ಕನ್ನಡಪ್ರಭ ವಾರ್ತೆ ಹಾಸನ
ಶುಕ್ರವಾರ ಬೆಳಿಗ್ಗೆ ಸುಪ್ರಭಾತ ಸೇವೆ, ಅಭಿಷೇಕ, ೮ ಗಂಟೆಗೆ ಮಹಾಮಂಗಳಾರತಿ, ೯ಕ್ಕೆ ಮಾರುತಿ ಹೋಮ, ಮಧ್ಯಾಹ್ನ ೧೨ ಗಂಟೆಗೆ ಪೂರ್ಣಾಹುತಿ ಇದಾದ ನಂತರ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನೆರವೇರಿತು. ಮಧ್ಯಾಹ್ನ ೧೨:೩೦ಕ್ಕೆ ಸಾವಿರಾರು ಜನರಿಗೆ ಅನ್ನಸಂತರ್ಪಣೆ ನೆರವೇರಿಸಿದರು. ಸಂಜೆ ೭:೩೦ಕ್ಕೆ ಮಾರುತಿ ಉತ್ಸವ ನಗರದಲ್ಲಿ ಸಾಗಿತು. ರಾತ್ರಿ ೯:೩೦ಕ್ಕೆ ಮಹಾಮಂಗಳಾರತಿ ಹಾಗೂ ಲಾಲಿ ಕಾರ್ಯಕ್ರಮ ನೆರವೇರಿಸಲಾಯಿತು.
ಇದೇ ವೇಳೆ ದೇವಾಲಯದ ಅರ್ಚಕರಾದ ರಕ್ಷಿತ್ ಭಾರಧ್ವಜ್ ಮಾರುತಿ ಜಯಂತಿ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ನಗರದ ಶ್ರೀ ನೀರುಬಾಗಿಲು ಆಂಜನೇಯ ದೇವಸ್ಥಾನ ಹಾಗೂ ಜವರಾಯಪಟ್ಟಣದ ದೇವಸ್ಥಾನ ಸೇರಿದಂತೆ ವಿವಿಧ ಭಾಗಗಳಲ್ಲಿ ದೇವರಿಗೆ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.