ಕನ್ನಡಪ್ರಭ ವಾರ್ತೆ ಚಿಕ್ಕೋಡಿ
ಪಟ್ಟಣದ ಕೃಷಿ ಇಲಾಖೆಯ ಸಮಗ್ರ ಕೃಷಿ ಪದ್ಧತಿ ಶ್ರೇಷ್ಠತಾ ಕೇಂದ್ರ ನೂತನ ಕಟ್ಟಡದ ಉದ್ಘಾಟನೆ ಹಾಗೂ ಜಿಲ್ಲಾ ಮಟ್ಟದ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ದೊಡ್ಡದಾಗಿ ಹರಿದಿರುವ ಕೃಷ್ಣಾ ನದಿ ನೀರಿನ ಮೂಲವನ್ನು ಉಪಯೋಗ ಪಡಿಸಿಕೊಂಡು ಕ್ಷೇತ್ರದಲ್ಲಿ ನೀರಾವರಿ ಯೋಜನೆಗೆ ಒತ್ತು ನೀಡೋಣ. ನದಿ ದಂಡೆಯ ರೈತರ ಜಮೀನುಗಳು ಸವಳು-ಜವಳು ಕೂಡಿದ್ದರಿಂದ ಸವಳು ತೆಗೆಯಲು ₹ 10 ಕೋಟಿ ಅನುದಾನ ಮಂಜೂರು ಮಾಡಿಸುವ ಭರವಸೆ ನೀಡಿದರು.
ರಾಜ್ಯದಲ್ಲಿ ತೀವ್ರ ಬರ ಎದುರಾಗಿದೆ. ಮಳೆ ಇಲ್ಲದೆ ವಿದ್ಯುತ್ ಸಮಸ್ಯೆ ಎದುರಾಗುವುದು ಸಾಮಾನ್ಯ. ಈ ದಿಸೆಯಲ್ಲಿ ಸರ್ಕಾರದಿಂದ ಹೆಚ್ಚು ಸಬ್ಸಿಡಿ ಸಿಗುವ ಸೋಲಾರ ಪಂಪಸೆಟ್ ಅಳವಡಿಕೆಗೆ ರೈತರು ಮುಂದಾಗಬೇಕು ಎಂದರು.ಬೆಳಗಾವಿ ಕೃಷಿ ಜಂಟಿ ನಿರ್ದೇಶಕ ಎಚ್.ಡಿ.ಕೋಳೆಕರ ಮಾತನಾಡಿ, ಪ್ರಸ್ತುತ ಜಿಲ್ಲೆಯಲ್ಲಿ ಸೋಯಾಬೀನ್, ಶೇಂಗಾ, ಸೂರ್ಯಕಾಂತಿ ಹಾಗೂ ಕುಸುಬಿ ಬೆಳೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಸೋಯಾಬೀನ್ ಬೆಳೆ ಸುಮಾರು 1.10 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದು, ಪ್ರಸ್ತುತ ಸರಾಸರಿ 12 ರಿಂದ 13 ಕ್ವಿಂಟಲ್‌ವರೆಗೆ ಇಳುವರಿ ದೊರೆಯುತ್ತಿದೆ. ಇಳುವರಿ ಹೆಚ್ಚಿಸುವ ಉದ್ದೇಶದಿಂದ ರೈತರಿಗೆ ಅಗತ್ಯ ತಾಂತ್ರಿಕ ಮಾಹಿತಿ, ಉತ್ತಮ ಕೃಷಿ ಪದ್ಧತಿಗಳ ಕುರಿತು ತರಬೇತಿ ಹಾಗೂ ಪ್ರಾತ್ಯಕ್ಷಿಕೆಗಳನ್ನು ನೀಡಲಾಗುತ್ತಿದೆ. ಶೇಂಗಾ ಇಳುವರಿ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಸೂರ್ಯಕಾಂತಿ ಬೆಳೆಯನ್ನೂ ಹೆಚ್ಚಿನ ಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದು, ಉತ್ತಮ ತಳಿಗಳು ಹಾಗೂ ವೈಜ್ಞಾನಿಕ ಕೃಷಿ ಪದ್ಧತಿಗಳನ್ನು ರೈತರಿಗೆ ಪರಿಚಯಿಸುವ ಮೂಲಕ ಇಳುವರಿ ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ. ಸೂರ್ಯಕಾಂತಿ ಬೆಳೆಯಲ್ಲಿ ಕಂಡುಬರುವ ಪ್ರಮುಖ ರೋಗ-ಕೀಟಗಳ ನಿರ್ವಹಣೆ ಕುರಿತು ರೈತರಿಗೆ ಮಾರ್ಗದರ್ಶನ ನೀಡಲಾಗುತ್ತಿದೆ ಎಂದು ತಿಳಿಸಿದರು.