ಕನ್ನಡಪ್ರಭ ವಾರ್ತೆ ನಾಪೋಕ್ಲು
ಮುಜರಾಯಿಗೆ ಒಳಪಟ್ಟ ಪಾಲೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಧಾರ್ಮಿಕ ದತ್ತಿ ಆಯುಕ್ತರ ಸುತ್ತೋಲೆಯಲ್ಲಿ ತಿಳಿಸಿರುವಂತೆ ವಿಶೇಷ ಪೂಜೆಯನ್ನು ಆಯೋಜಿಸಲಾಗಿತ್ತು.
ಭಯೋತ್ಪಾದಕರ ಶಿಬಿರಗಳ ಮೇಲೆ ‘ಆಪರೇಷನ್ ಸಿಂದೂರ’ ಹೆಸರಿನಲ್ಲಿ ನಡೆದ ಸೇನಾ ಕಾರ್ಯಾಚರಣೆಯು ಯಶಸ್ವಿಯಾಗಿ ನಿರ್ವಹಿಸಿದ ನಮ್ಮ ಭಾರತೀಯ ಹೆಮ್ಮೆಯ ಸೇನಾ ಯೋಧರಿಗೆ ಮತ್ತಷ್ಟು ಶಕ್ತಿಯನ್ನು ಶ್ರೀ ಮಹಾಲಿಂಗೇಶ್ವರ ಅನುಗ್ರಹಿಸಲಿ ಎಂದು ಕ್ಷೇತ್ರದ ಮುಖ್ಯ ಪುರೋಹಿತರಾದ ದೇವಿಪ್ರಸಾದ್ ಪ್ರಾರ್ಥನೆ ಹಾಗೂ ಸಂಕಲ್ಪ, ರುದ್ರಾಭಿಷೇಕ, ಮಹಾಪೂಜೆ ನೆರವೇರಿಸಿದರು.