ಧಾರವಾಡ: ಭಯೋತ್ಪಾದಕರನ್ನು ದಮನ ಮಾಡಿ ದೇಶದ ಶಾಂತಿಗೆ ಮುಂದಾಗುತ್ತಿರುವ ಹೆಮ್ಮೆಯ ದೇಶದ ಸೈನಿಕರಿಗೆ ಶಕ್ತಿ ತುಂಬಲು ಹಾಗೂ ಅವರ ಶ್ರೇಯಸ್ಸಿಗಾಗಿ ರಾಜ್ಯದ ಎಲ್ಲ ವಕ್ಫ್‌ಗೆ ಸೇರಿದ ಮಸೀದಿಗಳಲ್ಲಿ ಹಾಗೂ ಇತರೆ ಮಸೀದಿಗಳಲ್ಲಿ ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಹುಬ್ಬಳ್ಳಿಯಲ್ಲೂ ಪ್ರಾರ್ಥನೆ: ಭಾರತ ಮತ್ತು ಪಾಕಿಸ್ತಾನ ಮಧ್ಯೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿರುವ ಹಿನ್ನೆಲೆಯಲ್ಲಿ ನಗರದ ಎಲ್ಲ ಮಸೀದಿ ಹಾಗೂ ದರ್ಗಾಗಳಲ್ಲಿ ಶುಕ್ರವಾರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ಇಲ್ಲಿನ ಪತೇಶಾ ವಲಿ ಸೇರಿದಂತೆ ವಿವಿಧ ಮಸೀದಿ ಹಾಗೂ ದರ್ಗಾಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ವಕ್ಫ್ ಇಲಾಖೆಯಿಂದ ಪ್ರಾರ್ಥನೆ ಸಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಎಲ್ಲ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಗಿದೆ. ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಎ.ಎಂ. ಹಿಂಡಸಗೇರಿ, ಅಲ್ತಾಫ್ ಹಳ್ಳೂರ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.