ತಾಲೂಕಿನ ಮುಳ್ಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ರಸ್ತೆ ಸುರಕ್ಷತೆ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ವಿಶೇಷ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ತಾಲೂಕಿನ ಮುಳ್ಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ರಸ್ತೆ ಸುರಕ್ಷತೆ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ವಿಶೇಷ ಕಾರ್ಯಕ್ರಮ ನಡೆಯಿತು. ಶನಿವಾರಸಂತೆ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಜಿ. ಕೃಷ್ಣರಾಜ್ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ನಿಯಮಗಳು, ಸಂಚಾರದ ಶಿಸ್ತು ಹಾಗೂ ಅಪಘಾತಗಳಿಂದ ದೂರವಿರುವ ಮಾರ್ಗಗಳು, ಅಪಘಾತದ ಸಂದರ್ಭದಲ್ಲಿ ನಾವೇ ಹೇಗೆ ವರ್ತಿಸಬೇಕು ಎಂಬ ಮಾಹಿತಿ ನೀಡಿದರು. ಪೊಲೀಸರಾದ ಎ.ಎನ್. ಹರ್ಷ ಹಾಗೂ ಡಿ.ಎಂ. ವೆಂಕಟೇಶ್ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಬಗ್ಗೆ ಮಾಹಿತಿ ನೀಡಿದರು. ಶಾಲೆಯ ಮುಖ್ಯೋಪಾಧ್ಯಾಯ ಸಿ.ಎಸ್. ಸತೀಶ್ ರಸ್ತೆ ಸುರಕ್ಷತಾ ಪ್ರತಿಜ್ಞಾವಿಧಿಯನ್ನು ಬೋಧಿಸಿ, ವಿದ್ಯಾರ್ಥಿಗಳಿಗೆ ನಿಯಮ ಪಾಲನೆಯ ಮಹತ್ವವನ್ನು ತಿಳಿಸಿಕೊಟ್ಟರು.ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಶಾಲಾ ಆವರಣದಲ್ಲೇ ಹೆದ್ದಾರಿಗಳ ಮಾದರಿ, ಟ್ರಾಫಿಕ್ ಸಿಗ್ನಲ್‌ಗಳು ವಿವಿಧ ವಾಹನಗಳು ಹಾಗೂ ರಸ್ತೆ ಬದಿಯಲ್ಲಿ ಕಾಣಸಿಗುವ ಪ್ರಮುಖ ಸಂಚಾರ ಚಿಹ್ನೆಗಳ ಮಾದರಿಗಳನ್ನು ನಿರ್ಮಿಸಿ, ಅವುಗಳ ಅರ್ಥ ಮತ್ತು ಉಪಯೋಗವನ್ನು ವಿದ್ಯಾರ್ಥಿಗಳಿಗೆ ವಿವರಿಸಲಾಯಿತು.
ವಿದ್ಯಾರ್ಥಿಗಳು ರಸ್ತೆ ಸುರಕ್ಷತೆಯ ಕುರಿತ ಗೀತೆಯನ್ನು ಹಾಡಿ, ನಾಟಕ ಹಾಗೂ ಅಣುಕು ಪ್ರದರ್ಶನಗಳನ್ನು ಮಾಡಿದರು. ಶಿಕ್ಷಕರಾದ ಜಾನ್ ಪಾವ್ಲ್ ಡಿಸೋಜ, ಶೀಲಾ ಹಾಗೂ ಕರಾಟೆ ಮತ್ತು ಯೋಗ ತರಬೇತಿ ಶಿಕ್ಷಕಿ ಸೀಮಾ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.