್ಲಿ ರಾಜೀ ಸಂಧಾನಕ್ಕೆ ಒಳಪಡಬಹುದಾದ ಭೂ-ಸ್ವಾಧೀನ (ಎಲ್.ಪಿ.ಸಿ ರಾಜೀ ಸಂಧಾನದ ಮೂಲಕ ಇಪಿ) ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಪಕ್ಷಗಾರರಿಗೆ ಅವಕಾಶವಿರುವುದರಿಂದ ಎಲ್ಲ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ ಎಂದರು.

ಜಿಲ್ಲೆಯಲ್ಲಿ ನಡೆಯುವ ಲೋಕ ಅದಾಲತ್ ಕಾರ್ಯಕ್ರಮಗಳಲ್ಲಿ ವಿವಿಧ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಸುಮಾರು 2,89,479 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಿ ₹18,30,25,426 ಪರಿಹಾರ ಒದಗಿಸಲಾಗಿದೆ. ಇದರಿಂದ ಜಿಲ್ಲೆಯು ರಾಜಿ ಸಂಧಾನ ಮಾಡುವಲ್ಲಿ ರಾಜ್ಯಕ್ಕೆ ಸತತವಾಗಿ ಮೂರು ಸಲ 2ನೇ ಸ್ಥಾನ ಪಡೆದುಕೊಂಡಿದೆ. ಈ ಬಾರಿ ಜನವರಿ 24 ರಂದು ನಡೆಯುವ ವಿಶೇಷ ಲೋಕ ಅದಾಲತ್ ಕಾರ್ಯಕ್ರಮದ ಸದುಪಯೋಗ ಹೆಚ್ಚಿನ ಜನರಿಗೆ ಒದಗಿಸುವ ನಿಟ್ಟಿನಲ್ಲಿ ಈ ಕುರಿತು ವ್ಯಾಪಕವಾಗಿ ಜನರಲ್ಲಿ ತಿಳಿವಳಿಕೆ ಮೂಡಿಸುವಂತೆ ತಿಳಿಸಿದರು.

ನ್ಯಾಯಾಲಯಗಳಲಿ, ಬಾಕಿ ಇರುವ ಮಧ್ಯಸ್ಥಿಕೆಯ ಮೂಲಕ ರಾಜಿ ಆಗಬಹುದಾದ ಪ್ರಕರಣಗಳನ್ನು ಮಧ್ಯಸ್ಥಿಕೆ ಕೇಂದ್ರಕ್ಕೆ ಕಳುಹಿಸಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳನ್ನು ರಾಜೀ ಸಂಧಾನವಾಗಲು ಸಹಕರಿಸಲು ನ್ಯಾಯಾಲಯದ ಕಕ್ಷಿದಾರರಿಗೆ ಮತ್ತು ವಕೀಲರಿಗೆ ತಿಳಿಸಿ ಅದರ ಸದುಪಯೋಗ ಪಡೆದುಕೊಳ್ಳಲು ಅವರ ಕಕ್ಷಿದಾರರರಿಗೆ ತಿಳಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲೂಕು ಕಾನೂನು ಸೇವೆಗಳ ಸಮಿತಿ, ಇಂಡಿ, ಸಿಂದಗಿ, ಬಸವನ ಬಾಗೇವಾಡಿ, ಮುದ್ದೇಬಿಹಾಳ ಕಛೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಕರ್ನಾಟಕ ರಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದನ್ವಯ ಜಿಲ್ಲೆ ಮತ್ತು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ತಾಲೂಕುಗಳಲ್ಲಿ ಜ.1 ರಿಂದ 31ರ ವರೆಗೆ ರಸ್ತೆ ಸುರಕ್ಷತಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸಾರಿಗೆ ಇಲಾಖೆ, ಪೊಲೀಸ್, ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ, ವಕೀಲರ ಸಂಘ, ವಿಮಾ ಕಂಪನಿಗಳು ಮತ್ತು ಎನ್‍ಜಿಓಗಳ ಸಮನ್ವಯತೆಯೊಂದಿಗೆ ಜಿಲ್ಲೆಯ ವಿವಿಧ ಶಾಲೆ, ಕಾಲೇಜುಗಳು, ಸಾರ್ವಜನಿಕ ಖಾಸಗಿ ಸಮಸ್ಥೆಗಳು, ಸಮುದಾಯ ಕೇಂದ್ರಗಳು, ಆಸ್ಪತ್ರೆಗಳು, ಪೊಲೀಸ್ ಮತ್ತು ಸಂಚಾರ ಕಚೇರಿಗಳಲ್ಲಿ ರಸ್ತೆ ಸುರಕ್ಷಾ ಕ್ರಮಗಳ ಕುರಿತು ಸೂಕ್ತ ಜಾಗೃತಿ ಹಾಗೂ ತಿಳುವಳಿಕೆ ಮೂಡಿಸಲಾಗುವುದು ಎಂದು ಅವರು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಅರವಿಂದ ಹಾಗರಗಿ, ಜಿಲ್ಲಾ ಬಾರ್ ಅಸೋಸಿಯೇಶನ್ ಖಜಾಂಚಿ ನ್ಯಾಯವಾದಿ ಎಂ.ಎ.ಕಾಖಂಡಕಿ, ಜಿಲ್ಲಾ ನ್ಯಾಯವಾದಿ ಸಂಘದ ಕಾರ್ಯದರ್ಶಿ ಎಸ್.ಎಸ್.ಚೂರಿ ಇದ್ದರು.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ವಿಶೇಷ ಅಭಿಯಾನದ ಕುರಿತು ಈಗಾಗಲೇ ಸಭೆ ಜರುಗಿಸಿ, ಜಿಲ್ಲೆ ಮತ್ತು ಅದರ ಅಧೀನದಲಿ ಬರುವ ಎಲ್ಲ ನ್ಯಾಯಾಲಯಗಳಲ್ಲಿ ಬಾಕಿ ಇರುವ ಮಧ್ಯಸ್ಥಿಕೆಯ ಮೂಲಕ ರಾಜಿ ಆಗಬಹುದಾದ ಪ್ರಕರಣಗಳ ಕುರಿತು ಜನವರಿ 02 ರಿಂದ 90 ದಿನಗಳ ವರೆಗೆ 2.0 ಮಧ್ಯಸ್ಥಿಕೆಯ ಅಭಿಯಾನ ಹಮ್ಮಿಕೊಳ್ಳಲಾಗಿದೆ.

- ಹರೀಶ.ಎ, ನ್ಯಾಯಾಧೀಶರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಜಯಪುರ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೋಡೆತ್ತಿನ ರೈತರಿಗೆ ಪ್ರತಿ ತಿಂಗಳು 11 ಸಾವಿರ ನೀಡಿ
ದೇಶಕ್ಕೆ ವಿಶ್ವಕರ್ಮ ಸಮಾಜದ ಕೊಡುಗೆ ಅಪಾರ